ಇಪ್ಪತ್ತರ ಯುವಕರ ನಾಚಿಸುವ ತೊಂಬತ್ತೂಂದರ ನಿವೃತ್ತ ಶಿಕ್ಷಕ
Team Udayavani, Jun 29, 2021, 9:47 PM IST
ವರದಿ: ಸದಾಶಿವ ಹಿರೇಮಠ
ಬಂಕಾಪುರ: ಇವರನ್ನು ಕಂಡರೆ ಇಪ್ಪತ್ತರ ಯುವಕರೂ ಸಹ ನಾಚಿ ನೀರಾಗಬೇಕು. ಇವರ ಚಲನವಲನಗಳನ್ನು ಕಂಡು ಪ್ರತಿಯೊಬ್ಬರೂ ಬೆರಗಾಗಬೇಕು.
ಹೌದು. ಇವರೇ 91ರ ಇಳಿ ವಯಸ್ಸಿನಲ್ಲೂ ಸೈಕಲ್ ಏರಿ ನೀರು ತರುವ ಶಿಸ್ತಿನ ಶಿಪಾಯಿ, ನಿವೃತ್ತ ಶಿಕ್ಷಕ ಈಶ್ವರ ಅಗಡಿ. ನೌಕರಿ ಮಾಡುವಾಗ ಶಾಲೆಗೆ ತೆಗೆದುಕೊಂಡು ಹೋಗುತ್ತಿದ್ದ ಸೈಕಲ್ ಅನ್ನೇ ಇಂದಿಗೂ ಜೋಪಾನವಾಗಿಟ್ಟುಕೊಂಡು ಬಳಸುತ್ತಿರುವ ಇವರು ಸೈಕಲ್ ಏರಿ ಹೊರಟರೆ ಎಂತಹವರೂ ಕೂಡ ಇವರನ್ನು ನೋಡದೇ ಇರಲಾರರು.
ಬಾಲ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮೈಲಾರ ಮಹದೇವಪ್ಪನವರ ಧರ್ಮ ಪತ್ನಿ ಸಿದ್ದಮ್ಮನವರ ಕೈಯಲ್ಲಿ ಆಡಿ ಬೆಳೆದ ಇವರು 12ನೇ ವಯಸ್ಸಿನಲ್ಲಿಯೇ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧುಮುಕಿದ್ದರು. ಹಿರೆಕೇರೂರ ತಾಲೂಕು ಚಿನ್ನಮುಳಗುಂದ ಗ್ರಾಮದ ಶಾಲೆಯಲ್ಲಿ ಶಿಕ್ಷಣದೊಂದಿಗೆ ಲೇಜಿಂ, ಡೆಂಬಲ್ಸ್, ಹಗ್ಗ ಜಗ್ಗಾಟ, ಕವಾಯತ್, ಲಾಠಿ ಬಳಕೆ, ಕಬಡ್ಡಿ ಸೇರಿದಂತೆ ಇತರೆ ಕಲೆಗಳನ್ನು ಕರಗತ ಮಾಡಿಕೊಂಡು ಇವರು ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದರು. ಇವರ ಕೈಯಲ್ಲಿ ಕಲಿತ ವಿದ್ಯಾರ್ಥಿಗಳು ನೌಕರಿ ಮಾಡಿ ನಿವೃತ್ತಿ ಹೊಂದಿದ್ದಾರೆ.
2017-18 ರಲ್ಲಿ ವಿಶ್ವ ಹಿರಿಯ ದಿನಾಚರಣೆ ಅಂಗವಾಗಿ ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರಿಕೆಟ್ ಬಾಲ್ ಎಸೆತದಲ್ಲಿ ಪ್ರಥಮ, 100 ಮೀ. ಓಟದಲ್ಲಿ ಪ್ರಥಮ, ಥ್ರೋ ಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.