![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 1, 2020, 5:41 AM IST
ರಾಣಿಬೆನ್ನೂರ: ಹಳ್ಳಿಗಳು ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಆದಕಾರಣ ಗ್ರಾಮಗಳ ಅಭಿವೃದ್ಧಿಗೆ ಅಧಿಕಾರಿಗಳು ಪ್ರಥಮ ಆಧ್ಯತೆ ನೀಡಬೇಕು ಎಂದು ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ಇಲ್ಲಿನ ತಾಪಂ ಸಭಾಂಗಣದಲ್ಲಿ ನಡೆದ ಪಿಡಿಒಗಳ ಸಮಾಲೋಚನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಕೋವಿಡ್ ವೈರಸ್ ಹರಡದಂತೆ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಳೆಗಾಲವೇ ಇರಲಿ, ಬೇಸಿಗೆ ಕಾಲವೇ ಇರಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಅಭಾವವಾಗದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸರಿಯಾಗಿ ನಿರ್ವಹಣೆ ಮಾಡಬೇಕು ಎಂದರು. ನರೇಗಾ ಯೋಜನೆಯಡಿಯಲ್ಲಿ ಯುವಕರಿಗೆ ಸರಿಯಾಗಿ ಕೆಲಸ ನೀಡಬೇಕು ಮತ್ತು ರಸ್ತೆ ಪಕ್ಕದಲ್ಲಿರುವ ತಿಪ್ಪೆಗುಂಡಿಗಳನ್ನು ತೆಗೆಸಿ ಸ್ವತ್ಛವಾಗಿ ಗ್ರಾಮ ಇಟ್ಟುಕೊಳ್ಳಬೇಕು. ಇದರಲ್ಲಿ ನಿಷ್ಕಾಳಜಿ ವಹಿಸುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ತಾಪಂ ಇಒ ಎಸ್. ಎಂ. ಕಾಂಬಳೆ, ವ್ಯವಸ್ಥಾಪಕ ಬಸವರಾಜ ಶಿಡೇನೂರ ಹಾಗೂ 40 ಗ್ರಾಪಂಗಳ ಪಿಡಿಒ ಇದ್ದರು.
You seem to have an Ad Blocker on.
To continue reading, please turn it off or whitelist Udayavani.