ವಿವಿಧ ಬೇಡಿಕೆ ಈಡೇರಿಕೆಗೆ ಧರಣಿ ಸತ್ಯಾಗ್ರಹ
ಮೈಲಾರ ಮಹದೇವಪ್ಪ ವೃತ್ತದಲ್ಲಿ ಆಕ್ರೋಶ ; ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು
Team Udayavani, Jun 21, 2022, 4:36 PM IST
ಹಾವೇರಿ: ಅಕ್ರಮ ಮರಳುಗಾರಿಕೆ ತಡೆಗಟ್ಟುವುದು, ಇಂದಿರಾ ಕ್ಯಾಂಟೀನ್ ಪುನಾರಂಭ, ರೈತರಿಗೆ ಸಮರ್ಪಕ ಬಿತ್ತನೆ ಬೀಜ ಪೂರೈಕೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸೋಮವಾರ ನಗರದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ನಗರದ ಮಹರ್ಷಿ ವಾಲ್ಮೀಕಿ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಿ.ಬಿ ರಸ್ತೆ ಮೂಲಕ ಸಾಗಿ ಮೈಲಾರ ಮಹದೇವಪ್ಪ ವೃತ್ತಕ್ಕೆ ಬಂದು ಸಮಾವೇಶಗೊಂಡಿತು. ನಂತರ ಪ್ರತಿಭಟನಾಕಾರರು ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಿದ್ದರೂ ಕೆಲವೆಡೆ ಅವುಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಸಾರ್ವಜನಿಕರು ಸಮಸ್ಯೆ ಎದುರಿಸುವಂತಾಗಿದೆ. ಕೂಡಲೇ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು. ಅಲ್ಲದೇ ಇಂದಿರಾ ಕ್ಯಾಂಟೀನ್ ನಡೆಸಿ ಅಕ್ರಮವೆಸಗಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಜಿಲ್ಲೆಯಲ್ಲಿ ಅಕ್ರಮ ಮರಳುಗಾರಿಕೆ ಹಾಡಹಗಲೇ ನಡೆಯುತ್ತಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಪೊಲೀಸ್, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತಗಳು ಅಕ್ರಮ ಮರಳುಗಾರಿಕೆಗೆ ಸಹಕಾರ ನೀಡುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕೂಡಲೇ ಅಕ್ರಮ ಮರಳುಗಾರಿಕೆ ತಡೆಗಟ್ಟಲು ಅಧಿ ಕಾರಿಗಳು ಮುಂದಾಗಬೇಕು. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬಿತ್ತನೆ ಬೀಜ-ರಸಗೊಬ್ಬರ ಸಮರ್ಪಕವಾಗಿ ಪೂರೈಕೆಯಾಗಬೇಕು. ಆದರೆ ಜಿಲ್ಲೆಯಲ್ಲಿ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದ್ದು, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆ ಜೊತೆಗೆ ಸ್ವಚ್ಛತೆ, ಶೌಚಾಲಯ, ಕುಡಿವ ನೀರಿನ ಸಮಸ್ಯೆಯಿಂದ ಆಸ್ಪತ್ರೆ ಬರುವ ರೋಗಿಗಳು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಕೂಡಲೇ ಸಿಬ್ಬಂದಿ ನೇಮಕ ಮಾಡಿ ಮೂಲ ಸೌಲಭ್ಯ ಕಲ್ಪಿಸಬೇಕು. ಸಮಯಕ್ಕೆ ಸರಿಯಾಗಿ ಸರ್ವೇ ಕಾರ್ಯ ಮಾಡದೇ ರೈತರು, ಜನಸಾಮಾನ್ಯರನ್ನು ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಎಲ್ಲ ಇಲಾಖೆಗಳಲ್ಲಿ ಕೆಳಮಟ್ಟದ ಭ್ರಷ್ಟಾಚಾರ ಅವ್ಯಾಹತವಾಗಿ ನಡೆಯುತ್ತಿದ್ದು, ಮೇಲಾಧಿ ಕಾರಿಗಳಿಗೆ ದೂರು ಕೊಟ್ಟರೂ ಯಾರೊಬ್ಬರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಜಿಲ್ಲೆಯಲ್ಲಿ ಡಿಸಿ, ಎಸಿ, ತಹಶೀಲ್ದಾರ್ ಅವರ ಮ್ಯಾಜಿಸ್ಟ್ರೇಟ್ ಅಧಿಕಾರ ದುರುಪಯೋಗ ಪಡೆಸಿಕೊಂಡು ಯಾರದೋ ಆಸ್ತಿ ಯಾರಿಗೋ ಪರಭಾರೆ ಮಾಡುತ್ತಿದ್ದಾರೆ. ಆಸ್ತಿಗಳ ಪರಭಾರೆ ಸಮಯದಲ್ಲಿ ಅರ್ಥವಿಲ್ಲದ ತಕರಾರು ಹಾಕಿಕೊಂಡು ಕೇಸ್ ಎಳೆದುಕೊಂಡು ಹೋಗಲಾಗುತ್ತಿದೆ. ಕೋರ್ಟ್ ಆದೇಶ ಧಿಕ್ಕರಿಸಿ ತಮ್ಮದೇಯಾದ ರೀತಿಯಲ್ಲಿ ಹಣ ಕೊಡುವವರ ಪರ ಆದೇಶ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಈ ವೇಳೆ ಕೆಆರ್‌ಎಸ್ ಪಕ್ಷದ ರಾಜ್ಯ ಕಾರ್ಯದರ್ಶಿ ಅರವಿಂದ ಕೆ.ಬಿ., ಉಪಾಧ್ಯಕ್ಷ ಲಿಂಗೇಗೌಡ ಎಸ್. ಎಚ್., ಜಿಲ್ಲಾಧ್ಯಕ್ಷ ಉಜಣೆಪ್ಪ ಕೋಡಿಹಳ್ಳಿ, ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್, ಗಂಗಾ ಕೋರಿ ಇತರರಿದ್ದರು. ಪಟ್ಟು ಸಡಿಲಿಸದ ಪ್ರತಿಭಟನಾಕಾರರು ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕಾಮಿಸಬೇಕು ಎಂದು ಕೆಆರ್‌ಎಸ್ ಪಕ್ಷದ ಮುಖಂಡರು ಪಟ್ಟು ಹಿಡಿದರು.
ಸಂಜೆ ವೇಳೆಗೆ ಸ್ಥಳಕ್ಕಾಗಮಿಸಿದ ಅಪರ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಸಮಸ್ಯೆ ಆಲಿಸಿದರು. ಕೆಲ ಸಮಸ್ಯೆಗಳ ಬಗ್ಗೆ ಕೂಲಂಕಷವಾಗಿ ಪರಿಶೀಲಿಸುತ್ತೇವೆ. ಕೆಲ ಸಮಸ್ಯೆ ನಮ್ಮ ಹಂತದಲ್ಲೇ ಬಗೆಹರಿಸುತ್ತೇವೆ. ನಿಮ್ಮ ಬೇಡಿಕೆಗಳ ಕುರಿತು ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಪ್ರತಿಭಟನೆ ಮೊಟಕುಗೊಳಿಸಿ ಎಂದು ಮನವೊಲಿಸಿದರು. ಆದರೆ, ಪ್ರತಿಭಟನಾಕಾರರು ನಮ್ಮ ಸಮಸ್ಯೆ ಬಗೆಹರಿಯದವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದು ರಾತ್ರಿವರೆಗೂ ಪ್ರತಿಭಟನೆ ಮುಂದುವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್’ ವ್ಯವಸ್ಥೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.