ಅನ್ನದಾತರಿಗೆ ಬಾಡಿಗೆ ದರ “ಭಾರ’
ಕೃಷಿ ಕ್ಷೇತ್ರಕ್ಕೂ ತೈಲ ಬೆಲೆ ಹೆಚ್ಚಳದ ಬಿಸಿ! ಯಂತ್ರೋಪಕರಣಗಳ ಬಾಡಿಗೆ ದರವೇ ದುಬಾರಿ
Team Udayavani, Jun 28, 2021, 9:23 PM IST
ವೀರೇಶ ಮಡ್ಲೂರ
ಹಾವೇರಿ: ದಿನದಿಂದ ದಿನಕ್ಕೆ ಪೆಟ್ರೋಲ್- ಡೀಸೆಲ್ ಬೆಲೆ ಹೆಚ್ಚಳದ ಬಿಸಿ ಕೃಷಿ ಕ್ಷೇತ್ರಕ್ಕೂ ತಟ್ಟಿದ್ದು, ಕೃಷಿ ಯಂತ್ರೋಪಕರಣಗಳ ಬಾಡಿಗೆ ದರದಲ್ಲಿ ಗಣನೀಯ ಏರಿಕೆಯಾಗಿದೆ. ಮೊದಲೇ ಕೊರೊನಾ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದ ರೈತರಿಗೆ ಯಂತ್ರೋಪಕರಣಗಳ ಬಾಡಿಗೆ ದರ ಹೆಚ್ಚಳಗೊಂಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.
ಕೊರೊನಾ ಆರ್ಥಿಕ ಸಂಕಷ್ಟದ ದಿನಗಳಲ್ಲಿ ಸಾಲಸೋಲ ಮಾಡಿ ರೈತರು ಬಿತ್ತನೆ ಬೀಜ- ಗೊಬ್ಬರ ಖರೀದಿಸುತ್ತಿದ್ದಾರೆ. ಈ ನಡುವೆ ಮೇಲಿಂದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳವಾಗುತ್ತಿರುವುದು ಆಧುನಿಕ ಕೃಷಿ ಕ್ಷೇತ್ರದ ಮೇಲೆ ಕರಿನೆರಳು ಬಿರುತ್ತಿದೆ. ಇಂದಿನ ಆಧುನಿಕ ಕೃಷಿ ಪದ್ಧತಿ ಸಂಪೂರ್ಣ ಯಂತ್ರೋಪಕರಣಗಳನ್ನೇ ಅವಲಂಬಿಸಿದ್ದು, ಪೆಟ್ರೋಲ್-ಡೀಸೆಲ್ ಬಳಕೆ ಸಾಮಾನ್ಯವಾಗಿದೆ. ಸದ್ಯ ಪ್ರತಿ ಲೀಟರ್ ಡೀಸೆಲ್ ಬೆಲೆ 93.71 ರೂ., ಪೆಟ್ರೋಲ್ ಬೆಲೆ 100 ರೂ. ಗಡಿ ದಾಟಿದೆ.
ಸದ್ಯ ಮುಂಗಾರು ಹಂಗಾಮಿನ ಬಿತ್ತನೆ ಕಾರ್ಯ ಭರದಿಂದ ಸಾಗಿದ್ದು, ಕೃಷಿ ಯಂತ್ರೋಪಕರಣಗಳ ಬಳಕೆ ಸಾಮಾನ್ಯವಾಗಿದೆ. ತೈಲ ಬೆಲೆಯಲ್ಲಿ ಏರಿಕೆಯಾದ ಬೆನ್ನಲ್ಲೇ ಕೃಷಿಗೆ ಉಪಯುಕ್ತವಾದ ಟ್ರ್ಯಾಕ್ಟರ್, ಕಟಾವು ಯಂತ್ರ, ಜೆಸಿಬಿ, ಟಂಟಂ, ಆಟೋಗಳ ಬಾಡಿಗೆ ದರ ಮಾಲೀಕರು ಸದ್ದಿಲ್ಲದೇ ಹೆಚ್ಚಿಸಿದ್ದಾರೆ. ಇದರಿಂದ ಮಧ್ಯಮ, ಸಣ್ಣ ಹಾಗೂ ಅತಿ ಸಣ್ಣ ರೈತರು ಯಂತ್ರೋಪಕರಣಗಳಿಗೆ ದುಬಾರಿ ಬೆಲೆ ತೆತ್ತು ಬಾಡಿಗೆ ಪಡೆದು ಕೃಷಿ ಚಟುವಟಿಕೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ.
