ಜ. 17ರಂದು ಪಲ್ಸ್ ಪೋಲಿಯೋ ಹಾಕಿಸಿ
ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ
Team Udayavani, Dec 17, 2020, 1:32 PM IST
ಹಾವೇರಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಜ. 17ರಂದು ಹಮ್ಮಿಕೊಳ್ಳಲಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೋ ಹನಿ ಹಾಕುವುದರ ಮೂಲಕ ಪೋಲಿಯೋ ಮುಕ್ತ ಭಾರತ ವಿಜಯವನ್ನು ಮುಂದುವರಿಸಲು ಎಲ್ಲರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಸಂಜಯ
ಶೆಟ್ಟೆಣ್ಣವರ ಕರೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಾಗೂ ಕೋವಿಡ್-19 ಲಸಿಕಾ ಪರಿಚಯ ಕುರಿತಂತೆ ಜರುಗಿದ ಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಜಿಪಂ ಸಿಇಒ ಮಹಮ್ಮದ್ ರೋಶನ್ ಮಾತನಾಡಿ, ಆರೋಗ್ಯ ಇಲಾಖಾ ಅಧಿಕಾರಿ ಹಾಗೂ ಸಿಬ್ಬಂದಿ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿ ಕೊಳ್ಳಲು ತಿಳಿಸಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಜಯಾನಂದ ಮಾತನಾಡಿ, ನೆರೆಯ ಪಾಕಿಸ್ತಾನ ಮತ್ತು ಅಪಘಾನಿಸ್ತಾನದಲ್ಲಿ ಪೋಲಿಯೋ ಪ್ರಕರಣಗಳು ಇರುವುದರಿಂದ ನಮ್ಮ ದೇಶದಲ್ಲಿಯೂ ಪೋಲಿಯೋ ವಿರುದ್ಧ ನಿರಂತರವಾಗಿ ಕಣ್ಗಾವಲು ನಡೆದಿದೆ.
ಈ ದಿಶೆಯಲ್ಲಿ ಹುಟ್ಟಿನಿಂದ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಲಿಯೋ ಲಸಿಕೆ ಲಭ್ಯವಾಗುವಂತೆ ಸೂಕ್ತ ಕ್ರಿಯಾಯೋಜನೆ ತಯಾರಿಸಿಕೊಂಡು ಲಸಿಕಾ ಕಾರ್ಯಕ್ರಮದ ಯಶಸ್ವಿಗೆ ಕ್ರಮವಹಿಸಬೇಕು ಎಂದು ತಿಳಿಸಿದರು.
ಇದನ್ನೂ ಓದಿ:ಅಧಿಕಾರ ಕಳೆದುಕೊಂಡ ಕಾಂಗ್ರೆಸ್‌ನಿಂದ ಗೂಂಡಾಗಿರಿ
ಎಸ್‌ಎಂಒ ಡಾ| ಸಿದ್ಧಲಿಂಗಯ್ಯ ಕೋವಿಡ್ ಲಸಿಕೆ ಕಾರ್ಯಕ್ರಮ ಕುರಿತಂತೆ ವಿವರಿಸಿ, ಕೋವಿಡ್-19 ಲಸಿಕೆ ಹಾಕುವ ಕಾರ್ಯಕ್ರಮದ ಸಿದ್ಧತೆ ಈಗಿನಿಂದಲೇ ಮಾಡಿಕೊಳ್ಳಬೇಕು. ಲಸಿಕೆ ಬಂದ ತಕ್ಷಣ ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಹೈರಿಸ್ಕ್ ಗುಂಪಿನ ಸಾರ್ವಜನಿಕರಿಗೆ, ವಯೋವೃದ್ಧರಿಗೆ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಉಳಿದಂತೆ ಹಂತ ಹಂತವಾಗಿ ಎಲ್ಲ ಸಾರ್ವಜನಿಕರಿಗೆ ಲಸಿಕೆ ತಲುಪುವಂತೆ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು. ಕಾರ್ಯಾಗಾರದಲ್ಲಿ ಜಿಲ್ಲೆಯ ಕಾರ್ಯಕ್ರಮ ಅನುಷ್ಠಾಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಆರೋಗ್ಯ ಸಂಸ್ಥೆ ವೈದ್ಯಾಧಿಕಾರಿಗಳು, ಮೇಲ್ವಿಚಾರಕರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.