ಕೋವಿಡ್ ಮಾರ್ಗಸೂಚಿಯಂತೆ ನಡೆಯಿತು ಪರೀಕ್ಷೆ
Team Udayavani, Jun 19, 2020, 6:19 AM IST
ಸಾಂದರ್ಭಿಕ ಚಿತ್ರ
ಹಾವೇರಿ: ಕೋವಿಡ್ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ 13,342 ವಿದ್ಯಾರ್ಥಿಗಳು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆ ಬರೆದರು.
ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮಾರ್ಗಸೂಚಿಯಂತೆ ಜಿಲ್ಲಾಡಳಿತ ದ್ವಿತೀಯ ಪಿ.ಯು.ಸಿ. ಇಂಗ್ಲಿಷ್ ಪರೀಕ್ಷೆಗೆ ವ್ಯಾಪಕ ಪೂರ್ವ ಸಿದ್ಧತೆ ಕೈಗೊಂಡು ಗ್ರಾಮೀಣ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ, ಪ್ರತಿ ವಿದ್ಯಾರ್ಥಿಗಳಿಗೆ ಮಾಸ್ಕ್ ವ್ಯವಸ್ಥೆ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ, ಪ್ರತಿ ಕೊಠಡಿಯಲ್ಲಿ ಸಾಮಾಜಿಕ ಅಂತರ ಪಾಲಿಸಿ ಕೂರಲು ಆಸನ ವ್ಯವಸ್ಥೆಯ ಅವಕಾಶ ಮಾಡಿಕೊಡುವ ಮೂಲಕ ವ್ಯವಸ್ಥಿತ ಪರೀಕ್ಷೆಯ ಸಿದ್ಧತೆ ಮಾಡಿ ವಿದ್ಯಾರ್ಥಿಗಳು ಆರೋಗ್ಯ ಸುರಕ್ಷತೆಯಿಂದ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು.
ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಾಮಾಜಿಕ ಅಂತರ, ಮಾಸ್ಕ್ ಧಾರಣೆ ಕುರಿತಂತೆ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು. ಹಾಜರಾತಿ ವಿವರ: ಜಿಲ್ಲೆಯಲ್ಲಿ ಗುರುವಾರ ಜರುಗಿದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಜಿಲ್ಲೆಯ 12,995 ಹಾಗೂ ಹೊರ ಜಿಲ್ಲೆಯ 904 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 13,899 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ ಜಿಲ್ಲೆಯ 12,448 ಹಾಗೂ ಹೊರ ಜಿಲ್ಲೆಯ 894 ವಿದ್ಯಾರ್ಥಿಗಳು ಒಳಗೊಂಡಂತೆ 13,342 ವಿದ್ಯಾರ್ಥಿಗಳು ಹಾಜರಾದರು.
ಜಿಲ್ಲೆಯ 547 ಹಾಗೂ ಹೊರ ಜಿಲ್ಲೆಯ 10 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಜಿಲ್ಲೆಯ ವಿವಿಧ 23 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿತ್ತು. ಯಾವ ವಿದ್ಯಾರ್ಥಿಯೂ ಡಿಬಾರ್ ಆಗಿಲ್ಲ. ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ನಿರಂಜನ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.