ಛಾಯಾಗ್ರಾಹಕರಿಗೆ ನೆರವು ನೀಡಿ
Team Udayavani, May 11, 2020, 9:33 AM IST
ಹಿರೇಕೆರೂರ: ಲಾಕ್‌ಡೌನ್ ಹಿನ್ನೆಲೆಯಲ್ಲಿ ವೃತ್ತಿಪರ ಛಾಯಾಗ್ರಾಹಕರು ಹಾಗೂ ವಿಡಿಯೋಗ್ರಾಫರ್‌ಗಳು ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ಆರ್ಥಿಕ ನೆರವು ನೀಡಬೇಕು ಎಂದು ರಟ್ಟಿಹಳ್ಳಿ ತಾಲೂಕು ಕದಂಬ ವೃತ್ತಿನಿರತ ಛಾಯಾಗ್ರಾಹಕರ ಸಂಘದಿಂದ ಕೃಷಿ ಸಚಿವ ಬಿ.ಸಿ. ಪಾಟೀಲಗೆ ಮನವಿ ಸಲ್ಲಿಸಲಾಯಿತು.
ರಟ್ಟಿಹಳ್ಳಿ ತಾಲೂಕಿನಲ್ಲಿ ಸುಮಾರು 60 ವೃತ್ತಿನಿರತ ಛಾಯಾಗ್ರಾಹಕರಿದ್ದು,ಈ ವೃತ್ತಿಯನ್ನೇ ನಂಬಿಕೊಂಡಿದ್ದ ಎಲ್ಲರ ಕುಟುಂಬಗಳು ಲಾಕ್‌ಡೌನ್ ಪರಿಣಾಮ ಆರ್ಥಿಕ ಸಂಕಷ್ಟದಲ್ಲಿವೆ. ಏಪ್ರಿಲ್, ಮೇ ತಿಂಗಳುಗಳಲ್ಲಿ ಮದುವೆ ಸಮಾರಂಭಗಳು ಹೆಚ್ಚಾಗಿ ನಡೆಯುತ್ತವೆ. ಆದರೆ ಕೋವಿಡ್ ಸೋಂಕು ಭೀತಿಯಿಂದ ಸಮಾರಂಭಗಳನ್ನು ರದ್ದುಪಡಿಸಿರುವುದರಿಂದ ನಮ್ಮ ವೃತ್ತಿಗೆ ದೊಡ್ಡ ಹೊಡೆತ ಬಿದ್ದಿದೆ. ಕುಟುಂಬಗಳ ನಿರ್ವಹಣೆ ತುಂಬಾ ಕಷ್ಟಕರವಾಗಿದ್ದು, ಬೀದಿಗೆ ಬರುವ ಸ್ಥಿತಿ ಎದುರಾಗಿದೆ. ಸರ್ಕಾರ ಕೂಡಲೇ ಆರ್ಥಿಕ ನೆರವು ನೀಡಬೇಕು ಎಂದು ಛಾಯಾಗ್ರಾಹಕರು ಮನವಿ ಮಾಡಿದರು.
ಸಂಘದ ಗೌರವಾಧ್ಯಕ್ಷ ಬಸವರಾಜ ಪವಾರ, ಅಧ್ಯಕ್ಷ ರಾಜು ಉಪ್ಪಾರ, ಉಪಾಧ್ಯಕ್ಷ ವಾಗೀಶ ಹಿರೇಮಠ, ಲಿಂಗರಾಜ ವಾಲಿ, ಹನುಮಂತ ಬಳಿಗಾರ, ಪ್ರವೀಣ ನೆಲೋಗಲ್, ಗಣೇಶ ಸೊಪ್ಪು, ಮುತ್ತು ಬೆಣ್ಣಿ, ವಿಠಲ ಗುಬ್ಬಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ
By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ
ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.