ಶೂನ್ಯ ಬಂಡವಾಳದಲ್ಲಿ ಯೋಜನೆ ರೂಪಿಸಿ

•ಯೋಜನೆಗಳ ತಯಾರಿ ಎಂದರೆ ಕೇವಲ ಅನುದಾನ ಹಂಚಿಕೆಯಲ್ಲ

Team Udayavani, Jul 8, 2019, 10:52 AM IST

haveri-tdy-2..

ಹಾವೇರಿ: ಜಿಪಂ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಕಾರ್ಯಾಗಾರ ಉದ್ಘಾಟಿಸಿದರು.

ಹಾವೇರಿ: ಯೋಜನೆಗಳ ತಯಾರಿ ಎಂದರೆ ಸರ್ಕಾರದಿಂದ ಬಿಡುಗಡೆಯಾದ ಅನುದಾನದ ಹಂಚಿಕೆಯಲ್ಲ, ಕಡಿಮೆ ವೆಚ್ಚ, ಶೂನ್ಯ ಬಂಡವಾಳದ ಯೋಜನೆಗಳು ಜಾರಿಯಾಗಬೇಕು. ಇದಕ್ಕೆ ಜನರ ಸಹಭಾಗಿತ್ವ, ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ಕೇರಳ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ವಿಜಯಾನಂದ ಹೇಳಿದರು.

ಕಾಗಿನೆಲೆ ಕನಕ ಕಲಾಭವನದಲ್ಲಿ ಜಿಲ್ಲಾ ಪಂಚಾಯಿತಿ, ಬ್ಯಾಡಗಿ ತಾಲೂಕು ಪಂಚಾಯಿತಿ ಹಾಗೂ ಕಾಗಿನೆಲೆ ಗ್ರಾಮ ಪಂಚಾಯತಿ ಸಹಯೋಗದಲ್ಲಿ ‘ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌’ ವಿಷಯ ಕುರಿತು ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರಿಗೆ ಹಾಗೂ ಅಧಿಕಾರಿಗಳಿಗೆ ಆಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.

ಜನಸಂಖ್ಯೆ ಮತ್ತು ಸಂಪನ್ಮೂಲಗಳನ್ನು ಸಮತೋಲನಗೊಳಿಸಿ ಆರೋಗ್ಯ, ಶಿಕ್ಷಣ, ಮಾನವ ಸಂಪನ್ಮೂಲಗಳ ಬೆಳವಣಿಗೆ ಹಾಗೂ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಪೂರಕವಾಗಿ ಕ್ಷೇತ್ರವಾರು ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದ ವರೆಗೆ ಯೋಜನೆಗಳನ್ನು ರೂಪಿಸಬೇಕು ಎಂದರು.

ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಕಟ್ಟಡಗಳಲ್ಲ. ಸರ್ಕಾರ ನೀಡಿದ ಅನುದಾನವನ್ನು ನಿರ್ದಿಷ್ಟ ಕ್ಷೇತ್ರಗಳಿಗೆ ಹಂಚಿಕೆ ಮಾಡಿ ವೆಚ್ಚ ಮಾಡುವುದೂ ಅಲ್ಲ. ಯೋಜನೆಯ ಸಮರ್ಪಕ ಅನುಷ್ಠಾನ ಹಾಗೂ ಯೋಜನಾ ವೆಚ್ಚ ತಗ್ಗಿಸಬೇಕು. ಜನರ ವಿವಿಧ ಕ್ಷೇತ್ರಗಳ ತಜ್ಞರ ಸಲಹೆಗಳನ್ನು ಪಡೆದು ಜನಸಹಭಾಗಿತ್ವದ ಸಮಗ್ರ ಜನರ ಅಭಿವೃದ್ಧಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲು ಮುಂದಾಗಬೇಕು. ಜನರ ಅಗತ್ಯತೆ, ಅವಶ್ಯಕತೆಗಳನ್ನು ಅವರ ಬೇಡಿಕೆಗೆ ಅನುಸಾರ ರೂಪಗೊಳ್ಳಬೇಕು ಎಂದರು.

ಜನಾಂದೋಲನದ ಮಾದರಿಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ಪದವೀಧರರು, ವಿದ್ಯಾವಂತರು, ವಿವಿಧ ಸಾಮಾಜಿಕ ಸಂಘಟನೆಗಳು, ಸ್ವ ಸಹಾಯ ಗುಂಪುಗಳು ತಜ್ಞರಿಂದ ಮಾಹಿತಿ ಪಡೆಯಬೇಕು. ಈ ಮಾಹಿತಿಗಳು ಗ್ರಾಮ ಸಭೆಗಳಲ್ಲಿ ಚರ್ಚೆಗಳಾಗಬೇಕು. ತಜ್ಞ ವಿಶ್ಲೇಷಕರಿಂದ ಮೌಲ್ಯಮಾಪನಕ್ಕೆ ಒಳಪಡಬೇಕು. ಅಂತಿಮವಾಗಿ ಸರ್ವರ ಅಭಿಪ್ರಾಯದಿಂದ ಸಮಗ್ರ ಜನ ಸಹಭಾಗಿತ್ವದ ಯೋಜನೆಗಳು ರೂಪಗೊಳ್ಳುತ್ತದೆ ಎಂದು ಹೇಳಿದರು.

