ಸೈನಿಕ ಹುಳುವಿನ ಕೀಟ ಬಾಧೆ ತಡೆಯಲು ಪರಿಹಾರ

ಮಣ್ಣಿನಲ್ಲಿ ಲಘು ಪೋಷಕಾಂಶಗಳ ಕೊರತೆ ಹೆಚ್ಚಾಗಿ ಕಂಡುಬರುತ್ತಿದೆ.

Team Udayavani, Jul 6, 2022, 6:34 PM IST

ಸೈನಿಕ ಹುಳುವಿನ ಕೀಟ ಬಾಧೆ ತಡೆಯಲು ಪರಿಹಾರ

ರಾಣಿಬೆನ್ನೂರ: ಕಳೆದ ಒಂದು ವಾರದಿಂದ ಮಳೆ ವಿಳಂಬವಾಗಿರುವುದರಿಂದ 25-30 ದಿನಗಳ ಗೋವಿನ ಜೋಳದ ಬೆಳೆಗೆ ತೀವ್ರವಾಗಿ ಸೈನಿಕ ಹುಳುವಿನ ಕೀಟದ ಬಾಧೆ ಕಂಡುಬಂದಿದೆ.

ಜೊತೆಗೆ ಲಘು ಪೋಷಕಾಂಶ ಜಿಂಕ್‌ ಕೊರತೆ ಅಲ್ಲಲ್ಲಿ ಕಂಡುಬಂದಿದೆ. ಕೆಲ ಭಾಗಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರಮುಖವಾಗಿ ಬೆಳೆಯಲಾದ ಮೆಕ್ಕೆಜೋಳ ಬೆಳೆಯಲ್ಲಿ ಈ ಸೈನಿಕ ಹುಳುವಿನ ನಿರ್ವಹಣೆಗಾಗಿ ರೈತರು ಸಮಗ್ರ ನಿರ್ವಹಣಾ ಕ್ರಮಗಳಾದ ಹೊಲದ ಸೂತ್ತಮುತ್ತಲಿನ ಕಳೆಯ ಸಸ್ಯಗಳನ್ನು ಮತ್ತು ಕಸಗಳನ್ನು ಸಂಪೂರ್ಣವಾಗಿ ನಾಶಪಡಿಸಬೇಕು ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ| ಅಶೋಕ ಪಿ. ತಿಳಿಸಿದರು.

ತಾಲೂಕಿನ ಇಟಗಿ ಗ್ರಾಮದ ಜಮೀನಿನಲ್ಲಿ ಗೋವಿನ ಜೋಳ ಬೆಳೆದ ಪ್ರಗತಿಪರ ರೈತ ಗುಡ್ಡಪ್ಪ ಮಹದೇವಪ್ಪ ಬಿದರಿ ಇವರ ಕ್ಷೇತ್ರಕ್ಕೆ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು. ಮೆಕ್ಕೆಜೋಳದ ಬೆಳೆಯಲ್ಲಿ ಪೋಷಕಾಂಶದ ಕೊರತೆ ಹಾಗೂ ಸೈನಿಕ (ಲದ್ದಿ) ಕೀಟದ ಬಾಧೆ ಕಂಡುಬಂದಿದ್ದು, ರೈತರೊಂದಿಗೆ ಚರ್ಚಿಸಿ, ಹಾವೇರಿ ಜಿಲ್ಲೆಯಲ್ಲಿ ಗೋವಿನ ಜೋಳವು ಮುಖ್ಯವಾಗಿದ್ದು, ಆದಕಾರಣ ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಲ್ಲಿ ಹಾನಿ ತಪ್ಪಿಸಿಕೊಳ್ಳಲು ಸಾಧ್ಯ ಎಂದರು.

