ನಾಡಿದ್ದು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ

Team Udayavani, Jan 11, 2020, 3:05 PM IST

hv-tdy-3

ಬ್ಯಾಡಗಿ: ಬೆಳೆ ವಿಮೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಗಣಿ ಎಸೆದವರೇ ಇಂದು ಸಚಿವ, ಸಂಸದ ಹಾಗೂ ಶಾಸಕರಾಗಿದ್ದಾರೆ. ಹೀಗಿದ್ದರೂ ಜಿಲ್ಲೆಯ ರೈತರಿಗೆ ನಾಲ್ಕು ವರ್ಷಗಳಿಂದ ವಿಮೆ ಪರಿಹಾರ ದೊರೆತಿಲ್ಲ ಹೀಗಾಗಿ ಜ.13 ರಂದುತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ಅನಿವಾರ್ಯ ಎಂದು ರೈತ ಮುಖಂಡ ಗಂಗಣ್ಣ ಎಲಿ ಹೇಳಿದರು.

ಪಟ್ಟಣದ ವಿಎಸ್‌ಎಸ್‌ ಬ್ಯಾಂಕ್‌ನಲ್ಲಿ ನಡೆದ ರೈತ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಬೆಳೆ ವಿಮೆ ಎಂಬುದು ಜಿಲ್ಲೆಯ ರೈತರ ಪಾಲಿಗೆ ಗಗನ ಕುಸುಮವಾಗುತ್ತ ಸಾಗಿದೆ. ಕಳೆದ ವರ್ಷ ರೈತರ ಪರವಾಗಿ ಹೋರಾಟ ಮಾಡುತ್ತೇವೆ ಎಂಬ ಹಣೆಪಟ್ಟಿ ಹಚ್ಚಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಸಗಣಿ ಎಸೆದು ವಿಮೆ ಬಿಡುಗಡೆ ಮಾಡಿಸುವಂತೆ ನಟಿಸಿದ್ದ ಜಿಲ್ಲೆಯ ನಟ ಭಯಂಕರ ರಾಜಕಾರಣಿಗಳೇ ಇಂದು ರಾಜ್ಯದ ಮಂತ್ರಿಗಳಾಗಿದ್ದಾರೆ. ಆದರೂ, ವಿಮೆ ಹಣ ರೈತ ಖಾತೆಗೆ ಜಮೆ ಆಗದಿರುವುದು ರಾಜಕಾರಣಿಗಳು ನಂಬಲರ್ಹರೇ ಎಂಬ ಪ್ರಶ್ನೆ ಹುಟ್ಟು ಹಾಕುವಂತೆ ಮಾಡಿದೆ ಎಂದು ಆರೋಪಿಸಿದರು.

ತಾಲೂಕಾಧ್ಯಕ್ಷ ರುದ್ರನಗೌಡ ಕಾಡನಗೌಡ್ರ ಮಾತನಾಡಿ, ತಾಲೂಕಿನ ಕೃಷಿ ಇಲಾಖೆಯಲ್ಲಿ ರೈತರಿಗೆ ಯಾವ ರೀತಿಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ ಬೀಜ, ಗೊಬ್ಬರ, ಕ್ರಿಮಿನಾಶಕದ ಕೊರತೆ ತಾಲೂಕಿನ ರೈತರನ್ನು ಕಾಡುತ್ತಿದೆ. ಅಲ್ಲದೇ ವಿಮೆ ಹಣಕ್ಕಾಗಿ ರೈತರಿಗೆ ಅಲೆದಾಡಿ ಸಾಕಾಗಿದೆ. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಬೃಹತ್‌ ಹೋರಾಟ ನಡೆಸಲಾಗುದು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಕಿರಣಕುಮಾರ ಗಡಿಗೋಳ ಮಾತನಾಡಿ, ತಾಲೂಕಿನ ರೈತರ ಪಾಲಿಗೆ ತಾಲೂಕಾಡಳಿತ ಇದ್ದೂ ಇಲ್ಲದಂತಾಗಿದೆ. ತಹಶೀಲ್ದಾರ್‌ ಕಚೇರಿಯಲ್ಲಿ ಲಂಚದ ಹಾವಳಿ ಹೆಚ್ಚಾಗಿದ್ದು, ದುಡ್ಡು ಕೊಡದಿದ್ದರೆ ಯಾವ ಕೆಲಸವೂ ಆಗದ ಸ್ಥಿತಿಗೆ ಬಂದು ತಲುಪಿದೆ. ಇದರಿಂದ ರೈತರು, ಸಾರ್ವಜನಿಕರು, ಹೈರಾಣಾಗಿದ್ದು, ಬಡವರು ಕೂಲಿ ಕಾರ್ಮಿಕರು, ವೃದ್ಧರು ತಮ್ಮ ಅಳಲನ್ನು ಯಾರ ಬಳಿಯೂ ತೋಡಿಕೊಳ್ಳದಂತಾಗಿದೆ. ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡುವಲ್ಲಿತಾಲೂಕಾಡಳಿತ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿದರು.

ಮಲ್ಲೇಶಪ್ಪ ಡಂಬಳ, ಕೆವಿ ದೊಡ್ಡಗೌಡ್ರ, ಮಂಜು ತೋಟದ, ಚನ್ನಬಸಪ್ಪ ಕೋಡಿಹಳ್ಳಿ, ಲಕ್ಷ್ಮಣ ಅಮಾತಿ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.