ರಾಣಿಬೆನ್ನೂರಲ್ಲಿ ಭುಗಿಲೆದ್ದ ಬಂಡಾಯ

Team Udayavani, Nov 17, 2019, 12:15 PM IST

hv-tdy-1

ಹಾವೇರಿ: ರಾಣಿಬೆನ್ನೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅರುಣಕುಮಾರ ಪೂಜಾರ ಅವರಿಗೆ ಟಿಕೆಟ್‌ ಘೋಷಿಸಿರುವುದಕ್ಕೆ ಸ್ಥಳೀಯವಾಗಿ ಬಂಡಾಯ ಭುಗಿ ಲೆದ್ದಿದ್ದು ಬಿಜೆಪಿಗೆ ಹೊಸ ತಲೆನೋವು ಶುರುವಾಗಿದೆ.

ರಾಣಿಬೆನ್ನೂರು ವಿಧಾನಸಭೆ ಕ್ಷೇತ್ರಕ್ಕೆ ಅನರ್ಹ ಶಾಸಕ ಆರ್‌. ಶಂಕರ್‌ ಅವರಿಗೆ ಟಿಕೆಟ್‌ ನೀಡಲು ಬಿಜೆಪಿ ನಿರಾಕರಿಸಿದ ಬಳಿಕ ಕ್ಷೇತ್ರದ ಮೇಲೆ ಹಲವರ ಕಣ್ಣು ಬಿದ್ದಿತ್ತು. ಪಕ್ಷದ ಘಟಾನುಘಟಿ ನಾಯಕರು ತಮ್ಮ ಪುತ್ರರನ್ನು ಕಣಕ್ಕಿಳಿಸಲು ಪೈಪೋಟಿ ನಡೆಸಿದ್ದರು. ಈ ಅನಾರೋಗ್ಯಕರ ಪೈಪೋಟಿಯನ್ನು ನಾಜೂಕಾಗಿ ನಿಯಂತ್ರಿಸಿದ ಬಿಜೆಪಿ ಸ್ಥಳೀಯರಿಗೆ ಟಿಕೆಟ್‌ ಘೋಷಿಸಿ ಗೊಂದಲಕ್ಕೆ ತೆರೆ ಎಳೆಯಿತು. ಇನ್ನೇನು ಕ್ಷೇತ್ರದ ಟಿಕೆಟ್‌ ಗೊಂದಲ ಬಗೆಹರಿಯಿತೆಂದು ಎನ್ನುವಷ್ಟರಲ್ಲಿ ಬಿಜೆಪಿಗೆ ಈಗ ಬಂಡಾಯದ ಬಿಸಿ ತಟ್ಟಿದೆ.

ಕಳೆದ 2018ರ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತರಾದ ಡಾ| ಬಸವರಾಜ ಕೇಲಗಾರ ಬೆಂಬಲಿಗರು ಅರುಣಕುಮಾರ ಅವರಿಗೆ ಟಿಕೆಟ್‌ ಘೋಷಿರುವುದನ್ನು ಪ್ರಬಲವಾಗಿ ವಿರೋಧಿಸುತ್ತಿದ್ದಾರೆ. ಶನಿವಾರ ನಗರದಲ್ಲಿ ಬೆಂಬಲಿಗ ಕಾರ್ಯಕರ್ತರು ಕಚೇರಿಯಲ್ಲಿ ಮುಖಂಡರೊಂದಿಗೆ ವಾಗ್ವಾದ ಮಾಡಿ, ಕಚೇರಿ ಎದುರೇ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರಷ್ಟೇ ಅಲ್ಲ “ಡಾ| ಕೇಲಗಾರ ಅವರಿಗೆ ಟಿಕೆಟ್‌ ನೀಡದಿದ್ದರೆ ತಾವು ಸುಮ್ಮನಿರಲ್ಲ’ ಎಂಬ ಖಡಕ್‌ ಸಂದೇಶವನ್ನೂ ಪಕ್ಷದ ಹೈಕಮಾಂಡ್‌ಗೆ ರವಾನಿಸಿದ್ದಾರೆ. ಸ್ಥಳೀಯ ವಿರೋಧ ಬಿಜೆಪಿ ಮುಖಂಡರಿಗೆ ಅಕ್ಷರಶಃ ಬಿಸಿ ತುಪ್ಪವಾಗಿದೆ.

ಏಕಿಷ್ಟು ವಿರೋಧ?: ಅರುಣಕುಮಾರ ಪೂಜಾರ ಅವರಿಗೆ ಟಿಕೆಟ್‌ ನೀಡಿರುವುದಕ್ಕೆ ಸ್ಥಳೀಯವಾಗಿ ವ್ಯಾಪಕ ವಿರೋಧ ವ್ಯಕ್ತವಾಗಲು ಅನೇಕ ಕಾರಣಗಳಿವೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಅವರು ಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆಗ ಪಕ್ಷ ಅವರಿಗೆ ಟಿಕೆಟ್‌ ನೀಡಿರಲಿಲ್ಲ. ಡಾ| ಬಸವರಾಜಕೇಲಗಾರ ಅವರಿಗೆ ಟಿಕೆಟ್‌ ನೀಡಿತ್ತು. ಆಗ ಟಿಕೆಟ್‌ ವಂಚಿತ ಅರುಣಕುಮಾರ, ಪಕ್ಷದ ಆಗಿನ ಅಭ್ಯರ್ಥಿ ಡಾ| ಕೇಲಗಾರ ವಿರುದ್ಧವಾಗಿ ಕೆಲಸ ಮಾಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರಿಗೆ ಪಕ್ಷ ಈ ಬಾರಿ ಟಿಕೆಟ್‌ ನೀಡಿರುವುದು ಅಕ್ಷಮ್ಯ ಎಂಬುದು ಕೇಲಗಾರ ಬೆಂಬಲಿಗರ ಗಂಭೀರ ಆರೋಪ.

