ಬ್ಯಾಡಗಿ ‘ಜಲಶಕ್ತಿ’ಗೆ ಅಳವಡಿಸಲು ಕೋರಿಕೆ

•ನೀರು ಬರಿದಾದರೆ ಬದುಕು ಬರಡು •ತುಂಗಭದ್ರಾ-ವರದಾ ನದಿಯಿಂದ ನೀರು ತುಂಬಿಸಿ

Team Udayavani, Jul 27, 2019, 9:34 AM IST

hv-tdy-2

ಹಾವೇರಿ: ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಮಾತನಾಡಿದರು.

ಹಾವೇರಿ: ಜಿಲ್ಲೆಯ ಅತ್ಯಂತ ಬರಪೀಡಿತ ಒಣ ಭೂಮಿ ಹೊಂದಿರುವ ಹಾಗೂ ಎತ್ತರ ಭೂ ಪ್ರದೇಶವಾಗಿರುವ ಬ್ಯಾಡಗಿ ತಾಲೂಕನ್ನು ಜಲಶಕ್ತಿ ಯೋಜನೆಗೆ ಅಳವಡಿಸುವಂತೆ ಕೇಂದ್ರದ ಜಲಶಕ್ತಿ ಅಭಿಯಾನದ ಅಧಿಕಾರಿಗಳಿಗೆ ಕೋರಲಾಗುವುದು ಎಂದು ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಸಭಾಂಗಣ ದಲ್ಲಿ ಜಿಪಂ, ಜಿಲ್ಲಾಡಳಿತ, ಕೃಷಿ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಜಲಶಕ್ತಿ ಅಭಿಯಾನದಡಿ ಕೇಂದ್ರದ ನಿಯೋಗದೊಂದಿಗೆ ಸ್ವಯಂಸೇವಾ ಸಂಸ್ಥೆಗಳು ಹಾಗೂ ರೈತರೊಂದಿಗೆ ನಡೆದ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಯೋಗಿಕವಾಗಿ ಜಲಶಕ್ತಿ ಯೋಜನೆಯಡಿ ರಾಣಿಬೆನ್ನೂರ ತಾಲೂಕನ್ನು ತಾಲೂಕಾಗಿ ಆಯ್ಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಯೋಜನೆ ಬ್ಯಾಡಗಿಗೆ ವಿಸ್ತರಿಸಲು ಕೋರಲಾಗುವುದು. ನೀರಿನ ಅಭಾವ ಎದುರಿಸುವ ಪ್ರದೇಶದಲ್ಲಿ ಆದ್ಯತೆ ಮೇರೆಗೆ ಈ ಕಾರ್ಯಕ್ರಮ ಅನುಷ್ಠಾನಕ್ಕೆ ಒತ್ತು ನೀಡಬೇಕು ಎಂದರು. ಜಲಶಕ್ತಿ ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆ. ಜಲ ಮರುಪೂರಣ ಹಾಗೂ ಜಲವೃದ್ಧಿ ಕಾರ್ಯಕ್ರಮಗಳ ಕುರಿತಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿಸಲಾಗಿದೆ. ರಾಜ್ಯ ಸರ್ಕಾರ ಕಳೆದೊಂದು ವರ್ಷದಿಂದಲೇ ಕರ್ನಾಟಕದಲ್ಲಿ ಜಲಮೂಲಗಳ ರಕ್ಷಣೆ ಹಾಗೂ ಜಲ ವೃದ್ಧಿಸುವ ಮತ್ತು ಮಿತ ಬಳಕೆ ಕುರಿತಂತೆ ಜಾಗೃತಿ ಮೂಡಿಸಲು ಜಲಾಮೃತ ಯೋಜನೆ ರೂಪಿಸಿದೆ. ಈ ಕಾರ್ಯಕ್ರಮ ಜಿಲ್ಲೆಯಲ್ಲಿ ಸಮಪರ್ಕವಾಗಿ ಅನುಷ್ಠಾನಗೊಳ್ಳಬೇಕು ಎಂದರು.

ನೀರು ತುಂಬಿಸುವ ಕೆಲಸವಾಗಲಿ: ಜಿಲ್ಲೆಯಲ್ಲಿ ಕೃಷಿ ಉತ್ಪಾದನೆ, ಬೀಜೋತ್ಪಾದನೆಯಲ್ಲಿ ಏಷ್ಯಾದಲ್ಲೇ ಮುಂಚೂಣಿಯಲ್ಲಿರುವ ಬ್ಯಾಡಗಿ ತಾಲೂಕಿನ ರೈತರು ಇಂದು ನೀರು ಹಾಗೂ ಮಳೆ ಕೊರತೆಯಿಂದ ಸಂಕಷ್ಟದಲ್ಲಿದ್ದಾರೆ. ತಾಲೂಕಿನಲ್ಲಿ 300 ಕೆರೆಗಳಿದ್ದು, ತುಂಗಭದ್ರಾ ಮತ್ತು ವರದಾ ನದಿಯಿಂದ ನೀರು ತುಂಬಿಸುವ ಕೆಲಸವಾಗಬೇಕಾಗಿದೆ ಎಂದರು.

