ಕಟ್ಟು ನಿಟ್ಟು ಕ್ರಮದಿಂದ ಸೋಂಕು ತಡೆ
Team Udayavani, Apr 9, 2020, 5:07 PM IST
ರಾಣಿಬೆನ್ನೂರ: ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಕಾರಣ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೊರೊನಾ ವೈರಸ್ ಕಂಡುಬಾರದಿರುವುದು ಸಮಾಧಾನ ತಂದಿದೆ ಎಂದು ಜಿಪಂ ಸಿಇಒ ರಮೇಶ ದೇಸಾಯಿ ಹೇಳಿದರು.
ತಾಪಂ ಸಭಾಭವನದಲ್ಲಿ ತಾಲೂಕಿನ ಸ್ಥಿತಿಗತಿ ಕುರಿತು ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಇನ್ನಷ್ಟು ಮುಂಜಾಗೃತಾ ಕ್ರಮವಾಗಿ ಪ್ರತಿ ತಾಲೂಕಿನಲ್ಲಿ ಯಾರಿಗೇ ಆಗಲಿ ಜ್ವರ ಕಂಡುಬಂದಲ್ಲಿ ಆರೋಗ್ಯ ತಪಾಸಣಾ ಕೇಂದ್ರವನ್ನು ತೆರೆದು ದಿನದ 24 ಗಂಟೆ ತಪಾಸಣೆ ನಡೆಸಲಾಗುವುದು ಎಂದರು. ಈಗಾಗಲೇ ಪ್ರತಿ ಗ್ರಾಮದಲ್ಲಿ ಆಶಾ ಕಾರ್ಯಕರ್ತರಿಂದ 11 ಸಾವಿರ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿಸಲಾಗಿದೆ. ಈ ಕಾರ್ಯ ನಿರಂತರ ಮುಂದುವರಿಯಲಿದೆ. ಜಿಲ್ಲಾಡಳಿತ ಎಂತಹ ಕಠಿಣ ಪರಿಸ್ಥಿತಿ ಎದುರಾದರೂ ಎದುರಿಸಲು ಸರ್ವ ಸಿದ್ಧತೆ ಮಾಡಿಕೊಂಡಿದೆ. ಸಾರ್ವಜನಿಕರು ಅವಶ್ಯಕತೆ ಮೀರಿ ಮನೆಯಿಂದ ಹೊರಬರಬಾರದು ಎಂದರು.
ಅಂತ್ಯೋದಯ ಹಾಗೂ ಹಸಿರು ಪಡಿತರ ಕಾರ್ಡ್‌ದಾರರಿಗೆ 10 ಕೆಜಿ ಅಕ್ಕಿ, 4 ಕೆಜಿ ಗೋದಿ ವಿತರಿಸುತ್ತಿದ್ದು, ಹಸಿರು ಪಡಿತರ ಕಾರ್ಡ್ ಹೊಂದಿಲ್ಲದ ಕಡುಬಡವರಿಗೂ ಆಹಾರ ಧಾನ್ಯ ವಿತರಿಸಲಾಗುವುದು. ಅಂತವರು ತಾಲೂಕಾಡಳಿತದ ಗಮನಕ್ಕೆ ತಂದು ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಶಾಸಕ ಅರುಣಕುಮಾರ ಪೂಜಾರ, ತಾಪಂ ಅಧ್ಯಕ್ಷೆ ಗೀತಾ ಲಮಾಣಿ, ಉಪಾಧ್ಯಕ್ಷೆ ಕಸ್ತೂರವ್ವ ಹೊನ್ನಾಳಿ, ಇಒ ಎಸ್.ಎಂ. ಕಾಂಬಳೆ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಚೋಳಪ್ಪ ಕಸವಾಳ, ತಾಪಂ ವ್ಯವಸ್ಥಾಪಕ ಬಸವರಾಜ ಶಿಡೇನೂರ, ಅಶೋಕ ನಾರಜ್ಜಿ ಇದ್ದರು. ಇದಕ್ಕೂ ಮುನ್ನ ಜಿಪಂ ಸಿಇಒ ರಮೇಶ ದೇಸಾಯಿ ಅವರು ಹಲಗೇರಿ ರಸ್ತೆಯ ಸಾರ್ವಜನಿಕ ಆಸ್ಪತ್ರೆಗೆ ಹಾಗೂ ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಹೊಸ ಸೇರ್ಪಡೆ
Rain: 5 ವಿದ್ಯುತ್ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್
Winter Session: ಸರ್ಕಾರದ ವರ್ತನೆಗೆ ವಿಪಕ್ಷ ಸದಸ್ಯರ ಆಕ್ರೋಶ: ಸಭಾಪತಿ ಹೊರಟ್ಟಿ ಎಚ್ಚರಿಕೆ
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Nehru letters ಹಿಂತಿರುಗಿಸುವಂತೆ ಸೋನಿಯಾ ಗಾಂಧಿಗೆ ಬಿಜೆಪಿ ಒತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.