“ಮಗಳನ್ನು ಉಳಿಸಿ, ಮಗಳನ್ನು ಓದಿಸಿ’ ಸಪ್ತಾಹ ಸಮಾರೋಪ
Team Udayavani, Jan 26, 2020, 4:19 PM IST
ಹಾವೇರಿ: “ಮಗಳನ್ನು ಉಳಿಸಿ ಮಗಳನ್ನು ಓದಿಸಿ’ ಸಪ್ತಾಹ ಕಾರ್ಯಕ್ರಮದ ಸಮಾರೋಪ ಸಮಾರಂಭ ನಗರದಲ್ಲಿ ನಡೆಯಿತು.
ನಗರದ ಮುನ್ಸಿಪಲ್ ಹೈಸ್ಕೂಲ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ “ಮಗಳನ್ನು ಉಳಿಸಿ ಮಗಳನ್ನು ಓದಿಸಿ’ ಸಪ್ತಾಹ ಸಮಾರೋಪ ಅಂಗವಾಗಿ ಮಕ್ಕಳಿಗೆ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆ ಕಾರ್ಯಕ್ರಮಗಳು ಜರುಗಿದವು.
ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ ಸಮಾರೋಪ ಭಾಷಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ. ವೈ. ಶೆಟ್ಟೆಪ್ಪನವರ ವಹಿಸಿದ್ದರು. ಇದೇ ಸಂದರ್ಭದಲ್ಲಿ ಹೆಣ್ಣು ಮಕ್ಕಳು ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸೋಮನೌಡ ಗಾಳಿಗೌಡ್ರ ಯೋಜನೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭಾಗ್ಯ ಗುಬ್ಬೆರ, ರೇಣುಕಾ ಕೌಜಗೇರಿ ಇತರರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.