ರೈಲ್ವೆ ಕೆಳ ಸೇತುವೆ ನಿರ್ಮಾಣ ಅವೈಜ್ಞಾನಿಕ
•ಅಧಿಕಾರಿಗಳೊಂದಿಗೆ ಕಾಮಗಾರಿ ವೀಕ್ಷಿಸಿದ ಶಾಸಕ ಬಳ್ಳಾರಿ •ಮೇಲ್ಸೆತುವೆ ಕಾಮಗಾರಿಗೆ ಸೂಚನೆ
Team Udayavani, Jun 2, 2019, 12:36 PM IST
ಬ್ಯಾಡಗಿ: ಬ್ಯಾಡಗಿ ಮತ್ತು ರಾಣಿಬೆನ್ನೂರ ತಾಲೂಕಿನಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ಪರಿಶೀಲನೆಗೆ ಆಗಮಿಸಿದ್ದ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಚರ್ಚಿಸಿದರು.
ಬ್ಯಾಡಗಿ: ರೈಲ್ವೆ ಕ್ರಾಸಿಂಗ್‌ಗಳನ್ನು ಮಾನವ ರಹಿತವಾಗಿ ಮಾಡುತ್ತಿರುವ ಕಾರ್ಯ ಸ್ವಾಗತಾರ್ಹ. ಆದರೆ, ಯೋಜನೆಯಡಿ ನಡೆಯುತ್ತಿರುವ ಬಹುತೇಕ ಕಾಮಗಾರಿಗಳು ಅವೈಜ್ಞಾನಿಕವಾಗಿದ್ದು, ಮಳೆಗಾಲದಲ್ಲಿ ನೀರು ತುಂಬಿಕೊಳ್ಳುತ್ತಿದ್ದು, ಎಲ್ಲ ಲೆವೆಲ್ ಕ್ರಾಸಿಂಗ್ ಮೇಲ್ಸೆತುವೆ ಮಾಡುವುದು ಹೆಚ್ಚು ಸೂಕ್ತ ಎಂದು ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಸಲಹೆ ನೀಡಿದರು.
ಸಂಸದ ಶಿವಕುಮಾರ ಉದಾಸಿ ನಿರ್ದೇಶನ ಮೇರೆಗೆ ಶನಿವಾರ ರೈಲ್ವೆ ಇಲಾಖೆ ಅಧಿಕಾರಿಗಳು ಬ್ಯಾಡಗಿ ಮತ್ತು ರಾಣಿಬೆನ್ನೂರ ತಾಲೂಕುಗಳಲ್ಲಿರುವ ಲೆವೆಲ್ ಕ್ರಾಸಿಂಗ್‌ಗಳಲ್ಲಿ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.
ರೈಲ್ವೆ ಕ್ರಾಸಿಂಗ್‌ಗಳಲ್ಲಿ ಸುರಕ್ಷತೆ ದೃಷ್ಟಿಯಿಂದ ಹಳಿಗಳ ಮೇಲಿರುವ ದಾರಿಗಳನ್ನು ಜಿರೋ ಟ್ರಾಫಿಕ್ ಮಾಡಲಾಗುತ್ತಿದೆ. ಆದರೆ, ರೈಲ್ವೆ ಇಲಾಖೆ ಬಹುತೇಕ ಕಡೆಗಳಲ್ಲಿ ಕೆಳ ಸೇತುವೆಗಳನ್ನು ನಿರ್ಮಿಸುತ್ತ ಹೊರಟಿದ್ದು, ಮಳೆಗಾಲದಲ್ಲಿ ಅವುಗಳಲ್ಲಿ ಮಳೆ ನೀರು ಸಂಗ್ರಹವಾಗುತ್ತಿದ್ದು ವಾಹನ ಸಂಚಾರ ಸ್ಥಗಿತಗೊಳ್ಳುತ್ತಿದೆ. ಇದಕ್ಕೆ ತಮ್ಮ ಬಳಿ ಶಾಶ್ವತ ಪರಿಹಾರವಿಲ್ಲ ಎಂದು ಆರೋಪಿಸಿದರು.
ಮುಕ್ತ ಸಂಚಾರಕ್ಕೆ ಸೌಲಭ್ಯಗಳನ್ನು ಕಲ್ಪಿಸಿ ಸಾರ್ವಜನಿಕರಿಗೆ ಅನುಕೂಲವಾಗಬೇಕಾಗಿದ್ದ ಕೆಳಸೇತುವೆಗಳಲ್ಲಿ ನೀರು ತುಂಬಿಕೊಂಡು ವರ್ಷದ ಒಂದೆರಡು ತಿಂಗಳು ಸಂಚಾರ ಸ್ಥಗಿತಗೊಳ್ಳುತ್ತಿದೆ. ಅಷ್ಟೇ ಅಲ್ಲದೆ ಕನಿಷ್ಟ 2 ತಿಂಗಳ ವರೆಗೆ ರೈತರ ಕೃಷಿ ಚಟುವಟಿಕೆಗಳಿಗೆ ಅಡೆತಡೆ ನಿಲ್ಲುತ್ತಿವೆ. ಹಂಗಾಮಿನಲ್ಲಿ ಹೊಲಗಳಿಗೆ ಹೋಗುವುದೇ ಸಮಸ್ಯೆಯಾದಾಗ ಅವರಾದರೂ ಹೇಗೆ ಸುಮ್ಮನಿರಲು ಸಾಧ್ಯ? ಎಂದು ಪ್ರಶ್ನಿಸಿದರು.
