ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ
Team Udayavani, Feb 5, 2020, 3:17 PM IST
ಹಾವೇರಿ: ಕೇಂದ್ರ ಸರ್ಕಾರವು ಭಾರತೀಯ ಜೀವ ವಿಮಾ ನಿಗಮವನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ ಎಂದು ಆರೋಪಿಸಿ ಎಲ್‌ಐಸಿ ನೌಕರರ ಸಂಘ ಮತ್ತು ಪ್ರತಿನಿಧಿಗಳ ಸಂಘದ ಸದಸ್ಯರು ಮಂಗಳವಾರ ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಲ್‌ಐಸಿಯನ್ನು ಶೇರು ಬಂಡವಾಳ ಮಾರುಕಟ್ಟೆಯಲ್ಲಿ ನೋಂದಾಯಿಸಿ ಸ್ವಲ್ಪ ಪ್ರಮಾಣದ ಶೇರನ್ನು ಖಾಸಗಿ ಕಂಪನಿಗಳಿಗೆ ವಿಕ್ರಯಿಸಿ ಬರುವ ಆದಾಯದಿಂದ ತಮ್ಮ ವಿತ್ತೀಯ ಕೊರತೆ ಸರಿದೂಗಿಸುವುದಾಗಿ ಪ್ರಸ್ತಾಪಿಸಿದ್ದಾರೆ. ಆ ಮೂಲಕ ಹಂತಹಂತವಾಗಿ ಖಾಸಗಿಯವರ ಕಬಂಧ ಬಾಹುಗಳಿಗೆ ವರ್ಗಾಯಿಸಲು ಹವಣಿಸಿದ್ದಾರೆ. ಇದಕ್ಕೆಲ್ಲ ಕಳೆದ 25 ವರ್ಷಗಳಲ್ಲಿನ ಆರ್ಥಿಕ ನೀತಿ ಮತ್ತು ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿನ ಆರ್ಥಿಕ ನೀತಿಗಳೇ ಕಾರಣವಾಗಿದೆ. ಇದರಿಂದ ದೇಶದ ಆರ್ಥಿಕ ಸ್ಥಿತಿ ಹದಗೆಡುತ್ತ ಬಂದಿದೆ ಎಂದರು.
ಸರ್ಕಾರಕ್ಕೆ ಯೋಜನೆ ರೂಪಿಸಲು ಸರ್ಕಾರದಲ್ಲಿ ಹಣವಿಲ್ಲದಂತಾಗಿದೆ. ಅನೇಕ ಸಾರ್ವಜಿಕ ಉದ್ದಿಮೆಗಳು ನಷ್ಟದಲ್ಲಿರುವುದರಿಂದ ಸುಸೂತ್ರವಾಗಿ ಹೊರಟಿರುವ ಎಲ್‌ಐಸಿ ಶೇರು ಮಾರಾಟ ಮಾಡಿ ಆ ಹಣದಲ್ಲಿ ಯೋಜನೆ ರೂಪಿಸುವ ದುರಾಲೋಚನೆ ಸರ್ಕಾರದ್ದಾಗಿದೆ. ಸರ್ಕಾರ ತನ್ನ ನಿರ್ಧಾರ ಬದಲಿಸಬೇಕು. ಜೀವ ವಿಮಾ ನಿಗಮವನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪ ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.