ಪಾಸಿಟಿವ್ ಪತ್ತೆಯಾಗಿಲ್ಲ
Team Udayavani, Apr 24, 2020, 3:06 PM IST
ಸಾಂದರ್ಭಿಕ ಚಿತ್ರ
ಹಾವೇರಿ: ಜಿಲ್ಲೆಯಲ್ಲಿ ಈವರೆಗೆ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಡಿಸಿ ಕೃಷ್ಣ ಭಾಜಪೇಯಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಣಿಬೆನ್ನೂರು ಪಟ್ಟಣದ ಮಾರುತಿ ನಗರದ ಒಬ್ಬರು ಮತ್ತು ಹಿರೇಕೆರೂರು ತಾಲೂಕಿನ ನವನಗರದ ಒಬ್ಬ ರೋಗಿಯ ರಕ್ತ ಮತ್ತು ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದು ಈ ಇಬ್ಬರು ರೋಗಿಗಳ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ಸಾರ್ವಜನಿಕರು ಈ ಬಗ್ಗೆ ಯಾವುದೇ ಭಯ ಪಡುವ ಅವಶ್ಯಕತೆ ಇಲ್ಲ ಎಂದು ತಿಳಿಸಿದ್ದಾರೆ.
ಸುಳ್ಳು ಸುದ್ದಿ ನಂಬಬೇಡಿ: ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಕೊಳ್ಳುವುದು ಅವಶ್ಯವಾಗಿದೆ. ಕೋವಿಡ್ 19ಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಮಾತ್ರ ಮಾಧ್ಯಮಗಳ ಮೂಲಕ ಮಾಹಿತಿ ನೀಡಲು ಅಧಿಕೃತ ಅಧಿಕಾರಿಗಳಾಗಿದ್ದಾರೆ. ಕೊರೊನಾ ಸೋಂಕು ಹರಡುವಿಕೆ ಸಂಬಂಧಪಟ್ಟಂತೆ ಜಿಲ್ಲಾಡಳಿತದಿಂದ ಅಧಿಕೃತವಾಗಿ ಪ್ರತಿದಿನ ಮಾಧ್ಯಮಗಳ ಮೂಲಕ ಸುದ್ದಿ ಬಿಡುಗಡೆ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್ 19 ಪ್ರಕರಣಗಳ ಬಗ್ಗೆ ಯಾವುದೇ ಆಧಾರವಿಲ್ಲದೆ ನೀಡುತ್ತಿರುವ ಸುಳ್ಳು ಸುದ್ದಿಗಳನ್ನು ನಂಬಬಾರದು ಎಂದು ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕಾನೂನು ಕ್ರಮದ ಎಚ್ಚರಿಕೆ: ಸಾರ್ವಜನಿಕರು ಇತರ ಅನಾರೋಗ್ಯದ ಕಾರಣಗಳಿಗಾಗಿ ಆಂಬ್ಯುಲೆನ್ಸ್ ಮೂಲಕ ಸೂಕ್ತ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರುವ ಪ್ರಕ್ರಿಯೆ ಆರೋಗ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುತ್ತಿದೆ. ಆದರೆ, ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ “ರಾಣಿಬೆನ್ನೂರ ಪಟ್ಟಣದ ಮಾರುತಿ ನಗರದ ಮಹಿಳೆಗೆ ಕೋವಿಡ್ 19 ದೃಢ. ರಾಣಿಬೆನ್ನೂರಿನಲ್ಲಿ ಹೈಅಲರ್ಟ್ ಘೋಷಣೆ. ಮಾರುತಿ ನಗರದ ಸುತ್ತಲೂ ಸಂಪೂರ್ಣ ಸೀಲ್ ಡೌನ್. ಮಹಿಳೆಯ ಪತಿ ಹಾಗೂ ಮೂವರು ಹೋಂ ಕ್ವಾರಂಟೈನ್‌ಗೆ. ಜಿಲ್ಲಾಧಿಕಾರಿಯಿಂದ ಅಧಿಕೃತ ಆದೇಶ ಹೊರಬೀಳಬೇಕಿದೆ’ ಎಂದು ಸುಳ್ಳು ಸುದ್ದಿಯನ್ನು ವಾಟ್ಸ್‌ಆ್ಯಪ್ ಗ್ರೂಪ್ ಗಳಿಗೆ ರವಾನಿಸಿರುವುದು ಕಂಡುಬಂದಿದೆ. ಕೋವಿಡ್-19ಗೆ ಸಂಬಂಧಿಸಿ ಸುಳ್ಳು ಸುದ್ದಿ ಹರಡುವ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.
80 ಜನರ ವರದಿ ನೆಗೆಟಿವ್ : ಉಸಿರಾಟ ತೊಂದರೆ, ಜ್ವರ, ಶೀತದಿಂದ ಬಳಲುತ್ತಿದ್ದ 80 ಜನರ ರಕ್ತ ಮತ್ತು ಗಂಟಲು ದ್ರವ ಮಾದರಿ ನೆಗೆಟಿವ್ ಬಂದಿದ್ದು ಗುರುವಾರ ಮತ್ತೆ 139 ಜನರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ. ಈವರೆಗೆ ಒಟ್ಟು 890 ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು 536 ಮಾದರಿಗಳು ನೆಗೆಟಿವ್ ಬಂದಿವೆ. ಉಳಿದ ಮಾದರಿಗಳ ಪರೀಕ್ಷಾ ವರದಿ ಬರಬೇಕಿದೆ. ಇಲ್ಲಿಯವರೆಗೆ ಶಂಕಿತ ಲಕ್ಷಣಗಳುಳ್ಳ ಒಟ್ಟು 219 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು ಇವರಲ್ಲಿ 216 ಜನರ 28 ದಿನಗಳ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ. ಮೂವರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 10 ಜನರನ್ನು ಐಸೋಲೇಶನ್ ವ್ಯವಸ್ಥೆಯಲ್ಲಿಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.