ಜಲಶಕ್ತಿ ಅಭಿಯಾನದ ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಜಿಲ್ಲೆಗೆ ಆಗಮಿಸಿರುವ ಕೇಂದ್ರ ಗಣಿ ಮಂತ್ರಾಲಯದ ಉಪ ಮಹಾನಿರ್ದೇಶಕಿ ಅನುಪಮಾ ಲಹರಿ ಮಾತನಾಡಿ, ನೀರು ಬರಿದಾದರೆ ಮನುಕುಲದ ಬದುಕು ಬರಡಾಗುತ್ತದೆ. ಮಳೆ ಬೀಳುವ ಸಮಯದ ವ್ಯತ್ಯಯ, ಮಳೆ ಕೊರತೆ ಕಾರಣ ನೀರಿನ ಬೃಹದಾಕಾರ ಸಮಸ್ಯೆ ಎದುರಾಗಿದೆ. ಈ ಕಾರಣದಿಂದ ಕೇಂದ್ರ ಸರ್ಕಾರ ಜಲಶಕ್ತಿ ಸಂರಕ್ಷಣಾ ಅಭಿಯಾನ ಆರಂಭಿಸಿದೆ. ಜಲ ರಕ್ಷಣೆ, ಮಳೆ ನೀರು ಕೊಯ್ಲು, ಭೂಮಿಯಲ್ಲಿ ಮಳೆ ನೀರು ಇಂಗಿಸುವುದು, ಜಲಮೂಲಗಳ ಪುನಶ್ಚೇತನ, ನೀರಿನ ಮಿತ ಬಳಕೆ ಕುರಿತಂತೆ ದೇಶಾದ್ಯಂತ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ದೇಶದಲ್ಲೇ ಕಡಿಮೆ ಮಳೆ ಬೀಳುವ ಹಾಗೂ ಬರಪೀಡಿತ ರಾಜ್ಯಗಳಲ್ಲಿ ಎರಡನೇ ಸ್ಥಾನ ಕರ್ನಾಟಕ ರಾಜ್ಯಕ್ಕಿದೆ. ನೀರಿನ ಜಾಗೃತಿ ಅಭಿಯಾನವನ್ನು ಕೇಂದ್ರ ಸರ್ಕಾರ ಆರಂಭಿಸುವ ಮೊದಲೇ ಕರ್ನಾಟಕ ರಾಜ್ಯದಲ್ಲಿ ಜಲಾಮೃತ ಕಾರ್ಯಕ್ರಮಗಳ ಮೂಲಕ ಜಲಮೂಲಗಳ ಪುನಶ್ಚೇತನ ಹಾಗೂ ಜಲರಕ್ಷಣೆ ಜಾಗೃತಿ ಆರಂಭಿಸಿರುವುದು ಸಂತೋಷದಾಯಕ. ದೇಶದ 252 ತಾಲೂಕುಗಳನ್ನು ಆಯ್ಕೆ ಮಾಡಿ ನೀರು ಸಂರಕ್ಷಣೆ, ನೀರಿನ ಮಿತ ಬಳಕೆ ಕುರಿತಂತೆ ಸರ್ಕಾರೇತರ ಸ್ವಯಂ ಸೇವಾ ಸಂಘಗಳು, ರೈತರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ. ಅನುಷ್ಠಾನಗೊಂಡಿರುವ ಜಲರಕ್ಷಣೆ ಮಾದರಿ ಸಂಗ್ರಹಿಸಿ ಕೇಂದ್ರಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದರು.