ತೈಲ ದರ ಇಳಿಕೆಗೆ ರೈತರ ಒತ್ತಾಯ: ಪೆಟ್ರೋಲ್- ಡೀಸೆಲ್ ದರ ಹೆಚ್ಚಳ ಎಲ್ಲ ಕ್ಷೇತ್ರಗಳ ಮೇಲು ಪರಿಣಾಮ ಬೀರಿದ್ದು, ಆದರೆ ಕೃಷಿ ಕ್ಷೇತ್ರ ಉಳಿದ ಕ್ಷೇತ್ರಗಳಿಂದ ಹೆಚ್ಚಿನ ಪ್ರಮಾಣದಲ್ಲಿ ಸಮಸ್ಯೆ ಎದುರಿಸುತ್ತಿದೆ. ಇಂದಿನ ಆಧುಕಿನ ಕೃಷಿ ಪದ್ಧತಿ ಬಹುತೇಕ ಯಂತ್ರೋಪಕರಣಗಳನ್ನೇ ಅವಲಂಬಿಸಿದ್ದು, ದಿನದಿಂದ ದಿನಕ್ಕೆ ದರದಲ್ಲಿ ಏರಿಕೆಯಾಗುತ್ತಿರುವ ಡೀಸೆಲ್ ಖರೀದಿಸಿ, ಕೃಷಿ ಮಾಡುವುದು ರೈತರಿಗೆ ಸವಾಲಾಗಿ ಪರಿಣಮಿಸಿದೆ. ಪೆಟ್ರೋಲ್-ಡೀಸೆಲ್ ಬೆಲೆ ತಗ್ಗಿಸುವ ಜತೆಗೆ ಇಂಧನದ ಮೇಲೆ ವಿಧಿ ಸುವ ತೆರಿಗೆ ಪ್ರಮಾಣ ಕೇಂದ್ರ-ರಾಜ್ಯ ಸರ್ಕಾರಗಳು ಕೂಡಲೇ ಕಡಿತಗೊಳಿಸಬೇಕು ಎಂಬುದು ರೈತರ ಆಗ್ರಹ.
ಯಂತ್ರೋಪಕರಣಗಳ ಬಾಡಿಗೆ ದರ ಏರಿಕೆ: ಸದ್ಯ ಕೊರೊನಾ ಸೋಂಕಿನ ಪರಿಣಾಮ ಲಾಕ್ ಡೌನ್ ಘೋಷಿಸಿದ್ದರಿಂದ ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಈ ನಡುವೆ ಕೃಷಿ ಸಂಬಂಧಿತ ಯಂತ್ರೋಪಕರಣಗಳ ಬಾಡಿಗೆ ದರ ಏರಿಕೆ ಮಾಡಿರುವುದು ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಅಲ್ಲದೇ ಅನೇಕ ರೈತರು ಕೃಷಿಯಿಂದ ವಿಮುಖರಾಗುವಂತೆ ಮಾಡಿದೆ. ಕೃಷಿ ಸಂಬಂಧಿತ ರೋಟರ್ ಹೊಡೆಯಲು, ಮಣ್ಣು ಲೆವಲ್ ಮಾಡಲು, ರೆಂಟಿ ಹೊಡೆಯಲು, ಟ್ರಾÂಕ್ಟರ್ ಕೂರಿಗೆಯಿಂದ ಬಿತ್ತನೆ, ಜೆಸಿಬಿಯಿಂದ ಕಾಲುವೆ ಹೂಳು ತೆಗೆಯಲು, ಜಮೀನುಗಳಗೆ ಒಡ್ಡು ಹಾಕಲು, ಕೂಲಿಕಾರರನ್ನು ಜಮೀನುಗಳಿಗೆ ಕರೆದೊಯ್ಯುವ ಟಂಟಂ, ಆಟೋಗಳ ಬಾಡಿಗೆ ದರ ಏರಿಕೆ ಮಾಡಿದ್ದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.