ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಾಸಕರಿಗೆ ಮನವಿ
Team Udayavani, Feb 3, 2020, 3:01 PM IST
ಅಕ್ಕಿಆಲೂರು: ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್ ಮತ್ತು ಡಾಟಾ ಎಂಟ್ರಿ ಆಪರೇಟರ್‌ಗಳ ವಿವಿಧ ಬೇಡಿಕೆ ಈಡೇರಿಕೆ ಕುರಿತು ಸರ್ಕಾರದ ಗಮನ ಸೆಳೆಯಬೇಕೆಂದು ಒತ್ತಾಯಿಸಿ ಶಾಸಕ ಸಿ.ಎಂ. ಉದಾಸಿಯವರಿಗೆ ಮನವಿ ಸಲ್ಲಿಸಲಾಯಿತು.
ಡಿಜಿಟಲ್ ಭಾರತದ ಕನಸು ಸಾಕಾರಗೊಳಿಸುವಲ್ಲಿ ಡಾಟಾ ಎಂಟ್ರಿ ಆಪರೇಟರ್‌ಗಳ ಶ್ರಮ ದೊಡ್ಡದು. ಸರ್ಕಾರದ ಎಲ್ಲ ವಿಧವಾದ ಯೋಜನೆಗಳ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಕೈಜೋಡಿಸುವ ಡಾಟಾ ಎಂಟ್ರಿ ಆಪರೇಟರ್‌ಗಳ ಕೆಲಸಕ್ಕೆ ಭದ್ರತೆ ಇಲ್ಲ. ಸೂಕ್ತ ವೇತನವೂ ದೊರೆಯುತ್ತಿಲ್ಲ ಎನ್ನುವುದು ಬೇಸರದ ಸಂಗತಿಯಾಗಿದೆ. ಡಾಟಾ ಎಂಟ್ರಿ ಆಪರೇಟರ್‌ಗಳ ಬದುಕಿಗೆ ಭದ್ರತೆ ಕಲ್ಪಿಸಲು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಗ್ರೇಡ್-2 ಹುದ್ದೆಗೆ ಸರಿಸಮವಾಗಿ ಅವರಿಗೆ ವೇತನ ದೊರಕಿಸಿ ಕೊಡುವ ಕಾರ್ಯವಾಗಬೇಕಿದೆ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಸುರೇಶ ಹುದ್ದಾರ, ವಿನಾಯಕ ವೆಂಕೋಜಿ, ಬಸವರಾಜ ಚವ್ಹಾಣ, ಗಿರೀಶ ಮೂಡಿ, ಸುಲೇಮಾನ್ ಹುಡೇದ, ಸುನೀಲ್ ಭಾಗಣ್ಣನವರ, ಜಗದೀಶ ದಾನಮ್ಮನವರ, ಪ್ರಶಾಂತ ರೊಟ್ಟಿ, ಮಂಜುನಾಥ ಮಡಿವಾಳರ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.