ಪಿಯುಸಿ ಪರೀಕ್ಷೆಗೆ ಸಿದ್ಧತೆ
Team Udayavani, Jun 16, 2020, 7:28 AM IST
ಸಾಂದರ್ಭಿಕ ಚಿತ್ರ
ಹಾವೇರಿ: ಕೋವಿಡ್ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರ ಬಾಕಿ ಇರುವ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯನ್ನು ಜೂ. 18ರಂದು ನಡೆಸಲು ನಿರ್ಧರಿಸಿದ್ದು, ಇದಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.
ಪರೀಕ್ಷೆಗಾಗಿ 466 ಕೊಠಡಿಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸೋಮವಾರದಿಂದಲೇ ಎಲ್ಲ ಕೊಠಡಿಗಳನ್ನು ಸ್ಯಾನಿಟೈಸರ್ ಹಾಕಿ ಶುಚಿಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಸುರಕ್ಷತಾ ಕ್ರಮವಾಗಿ ನೆಲ, ಗೋಡೆ, ಬೆಂಚ್, ಡೆಸ್ಕ್ ಎಲ್ಲವನ್ನೂ ಸ್ಯಾನಿಟೈಸರ್ ಹಾಕಿ ಶುಚಿಗೊಳಿಸಲಾಗುತ್ತಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಮಾತ್ರ ಆಸನದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.
ಎಲ್ಲ ಮಕ್ಕಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಸ್ಕ್ರೀನಿಂಗ್, ಸ್ಯಾನಿಟೈಸರ್ ಹಾಗೂ ಮಾಸ್ಕ್ ವ್ಯವಸ್ಥೆ ಮಾಡಲಾಗುತ್ತಿದೆ. ಜ್ವರ ಇರುವ ಮಕ್ಕಳಿಗೆ ವಿಶೇಷ ಕೊಠಡಿ ವ್ಯವಸ್ಥೆಗೂ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು 9 ಗಂಟೆಗೆ ಪರೀಕ್ಷಾ ಕೇಂದ್ರ ತಲುಪುವಂತೆ ಆಗಮಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.
ಜಿಲ್ಲೆಯ 23 ಕೇಂದ್ರ ಹಾಗೂ 7 ಹೆಚ್ಚುವರಿ ಬ್ಲಾಕ್‌ಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 13955 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದಾರೆ. ಕೋವಿಡ್ ಲಾಕ್‌ಡೌನ್‌ನಿಂದ ವಿದ್ಯಾರ್ಥಿಗಳು ಇರುವ ಸ್ಥಳದಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದರಿಂದ ಹೊರ ಜಿಲ್ಲೆಗಳಿಂದ ಬಂದ 902 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಈ ಹಿಂದೆ ನೋಂದಾಯಿಸಿಕೊಂಡಿದ್ದ 4 ವಿದ್ಯಾರ್ಥಿಗಳು ಬೇರೆ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.