ರೈತರ ಉತ್ಪನ್ನ ನೇರ ಗ್ರಾಹಕರಿಗೆ
Team Udayavani, Apr 8, 2020, 4:57 PM IST
ರಾಣಿಬೆನ್ನೂರ: ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರು ಬೆಳೆದ ತರಕಾರಿ ಉತ್ಪನ್ನಗಳ ಖರೀದಿಗೆ ಡಾ| ಅಶೋಕ ಪಿ. ಚಾಲನೆ ನೀಡಿದರು.
ರಾಣಿಬೆನ್ನೂರ: ಲಾಕ್‌ಡೌನ್ ಸಮಯದಲ್ಲಿಯೂ ಕೃಷಿ ವಿಜ್ಞಾನ ಕೇಂದ್ರ ಬೆಂಬಲದೊಂದಿಗೆ ರೈತ ಉತ್ಪಾದಕರ ಕಂಪನಿ (ಎಫ್‌ಪಿಒ) ಜಿಲ್ಲೆಯಲ್ಲಿ ರೈತರು ಬೆಳೆದಿರುವ ತರಕಾರಿ, ಹಣ್ಣು, ಹೂಗಳನ್ನು ನೇರವಾಗಿ ರೈತರಿಂದ ಖರೀದಿಸಿ ನೇರವಾಗಿ ಗ್ರಾಹಕರ ಮನೆಗಳಿಗೆ ಮಾರಾಟ ಮಾಡಲು ಮುಂದಾಗಿವೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಅಶೋಕ ಪಿ. ಹೇಳಿದರು.
ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರು ಬೆಳೆದ ತರಕಾರಿ ಉತ್ಪನ್ನಗಳ ಖರೀದಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾಗಣೆ ವಾಹನಗಳ ಲಭ್ಯತೆಯ ತೊಂದರೆ ಒಂದೆಡೆಯಾದರೆ, ಉತ್ತಮ ಬೆಲೆ ದೊರಕದಿರುವುದು ಕೂಡ ರೈತರಿಗೆ ತಲೆನೋವಾಗಿದೆ. ಇದರ ಮಧ್ಯೆ ರೈತರ ಒಳಿತಿಗಾಗಿ ಹಾನಗಲ್‌ನ ಶ್ರೀ ಕುಮಾರೇಶ್ವರ ರೈತ ಉತ್ಪಾದಕರ ಕಂಪನಿ, ರಟ್ಟಿಹಳ್ಳಿಯ ಕುಮದ್ವತಿ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ, ಹಾವೇರಿಯ ಭೂತಾಯಿ ಕಂಪನಿ ಹಾಗೂ ಚಿಕ್ಕಬಾಸೂರಿನ ಎಫ್‌ಪಿಒಗಳು ಖರೀದಿಗೆ ಮುಂದಾಗಿ ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳ ಗ್ರಾಹಕರ ಮನೆ ಬಾಗಿಲಿಗೆ ಸೂಕ್ತ ದರದಲ್ಲಿ ಮಾರಾಟ ಮಾಡಲು ಶ್ರಮಿಸುತ್ತಿವೆ ಎಂದರು. ರೈತ ಉತ್ಪಾದಕರ ಸಂಘದ ಪದಾಧಿಕಾರಿಗಳು ಮತ್ತು ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.