ಇದೇ ಮಾದರಿಯನ್ನು ಕೇರಳ ಸರ್ಕಾರ ಮಾಡಿತ್ತು. ಅಲ್ಲಿನ ಮುಖ್ಯಮಂತ್ರಿಗಳು ಸಮಾಜದ ವಿವಿಧ ತಜ್ಞರಿಗೆ ಖುದ್ದಾಗಿ ಪತ್ರ ಬರೆದು ಜನಪರ ಯೋಜನೆಗಳನ್ನು ರೂಪಿಸಲು ತಜ್ಞರ ಸಲಹೆಗಳನ್ನು ಕೋರಿದರು. ಎಲ್ಲರನ್ನೂ ಒಂದೆಡೆ ಸೇರಿಸಿದರು. ಇಂತಹ ಜನಾಂದೋಲನದಿಂದ ಗ್ರಾಮೀಣಾಭಿವೃದ್ಧಿ ಯೋಜನೆಗಳು ಕೇರಳದಲ್ಲಿ ಯಶಸ್ವಿಯಾಯಿತು. ಈ ಮಾದರಿ ಸಮಗ್ರ ಗ್ರಾಮೀಣಾಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಹೇಳಿದರು.

ಸಾಮಾಜಿಕ ಸುಧಾರಣೆ, ಜಾತಿ ಮತ್ತು ಬಡತನ ನಿರ್ಮೂಲನೆ, ದುರ್ಬಲ, ವಿಕಲಚೇತನರ ಏಳ್ಗೆಗೆ ಶೂನ್ಯ ಬಂಡವಾಳದ ಯೋಜನೆ ರೂಪಿತವಾಗಬೇಕು. ಜನರ ಸಾಮೂಹಿಕ ಸಹಭಾಗಿತ್ವ ಈ ಕ್ಷೇತ್ರದಲ್ಲಿ ಹೆಚ್ಚಾಗಬೇಕು. ಮಹಾತ್ಮ ಗಾಂಧಿಧೀಜಿ ಅವರ ಗ್ರಾಮ ಸ್ವರಾಜ್‌ದ ಕಲ್ಪನೆಯಂತೆ ಗ್ರಾಮದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಯ ದೃಷ್ಟಿಕೋನದಿಂದ ಯೋಜನೆಗಳನ್ನು ರೂಪಿಸಲು ಬದ್ಧರಾಗಬೇಕು ಎಂದರು.

ಗಾಂಧಿಧೀಜಿ ಅವರ 150ನೇ ವರ್ಷಾಚರಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಅವರು ಕಂಡ ಗ್ರಾಮ ಸ್ವರಾಜ್‌ ಕಲ್ಪನೆ ಸಹಕಾರಗೊಳಿಸಬೇಕು. ಗ್ರಾಮ ಸಭೆಗಳಲ್ಲೇ ಯೋಜನೆಗಳು ತಯಾರಾಗಬೇಕು. ಗ್ರಾಮೀಣ ಅಭಿವೃದ್ಧಿಗೆ ಉದ್ಯೋಗ ಖಾತ್ರಿ ಯೋಜನೆಗಳು, 14ನೇ ಹಣಕಾಸು ಯೋಜನೆಯ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಬಹಳಷ್ಟು ಅನುದಾನ ಬರುತ್ತಿದೆ. ಈ ಅನುದಾನ ಸಮರ್ಪಕವಾಗಿ ಬಳಸಿಕೊಂಡು ಬಹು ಹಂತದ ಬಹು ಸಾಧ್ಯತೆಯ ಸಮಗ್ರ ಅಭಿವೃದ್ಧಿಯ ಯೋಜನೆ ಜತೆಗೆ ಜೀವ ವೈವಿದ್ಯತೆಗಳ ರಕ್ಷಣೆಗೆ ಆದ್ಯತೆ ನೀಡಿ ಜನಪರ ಯೋಜನೆಗಳನ್ನು ರೂಪಿಸಬೇಕು ಎಂದರು.