ಎಲ್ಲ ರೈಲ್ವೆ ಹಳಿಗಳ ಪಕ್ಕದಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ಮಿಸುವುದರಿಂದ ಕೃಷಿಕರಿಗೆ ಹೆಚ್ಚು ಅನುಕೂಲವಾಗಲಿದೆ. ಬ್ಯಾಡಗಿ ಮತ್ತು ಕಾಕೋಳ ಮಧ್ಯೆ ನಿರ್ಮಿಸುತ್ತಿರುವ ಕೆಳ ಸೇತುವೆ ಯಾವ ಪುರುಷಾರ್ಥಕ್ಕೆ ನಿರ್ಮಿಸಲಾಗುತ್ತಿದೆ? 60 ಟನ್ ಸಾಮರ್ಥ್ಯದ ಲಾರಿಗಳು ಕೆಳ ಸೇತುವೆಯಿಂದ ಮೇಲೆ ಬರಲು ಸಾಧ್ಯವೇ ಇಲ್ಲ. ಅಷ್ಟೊಂದು ಕಡಿದಾಗಿ ನಿರ್ಮಿಸಿದ್ದು, ಕೃಷಿಕರ ಎತ್ತಿನಗಾಡಿಗಳು ಅಲ್ಲಿಂದ ಹೊರಬರುವುದು ಕಷ್ಟಸಾಧ್ಯ. ಕೂಡಲೇ ಕಾಮಗಾರಿ ಬದಲಾವಣೆಗೊಳಿಸಿ ಮೇಲ್ಸೇತುವೆಯಾಗಿ ಪರಿವರ್ತನೆ ಮಾಡಬೇಕು ಎಂದು ತಾಕೀತು ಮಾಡಿದರು.
ಅಧಿಕಾರಿಗಳು ತೆಗೆದುಕೊಂಡ ಅವೈಜ್ಞಾನಿಕ ನಿರ್ಣಯಗಳಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ವ್ಯರ್ಥವಾಗುತ್ತಿದೆ ಎಂದು ಆರೋಪಿಸಿದರು.
ಮುಖಂಡ ಶಿವಬಸಪ್ಪ ಕುಳೇನೂರ ಮಾತನಾಡಿ, ಮೋಟೆಬೆನ್ನೂರ ಮತ್ತು ಕೋಡಿಹಳ್ಳಿ ಗ್ರಾಮದ ನಡುವೆ ಇರುವ ಲೆವಲ್ ಕ್ರಾಸಿಂಗ್ ಹಾಗೆಯೇ ಇರಲಿ. ಯಾವುದೇ ಕೆಳಸೇತುವೆ ಅಥವಾ ಮೇಲ್ಸೇತುವೆಗಳ ಅವಶ್ಯಕತೆಯಿಲ್ಲ. ಸದ್ಯಕ್ಕೆ ಯಾವುದೇ ಸಮಸ್ಯೆಯಿಲ್ಲ. ತಮ್ಮ ಕೆಳ ಸೇತುವೆಗಳಿಂದ ಇನ್ನಷ್ಟು ಸಮಸ್ಯೆಯಾಗುವುದು ಬೇಡ ಎಂದರು.
ಸಮಸ್ಯೆಗಳನ್ನು ಕೂಲಂಕುಷವಾಗಿ ಆಲಿಸಿದ ನೈಋತ್ಯ ರೈಲ್ವೆ ವಿಭಾಗದ ಎಂಜಿನಿಯರ್ ಹರಿಪ್ರಸಾದ್, ಇವೆಲ್ಲವುಗಳನ್ನು ಅನುಷ್ಠಾನಗೊಳಿಸಲು ತಮ್ಮಿಂದ ಪತ್ರವೊಂದನ್ನು ಹಿರಿಯ ಅಧಿಕಾರಿಗಳಿಗೆ ಕೊಡಿ, ಬಳಿಕ ಸಂಸದರ ಜತೆಗೆ ಸಭೆ ನಡೆಸಿ ಸಮಸ್ಯಾತ್ಮಕ ಕಾಮಗಾರಿಗಳ ಬದಲಾವಣೆಗೆ ಕ್ರಮ ಕೈಗೊಳ್ಳುವುದಾಗಿ ಶಾಸಕರಿಗೆ ತಿಳಿಸಿದರು.
ಮುಖಂಡರಾದ ಶಂಕ್ರಣ್ಣ ಮಾತನವರ, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಸುರೇಶ್ ಯತ್ನಳ್ಳಿ, ಉದ್ಯಮಿ ಆರ್.ನಾಗರಾಜ ಸೇರಿದಂತೆ ರೈಲ್ವೆ ಇಲಾಖೆ ಅಧಿಕಾರಿಗಳು ಮತ್ತು ತಾಂತ್ರಿಕ ಸಮಿತಿ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.