ಮುಖ್ಯ ಶಿಕ್ಷಕಿ ವರ್ಗಾವಣೆಗೆ ಆಗ್ರಹ
Team Udayavani, Dec 19, 2017, 3:03 PM IST
ಕುಷ್ಟಗಿ: ಯಲಬುರ್ತಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯ ಸರ್ವಾಧಿಕಾರಿ ಧೋರಣೆಗೆ ಬೇಸತ್ತು ಕ್ಷೇತ್ರ
ಶಿಕ್ಷಣಾಧಿ ಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಸೋಮವಾರ ಇಲ್ಲಿನ ಬಿಇಒ
ಕಚೇರಿಯ ಎದುರು ಧರಣಿ ನಡೆಸಿದರು.
ಮುಖ್ಯ ಶಿಕ್ಷಕಿ ವಿರುದ್ಧ ಘೋಷಣೆ ಕೂಗಿದ ಗ್ರಾಮಸ್ಥರು,ಅವರನ್ನು ಬೇರೆ ಶಾಲೆಗೆ ವರ್ಗಾಯಿಸುವ ಭರವಸೆ ಸಿಗುವವರೆಗೂ ಧರಣಿ ಮುಂದುವರಿಸುವುದಾಗಿ ಎಚ್ಚರಿಸಿದರು. ಪ್ರಭಾರಿ ಶಿಕ್ಷಣಾಧಿಕಾರಿ ಕಚೇರಿಯಲ್ಲಿಲ್ಲದ ಹಿನ್ನೆಲೆಯಲ್ಲಿ ಅಲ್ಲಿನ ಸಿಬ್ಬಂದಿಗಳು ಯಲಬುರ್ತಿ ಗ್ರಾಮಸ್ಥರ ದೂರಿನನ್ವಯ ಸದರಿ ಮುಖ್ಯ ಶಿಕ್ಷಕಿ ವಿರುದ್ಧ ಕಾರಣ ಕೇಳಿ ನೋಟಿಸ್ ಜಾರಿಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬಿಇಒ ಸಹಿ ಮಾತ್ರ ಬಾಕಿ ಎಂದು ಸಮಜಾಯಿಷಿ ನೀಡಿದರೂ ಪ್ರಯೋಜನವಾಗಲಿಲ್ಲ.
ಯಲಬುರ್ತಿಯ 1ರಿಂದ 8ನೇ ತರಗತಿ ಶಾಲೆಯಲ್ಲಿ 287 ಮಕ್ಕಳಿದ್ದು, ಮಂಜೂರಾದ ಹುದ್ದೆಗಳ ಪ್ರಕಾರ 11 ಶಿಕ್ಷಕರಿರಬೇಕು. ಆದರೆ
ಸದ್ಯ 6 ಶಿಕ್ಷಕರಿದ್ದು, ಈ ಸಂದರ್ಭದಲ್ಲಿ ಶಿಕ್ಷಕ ಸಿದ್ದಪ್ಪ ಗುರುವಿನ್ ಅವರನ್ನು ಮುಖ್ಯ ಶಿಕ್ಷಕಿ ಏಕಪಕ್ಷೀಯವಾಗಿ ಬೇರೆ ಶಾಲೆಗೆ
ನಿಯೋಜಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಎಸಿಎಂಸಿ ಇಲ್ಲ. ಪಾಲಕರು ಶಾಲೆಯ ಕುಂದುಕೊರತೆ ಬಗ್ಗೆ ವಿಚಾರಿಸಿದರೆ ಉದ್ಧಟತನದಿಂದ ವರ್ತಿಸುತ್ತಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದರು.
ಈ ಬೆಳವಣಿಗೆಗಳಿಂದ ಬೇಸತ್ತು ಬಿಇಒಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಧರಣಿ ಆರಂಭಿಸಿರುವುದಾಗಿ
ಗ್ರಾಮಸ್ಥರು ತಿಳಿಸಿದರು. ಪ್ರತಿಭಟನೆಯಲ್ಲಿ ಸುರೇಶ ಗೋಗೇರಿ, ಯಮನೂರಪ್ಪ ಭೋವಿ, ಗುರುರಾಜ ಬಂಡಿ, ಮಹಿಬೂಬ್
ಸಾಬ್ ಮುಧೋಳ, ಮರಿಯಪ್ಪ ಗೋತಗಿ, ಶಿವು ಹಕಾಳ, ಕರ್ನಾಟಕ ವಿದ್ಯಾರ್ಥಿ ವಿಕಾಸ ಸಂಘಟನೆಯ ದೇವರಾಜ ಹಜಾಳದರ್,
ಶಿವಪ್ಪ, ಸುರೇಶ, ಶರಣಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.