ಕ್ವಾರಂಟೈನ್: ಆರೋಗ್ಯ ನಿಗಾಕ್ಕೆ ಸೆಲ್ಫಿ ಅಪ್‌ಲೋಡ್‌ಗೆ ಸೂಚನೆ
Team Udayavani, May 16, 2020, 5:14 AM IST
ಹಾವೇರಿ: ಕ್ವಾರಂಟೈನ್ ನಲ್ಲಿರುವವರ ಮೇಲೆ ನಿಗಾವಹಿಸಲು ಇರುವ ಕ್ವಾರಂಟೈನ್ ವಾಚ್ ತಂತ್ರಾಂಶದಲ್ಲಿ ನಿತ್ಯದ ಆರೋಗ್ಯದ ಸ್ಥಿತಿಗತಿಯನ್ನು ಅವರ ಸೆಲ್ಫಿ ಫೋಟೋದೊಂದಿಗೆ ಅಪ್‌ಲೋಡ್ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಹಶೀಲ್ದಾರರಿಗೆ ಸೂಚನೆ ನೀಡಿದರು.
ಅವರು ಶುಕ್ರವಾರ ತಹಶೀಲ್ದಾರರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದರು. ಗೃಹ ಪ್ರತ್ಯೇಕತೆಯಲ್ಲಿರುವ ಎಲ್ಲರ ಆರೋಗ್ಯದ ಮಾಹಿತಿಯನ್ನು ಪ್ರತಿನಿತ್ಯ ಪಡೆಯಬೇಕು. ಕಂಟೇನ್ಮೆಂಟ್ ಝೋನ್‌ಗಳ ದೈನಂದಿನ ಚಟುವಟಿಕೆಗಳನ್ನು ನಿಗದಿತ ತಂತ್ರಾಂಶದಲ್ಲಿ ಸಕಾಲದಲ್ಲಿ ಅಳವಡಿಸಲು ನಿಯೋಜಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಜಿಲ್ಲೆಯ ಘೋಷಿತ ಕಂಟೇನ್ಮೆಂಟ್ ಬಫರ್ ಝೋನ್ ವಲಯಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾವಹಿಸಬೇಕು. ಈ ವಲಯಗಳಲ್ಲಿ ವೈದ್ಯರ ಮೂಲಕ ಮನೆ ಮನೆ ಆರೋಗ್ಯ ತಪಾಸಣೆ ಚಟುವಟಿಕೆಗಳ ಅಂಕಿಅಂಶಗಳನ್ನು ಕಾಲಕಾಲಕ್ಕೆ ಕಂಟೇನ್ಮೆಂಟ್ ಝೋನ್ ಆ್ಯಪ್ ತಂತ್ರಾಂಶದಲ್ಲಿ ಮಾಹಿತಿ ಅಪ್‌ಲೋಡ್ ಮಾಡಬೇಕು ಎಂದು ಸೂಚನೆ ನೀಡಿದರು.
ಅಪರ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಮಾತನಾಡಿ, ಜಿಲ್ಲೆಯಲ್ಲಿ ಮನೆ ಮನೆ ಆರೋಗ್ಯ ಸರ್ವೇ ಕುರಿತಂತೆ ಮಾಹಿತಿಯನ್ನು ಹೆಲ್ತ್ ವಾಚ್ ತಂತ್ರಾಂಶದಲ್ಲಿ ಅಳವಡಿಸಬೇಕಾಗಿದೆ. ಈ ತಂತ್ರಾಂಶದ ಹೊಸ ವರ್ಷನ್ ಬಿಡುಗಡೆಗೊಳಿಸಿದ್ದು, ಎಲ್ಲ ಬಿಎಲ್‌ಒಗಳು ಅಪ್‌ಡೆಟ್ ಮಾಡಿಕೊಳ್ಳಲು ನಿರ್ದೇಶನ ನೀಡಿ. ಜಿಲ್ಲೆಯಲ್ಲಿ 1470 ಜನ ಬಿಎಲ್‌ಒಗಳನ್ನು ಈ ಕಾರ್ಯಕ್ಕೆ ನಿಯೋಜಿಸಿದ್ದು, ಈವರೆಗೆ 1,225 ಜನ ಆ್ಯಪ್ ಡೌನ್‌ಲೋಡ್ ಮಾಡಿಕೊಂಡಿದ್ದಾರೆ. ಬಾಕಿ 245 ಜನ ಬಿಎಲ್‌ಒಗಳು ಹೆಲ್ತ್ ವಾಚ್ ಆ್ಯಪ್‌ಗ್ಳನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿ ಅಪ್‌ಲೋಡ್ ಮಾಡಬೇಕಾಗಿದೆ. ಈವರೆಗೆ 3,18,852 ಮನೆಗಳ ಪೈಕಿ 68,516 ಮನೆಗಳ ಸರ್ವೇ ಮಾಹಿತಿಯನ್ನು ಅಪ್‌ಲೋಡ್ ಮಾಡಲಾಗಿದ್ದು, ಬಾಕಿ ಮನೆಗಳ ಸರ್ವೇ ಕಾರ್ಯ ಮುಗಿದರೂ ತಂತ್ರಾಂಶದಲ್ಲಿ ಅಪ್‌ಲೋಡ್ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ಜಿಪಂ ಸಿಇಒ ರಮೇಶ ದೇಸಾಯಿ, ಉಪವಿಭಾಗಾಧಿಕಾರಿ ಡಾ| ದಿಲೀಷ್ ಶಶಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.