ಬಾಧೆಗೊಳಗಾಗಿರುವ ಪ್ರದೇಶದ ಪ್ರತಿಯೊಬ್ಬ ರೈತರು ತಮ್ಮ ಹೊಲದಲ್ಲಿ ಸಾಮೂಹಿಕವಾಗಿ ಸಂಜೆ 7 ರಿಂದ 9 ವರೆಗೆ ದೀಪದ ಬಲೆಗಳನ್ನು ಇಟ್ಟು ಪಂತಗಗಳಿಗೆ ಆಕರ್ಷಿಸಿ ನಾಶಪಡಿಸಬೇಕು. ಹೊಲದ ಸುತ್ತಲೂ ಬೊದು ಹರಿತೆಗೆದು ಅದರಲ್ಲಿ ಮೇಲಾಥಿಯಾನ್‌ ಅಥವಾ ಪೆನ್ವಲರೇಟ್‌ ಕೀಟನಾಶಕಗಳನ್ನು ಹಾಕಿ ಕೀಟವು ಒಂದು ಹೊಲದಿಂದ ಮತ್ತೂಂದು ಹೊಲಕ್ಕೆ ಹೋಗದಂತೆ ತಪ್ಪಿಸಲು ಸಾಮೂಹಿಕವಾಗಿ ಈ ಕ್ರಮ ಅಳವಡಿಸಬೇಕು ಎಂದು ಸಲಹೆ ನೀಡಿದರು. ಮರಿ ಹುಳುಗಳು ಒಂದು ಅಥವಾ ಎರಡನೇ ಹಂತದಲ್ಲಿದಾಗ ಮತ್ತು ಬೆಳೆಗಳ ಎತ್ತರ ಕಡಿಮೆ ಇದ್ದಲ್ಲಿ ಇದರ ಹತೋಟಿಗಾಗಿ ಕೀಟನಾಶಕಗಳಾದ ಎಮಾಮೆಕ್ಟಿನ್‌ ಬೆಂಜೊಯೇಟ್‌ ಪ್ರತಿ ಲೀಟರ್‌ ನೀರಿಗೆ 0.25 ಗ್ರಾಂ ನಂತೆ ನೀರಿಗೆ ಅಥವಾ ಲ್ಯಾಂಬಾxಸೈಹ್ಯಾಲೊಥ್ರಿನ್‌ ಶೇ. 4.9 ಇ.ಸಿ. ಪ್ರ.ಲೀ. ನೀರಿಗೆ 0.5 ಮಿ.ಲೀ. ಲೀಟರ್‌ನಂತೆ ಬೆರೆಸಿ ಸಿಂಪರಣೆ ಮಾಡಬೇಕು ಎಂದರು.

ಕೇಂದ್ರದ ಮಣ್ಣು ವಿಜ್ಞಾನಿಗ ಡಾ| ರಾಜಕುಮಾರ ಜಿ.ಆರ್‌. ಮಾತನಾಡಿ, ಗೋವಿನ ಜೋಳದ ಬೆಳೆಯಲ್ಲಿ ಕಂಡು ಬರುವ ಪೋಷಕಾಂಶಗಳ ಕೊರತೆ ಬಗ್ಗೆ ವಿವರಿಸಿ, ಎಲೆಗಳು ಕೆಂಪಾಗಿ ಕಾಣುತ್ತಿದ್ದು, ಇದು ರಂಜಕದ ಕೊರತೆಯಾಗಿರುತ್ತದೆ. ಜೊತೆಗೆ ಎಲೆಯ ಅಂಚಿನಲ್ಲಿ ಮತ್ತು ಮಧ್ಯದ ಭಾಗದಲ್ಲಿ ಬಿಳಿಯ ಪಟ್ಟಿಗಳು ಕಾಣಿಸುತ್ತಿದ್ದು, ಇದು ಸತುವಿನ ಕೊರತೆ ಆಗಿರುತ್ತದೆ. ಈ ಪೋಷಕಾಂಶಗಳು ಈ ಬೆಳೆಯ ಎಲೆಗಳು ಕೆಂಪಾಗಿ ಮತ್ತು ಬೆಳ್ಳಗೆ ಕಂಡು ಬಂದ ತಕ್ಷಣ 19:19:19 ನೀರಿನಲ್ಲಿ ಕರಗುವ ರಸಗೊಬ್ಬರ (ಪ್ರತಿ ಲೀಟರ್‌ ನೀರಿಗೆ 5 ಗ್ರಾಂ) ಹಾಗು ಜಿಂಕ್‌ ಸಲೆಧೀಟ್‌ (ಪ್ರತಿ ಲೀಟರ್‌ ನೀರಿಗೆ 2.5 ಗ್ರಾಂ) ಮಿಶ್ರಣ ಮಾಡಿ ಸಿಂಪರಣೆ
ಮಾಡಬೇಕು ಎಂದರು.