ಜಲಶಕ್ತಿ ವೃದ್ಧಿಸಲು ಅಭಿಯಾನ: ಜಿಪಂ ಸಿಇಒ ಕೆ.ಲೀಲಾವತಿ ಮಾತನಾಡಿ, ನೀರಿನ ಪ್ರಜ್ಞಾವಂತ ಬಳಕೆ, ಮಿತ ಬಳಕೆ, ಜಲ ಸಾಕ್ಷರತೆ, ಮಳೆ ಆಕರ್ಷಣೆಗೆ ಹಸರೀಕರಣ, ಸಸಿ ನೆಡುವ ಕಾರ್ಯಕ್ರಮ, ಮಳೆ ಕೊಯ್ಲು, ಕೆರೆ-ಕಟ್ಟೆ, ಹಳ್ಳ-ಕೊಳ್ಳ, ಬಾವಿಗಳ ಜಲಮರುಪೂರ್ಣದಂಥ ಕಾರ್ಯಕ್ರಮ ಉತ್ತೇಜಿಸುವ ಕಾರ್ಯಕ್ರಮ ಇದಾಗಿದೆ. ಇಂದು ರೈತರ ಸ್ವಯಂ ಸೇವಾ ಸಂಸ್ಥೆಗಳ ಸಲಹೆ ಸ್ವೀಕರಿಸಲು ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

ಜಲ ಸಂವಾದ: ಜಲಶಕ್ತಿ ವೃದ್ಧಿಗೆ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಕುರಿತಂತೆ ಸಂವಾದದಲ್ಲಿ ಭಾಗವಹಿಸಿದ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳಾದ ವನಸಿರಿ ಸಂಸ್ಥೆಯ ಎಸ್‌.ಪಿ. ಬಳೆಗಾರ, ಕಾಕೋಳ ಗ್ರಾಮದ ಪ್ರಗತಿಪರ ರೈತ ಚನ್ನಬಸಪ್ಪ, ಮೋಟೆಬೆನ್ನೂರಿನ ರಮೇಶ ಕೃಷ್ಣಪ್ಪ, ಕಮದೋಡದ ಯಲ್ಲಪ್ಪ ಶಿದ್ಲಿಂಗಪ್ಪ, ಅಬಲೂರಿನ ರೈತ ಮಹಿಳೆ ಶಶಿಕಲಾ ಇತರರು ಮಾತನಾಡಿ, ಜಮೀನುಗಳಲ್ಲಿ ನೀರು ಇಂಗಿಸುವ ವ್ಯವಸ್ಥೆಗೆ ಆದ್ಯತೆ ನೀಡಬೇಕು. ನೀಲಗಿರಿ ಪ್ಲಾಂಟ್‌ಗಳನ್ನು ತೆರೆವುಗೊಳಿಸಬೇಕು. ಬೆಟ್ಟಗುಡ್ಡಗಳಿಂದ ವ್ಯರ್ಥವಾಗಿ ಹರಿದು ಹೋಗುವ ನೀರು ಸಂಗ್ರಹಿಸಿ ಇಂಗಿಸುವ, ಕೆರೆ ಕಟ್ಟೆಗಳಲ್ಲಿ ನೀರು ಸಂಗ್ರಹಿಸುವ ಕಾರ್ಯಕ್ರಮ ಹಾಕಿಕೊಳ್ಳಬೇಕು. ಕಾಲುವೆಗಳ ಮೂಲಕ ನೀರು ಹರಿಸಿ ಕೆರೆ ತುಂಬಿಸಿ ಸಂಗ್ರಹಿಸುವ ಕೆಲಸವಾಗಬೇಕು. ನಿರುಪಯುಕ್ತ ಕೊಳವೆಬಾವಿಗಳನ್ನು ಜಿಗುಟು ಮಣ್ಣಿನಿಂದ ತುಂಬಬೇಕು. ಕನಿಷ್ಠ ಐದು ಎಕರೆ ಜಮೀನು ಇರುವ ರೈತ ಒಂದು ಕೃಷಿ ಹೊಂಡ, ಕನಿಷ್ಠ 500 ಸಸಿ ನೆಡುವುದನ್ನು ಕಡ್ಡಾಯಗೊಳಿಸಬೇಕು ಎಂಬ ಸಲಹೆಗಳು ಕೇಳಿಬಂದವು.

ಸಮಾರಂಭದಲ್ಲಿ ಕೇಂದ್ರ ಸರ್ಕಾರದ ಪುಣೆಯ ನೀರು ಮತ್ತು ಇಂಧನ ಸಂಶೋಧನಾ ಕೇಂದ್ರದ ವಿಜ್ಞಾನಿ ಬಿ.ಕೆ. ಗೌತಮ ಹಾಗೂ ವಿಜ್ಞಾನಿ ಕುಮಾರ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ ಬಿ., ಕೃಷಿ ವಿವಿಯ ಹನುಮನಮಟ್ಟಿ ಕೇಂದ್ರದ ಕೇಂದ್ರ ಡೀನ್‌ ಡಾ.ಬಸವರಾಜಪ್ಪ ಆರ್‌., ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶರಣಪ್ಪ ಭೋಗಿ, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಅಶೋಕ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್‌ ವಿಚಾರವಾಗಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.