ಈ ಗಂಭೀರ ಆರೋಪ ಜತೆಗೆ ಪಕ್ಷನಿಷ್ಠೆ ಇಲ್ಲದ ಅರುಣಕುಮಾರ ಅವರು ಕೆ.ಎಸ್‌. ಈಶ್ವರಪ್ಪ ಪ್ರಭಾವ ಬಳಸಿಕೊಂಡು ಟಿಕೆಟ್‌ ಗಿಟ್ಟಿಸಿಕೊಂಡು ಬಂದಿದ್ದಾರೆ. ಸ್ಥಳೀಯ ವಾಸ್ತವ ಅರಿಯದೇ ಪಕ್ಷದ ಹಿರಿಯರು ಪಕ್ಷ ವಿರೋಧಿ  ಚಟುವಟಿಕೆ ಮಾಡಿದವರನ್ನೇ ಬೆಂಬಲಿಸುವುದು ಸರಿಯಲ್ಲ. ಇನ್ನು ಅರುಣಕುಮಾರ ಅವರಿಗೆ 2013ರ ಚುನಾವಣೆಯಲ್ಲಿ ಟಿಕೆಟ್‌ ನೀಡಲಾಗಿತ್ತು. ಆಗ ಅವರು ಕ್ಷೇತ್ರದಲ್ಲಿ ಕೇವಲ 9476 ಮತ ಪಡೆದು ಐದನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದರು. ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ ಗಮನಿಸಿದರೆ ಅರುಣಕುಮಾರ ಪೂಜಾರ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದು, ಇದೇ ಸಮುದಾಯಕ್ಕೆ ಸೇರಿದ, ತಮ್ಮದೇ ಆದ ಮತ ಬ್ಯಾಂಕ್‌ ಪ್ರಾಬಲ್ಯಯುಳ್ಳ 6-8 ಆಕಾಂಕ್ಷಿಗಳು ಸ್ಥಳೀಯವಾಗಿದ್ದರು. ಅವರೆಲ್ಲನ್ನು ಪಕ್ಷ ಕಡೆಗಣಿಸುವ ಮೂಲಕ ಎಲ್ಲ ಮುಖಂಡರ ಕೆಂಗಣ್ಣಿಗೂ ಗುರಿಯಾಗಿದೆ ಎಂಬ ಆರೋಪವೂ ಕೇಳಿ ಬಂದಿದೆ.

ಅರುಣ್‌ ಬೆಂಬಲಿಗರ ವಾದವೇನು?: ಟಿಕೆಟ್‌ ಘೋಷಿತ ಅರುಣಕುಮಾರ ಮಾತ್ರ ಈ ಆರೋಪಗಳನ್ನು ಅಲ್ಲಗಳೆಯುತ್ತಾರೆ. 2013ರಲ್ಲಿ ನಾನು ಸ್ಪರ್ಧಿಸಿದಾಗ ಪಕ್ಷದ ಸ್ಥಿತಿ ಬೇರೆಯೇ ಇತ್ತು. ಆಗ ಪಕ್ಷ ಬಿಜೆಪಿ-ಕೆಜೆಪಿ ಘಟಕಗಳಾಗಿ ಒಡೆದಿತ್ತು. ಈಗ ಪರಿಸ್ಥಿತಿ ಬೇರೆಯೇ ಇದೆ. ಅಂದಿನ ಪಕ್ಷದ ಸ್ಥಿತಿಯನ್ನು ಈಗ ಹೋಲಿಸುವುದು ಸರಿಯಲ್ಲ. ಮೊನ್ನೆಯಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಬಿಜೆಪಿ

ಮತಗಳ ಪ್ರಮಾಣ ಗಣನೀಯ ಹೆಚ್ಚಾಗಿದೆ. ನಾನು ಯಾವತ್ತೂ ಪಕ್ಷ ವಿರೋಧಿ  ಚಟುವಟಿಕೆ ಮಾಡಿಲ್ಲ. ಪಕ್ಷದ ವಿವಿಧ ವಿಭಾಗದಲ್ಲಿ ಪದಾಧಿಕಾರಿಯಾಗಿ ಮಾಡಿರುವ ಉತ್ತಮ ಕೆಲಸ ಗುರುತಿಸಿ ಪಕ್ಷ ಟಿಕೆಟ್‌ ನೀಡಿದೆಯೇ ಹೊರತು ಯಾರ ಶಿಫಾರಸ್ಸಿನಿಂದ ಟಿಕೆಟ್‌ ನೀಡಿಲ್ಲ ಎಂಬುದು ಅರುಣಕುಮಾರ ಬೆಂಬಲಿಗರ ವಾದ. ಒಟ್ಟಾರೆ ಕ್ಷೇತ್ರದಲ್ಲಿ ಅರುಣಕುಮಾರ ಹಾಗೂ ಡಾ| ಬಸವರಾಜ ಕೇಲಗಾರ ಈ ಎರಡೂ ಬೆಂಬಲಿಗ ಬಣಗಳ ಹೋರಾಟ ತಾರಕಕ್ಕೇರಿದೆ. ಟಿಕೆಟ್‌ ವಂಚಿತ ಆಕಾಂಕ್ಷಿಗಳಲ್ಲಿ ಬಹುತೇಕರು ಡಾ| ಬಸವರಾಜ ಕೇಲಗಾರ ಅವರ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿ ಅರುಣಕುಮಾರ ವಿರೋಧಿ ಬಣವನ್ನು ಸಮಾಧಾನ ಪಡಿಸುವುದೇ ಬಿಜೆಪಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.