ತದನಂತರ 15 ದಿವಸಗಳ ನಂತರ ಕೊರತೆ ಇದ್ದರೆ ಮತ್ತೂಮ್ಮೆ ಸಿಂಪರಣೆ ಮಾಡುವ ಅವಶ್ಯಕತೆ ಇದೆ. ಜಿಲ್ಲೆಯಲ್ಲಿ ಸತತವಾಗಿ ಏಕಬೆಳೆಯಾಗಿ ಗೋವಿನಜೋಳ ಬೆಳೆಯುತ್ತಿದ್ದು, ಈ ಬೆಳೆಯು ಎಕದಳದ ಧಾನ್ಯದ ಗುಂಪಿಗೆ ಸೇರಿದ್ದು ಬೇರೆ ಬೆಳೆಗೆ ಹೋಲಿಸಿದಾಗ ಸತತವಾಗಿ ಬೆಳೆಯುವುದರಿಂದ ಹೆಚ್ಚಾಗಿ ಪೋಷಕಾಂಶಗಳನ್ನು ಹೀರಿಕೊಂಡು ಮಣ್ಣಿನಲ್ಲಿ ಕೊರತೆ ಉಂಟು ಮಾಡುತ್ತದೆ.

ಇತ್ತೀಚಿನ ದಿನಗಳಲ್ಲಿ ರೈತರು ಹೆಚ್ಚಾಗಿ ಮೂಲ ರಸಗೊಬ್ಬರಗಳನ್ನು ಬಳಸುತ್ತಿದ್ದು ಸಾವಯವ ಗೊಬ್ಬರಗಳಾದ ತಿಪ್ಪೆಗೊಬ್ಬರ, ಎರೆಹುಳು ಗೊಬ್ಬರ ಮತ್ತು ಹಸಿರೆಲೆ ಗೊಬ್ಬರಗಳ ಬಳಸುವಿಕೆ ಪ್ರಮಾಣ ಕಡಿಮೆಯಾಗಿರುತ್ತದೆ. ಇದರಿಂದಾಗಿ ಮಣ್ಣಿನಲ್ಲಿ ಲಘು ಪೋಷಕಾಂಶಗಳ ಕೊರತೆ ಹೆಚ್ಚಾಗಿ ಕಂಡುಬರುತ್ತಿದೆ. ಉದಾಹರಣೆಗೆ ಸತು, ಕಬ್ಬಿಣ, ಮೆಗ್ನಿಶಿಯಂ ಈ ಲಘು ಪೋಷಕಾಂಶಗಳ ಕೊರತೆಯಿಂದ ಬೆಳೆಗಳಲ್ಲಿ ಹೆಚ್ಚಿನ ಇಳುವರಿ ಕುಂಠಿತವಾಗುತ್ತದೆ. ಆದ್ದರಿಂದ ಅವುಗಳ ಪೂರೈಕೆ ಅತ್ಯಗತ್ಯೆ ಎಂದು ತಿಳಿಸಿದರು. ಈ ಸಮಯದಲ್ಲಿ ತೋಟಗಾರಿಕೆ ವಿಜ್ಞಾನಿ ಡಾ| ಸಂತೋಷ ಎಚ್‌.ಎಂ. ಹಾಗೂ ಗ್ರಾಮದ ರೈತರಾದ ಬಸವರಾಜ ಹಾಲಪ್ಪನವರು ಇತರರಿದ್ದರು.

ಟಾಪ್ ನ್ಯೂಸ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

By Polls: ನಾನು ಉಳಿಯಬೇಕಾದರೆ ಶಿಗ್ಗಾವಿಯಲ್ಲಿ ಪಠಾಣ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

ಗತ್ತಿನೊಂದಿಗೆ ಅಖಾಡಕ್ಕಿಳಿದ ರಾಕ್‌ಸ್ಟಾರ್‌, ಜನನಾಯಕ, ಘಟಸರ್ಪ; ದಿಕ್ಕೆಟ್ಟು ಓಡಿದ ಹೋರಿ..

Haveri-Riot

Waqf Issue: ವಕ್ಫ್ ಭೀತಿಯಿಂದ ಕಡಕೋಳದಲ್ಲಿ ಕಲ್ಲು ತೂರಾಟ: 32 ಮಂದಿ ವಶ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್‌

2(1)

Puttur: ವಿದ್ಯುತ್‌ ಕಂಬ ಏರುವ ತರಬೇತಿ!; ಪವರ್‌ಮನ್‌ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ

1(1)

Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.