ಉದ್ಯೋಗ ಸೃಜನೆ, ಆರೋಗ್ಯ ಹಾಗೂ ಶಿಕ್ಷಣದ ಬೆಳವಣಿಗೆ, ಸೇವಾಲಯದ ಸುಧಾರಣೆ, ಮೂಲ ಸೌಕರ್ಯಗಳ ಸುಧಾರಣೆ, ಆರ್ಥಿಕ ಬೆಳವಣಿಗೆ, ಸಾಮಾಜಿಕ ಸುಧಾರಣೆ, ಮಾನವ ಸಂಪನ್ಮೂಲಗಳ ಬೆಳವಣಿಗೆಗೆ ಪೂರಕವಾಗಿ ಯೋಜನೆ ರೂಪಿಸಿ ಒಂದು ನಿರ್ಧಿಷ್ಟ ಅವಧಿಯಲ್ಲಿ ಯೋಜನೆಗಳು ಪೂರ್ಣಗೊಳ್ಳವಂತೆ ಕ್ರಮವಹಿಸಿ ಎಂದು ಹೇಳಿದರು.

ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಆಯ್ಕೆಯಾಗಿರುವ ಜನಪ್ರತಿನಿಧಿಗಳಿಗೆ ಹಾಗೂ ಗ್ರಾಮದ ಜನರಿಗೆ ಯೋಜನೆ ರೂಪಿಸುವುದು ಎಂದರೆ ಏನು ಎಂದು ತಿಳಿಯಬೇಕು. ಯೋಜನೆಗಳನ್ನು ರೂಪಿಸುವಾಗ ಯಾವ ಅಂಶಗಳನ್ನು ಗ್ರಹಿಸಬೇಕು ಎಂಬ ಅರಿವು ಇರಬೇಕು. ಯೋಜನೆಯನ್ನು ರೂಪಿಸುವ ಸಮಿತಿಗಳ ಸದಸ್ಯರು ತಮ್ಮ ಕೆಲಸ ಕೇವಲ ಪುನಾರವರ್ತಿತ ಕೆಲಸವೆಂದು ಭಾವಿಸದೇ ಹೊಸದನ್ನು ಚಿಂತಿಸಬೇಕು. ಹೀಗಾದಾಗ ಮಾತ್ರ ಸಮಗ್ರ ಯೋಜನೆ ತಯಾರಿಸಲು ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ ಮಾತನಾಡಿ, ಸರ್ಕಾರವು ಗ್ರಾಮದ ಅಭಿವೃದ್ಧಿಯ ಹೊಣೆ ನಮಗೆ ನೀಡಿದೆ. ಪ್ರತಿ ಸದಸ್ಯರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಜನರ ಸಹಭಾಗಿತ್ವದಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿ, ಸ್ಥಳೀಯ ಸಂಸ್ಥೆಗಳು ಅತ್ಯಂತ ಬಲಿಷ್ಠವಾಗಿವೆ. ಗ್ರಾಮ ಪಂಚಾಯಿತಿ ಸದಸ್ಯರಿಗೆ ಹೆಚ್ಚಿನ ಅಧಿಕಾರವಿದೆ. ಗ್ರಾಮದ ಅಭಿವೃದ್ಧಿಗೆ ತೆಗೆದುಕೊಳ್ಳುವ ತೀರ್ಮಾನಗಳನ್ನು ಯಾರೂ ಬದಲಾಯಿಸುವಂತಿಲ್ಲ. ತಮಗಿರುವ ಅಧಿಕಾರವನ್ನು ಬಳಸಿಕೊಂಡು ಗ್ರಾಮದ ಸಮಗ್ರ ಅಭಿವೃದ್ಧಿಗೆ ಶ್ರಮಿಸಬೇಕು. ಜೀವ ವೈವಿದ್ಯತೆಗಳ ರಕ್ಷಣೆ, ಜಲ ಮೂಲಗಳ ರಕ್ಷಣೆ, ಮಾನವ ಸಂಪನ್ಮೂಲಗಳ ಅಭಿವೃದ್ಧಿಗೆ ದೂರದೃಷ್ಟಿಯಿಂದ ಜನಾಭಿಪ್ರಾಯ ಪಡೆದು ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದರು.

ಜಿಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ. ಲೀಲಾವತಿ, ಗ್ರಾಮೀಣಾಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಗಣೇಶ ಪ್ರಸಾದ, ಮಾಜಿ ಶಾಸಕ ಡಿ.ಆರ್‌.ಪಾಟೀಲ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಸವಿತಾ ರಮೇಶ ಸುತ್ತಕೋಟಿ, ಕಾಗಿನೆಲೆ ಗ್ರಾಪಂ ಅಧ್ಯಕ್ಷೆ ಹಯಾತಬಿ ಮತ್ತಿಹಳ್ಳಿ ಇದ್ದರು.

ಕಾರ್ಯಾಗಾರದಲ್ಲಿ ಜಿಪಂ ಸದಸ್ಯರು, ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖಾ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Ullala–Encroch

Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.