ಬಸ್ ನಿಲುಗಡೆಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Nov 28, 2019, 3:18 PM IST
ಸವಣೂರು: ಅಲ್ಲಿಪೂರ ಮಾರ್ಗವಾಗಿ ಹಾಯ್ದು ಹೋಗುವ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಆಗ್ರಹಿಸಿ ಮಂಗಳವಾರ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾರಿಗೆ ಬಸ್‌ಗಳ ಸಂಚಾರವನ್ನು ತಡೆದು ಪ್ರತಿಭಟನೆ ನಡೆಸಿದರು.
ಸವಣೂರು ತಾಲೂಕಿನ ಅಲ್ಲಿಪೂರ ಗ್ರಾಮದಿಂದ ನೂರಾರು ವಿದ್ಯಾರ್ಥಿಗಳು ನಿತ್ಯ ಬಸ್ಸಿಗಾಗಿ ಕಾಯುವುದು ಅನಿವಾರ್ಯವಾಗಿದೆ. ಬಸ್‌ಗಳು ಸರಿಯಾದ ಸಮಯಕ್ಕೆ ಬರುವುದಿಲ್ಲ. ಇನ್ನು ಈ ಮಾರ್ಗದಲ್ಲಿ ಬರುವಂತಹ ಬಸ್ ಗಳು ನಿಲ್ಲುವುದಿಲ್ಲ. ನಿತ್ಯ ಸವಣೂರು ಮತ್ತು
ಲಕ್ಷ್ಮೇಶ್ವರ ಪಟ್ಟಣಕ್ಕೆ ಶಾಲಾ-ಕಾಲೇಜಿಗಾಗಿ ಹೋಗುವ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ ಸಂಚಾರ ತಡೆದು ಪ್ರತಿಭಟಿಸಿದರು. ಅಲ್ಲಿಪೂರ ಮಾರ್ಗವಾಗಿ ಹಾಯ್ದು ಹೋಗುವ ಗದಗ- ಎಡೆಯೂರ, ಗದಗ- ಬೆಂಗಳೂರ, ರೋಣ- ಬೆಂಗಳೂರ, ಗಜೇಂದ್ರಗಡ- ಅರಸಿಕೇರಿ, ಗಜೇಂದ್ರಗಡ- ಶಿವಮೊಗ್ಗ ಹಾಗೂ ಇಳಕಲ್- ಗದಗ ಬಸ್ ಗಳನ್ನು ನಿಲ್ಲಿಸುವಂತೆ ಆಗ್ರಹಿಸಿದರು.
ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸಾರಿಗೆ ಇಲಾಖೆಯ ಸವಣೂರು ಘಟಕದ ಅಧಿಕಾರಿಗಳು ವಿದ್ಯಾರ್ಥಿಗಳ ಮನವಿ ಸ್ವೀಕರಿಸಿ ಬೇಡಿಕೆ ಕುರಿತು ಮೇಲಧಿ ಕಾರಿಗಳ ಗಮನಕ್ಕೆ ತರುವ ಮೂಲಕ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು. ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ಕಾಲೇಜು ವಿದ್ಯಾರ್ಥಿಗಳಾದ ರಮೇಶ ಶಿರಬಡಗಿ, ಆನಂದ ತಿಮ್ಮಾಪೂರ, ಹನುಮಂತ ಶಿಗ್ಗಾಂವಿ, ಶಿವಯೋಗಿ ಪೂಜಾರ, ಹನಮಂತಪ್ಪಬಾರಕೇರ, ಅನೀಲ ತಿಮ್ಮಾಪೂರ, ಶೇಖಪ್ಪ ಲಮಾಣಿ ಸೇರಿದಂತೆ ಶಾಲಾ ವಿದ್ಯಾರ್ಥಿಗಳು, ಗ್ರಾಮಸ್ಥರು ಪಾಲ್ಗೊಂಡಿದ್ದರು. ನಂತರ ವಿದ್ಯಾರ್ಥಿಗಳು ತಹಶೀಲ್ದಾರ್ ಕಚೇರಿಗೆ ತೆರಳಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.