ರೈತರ ಮೇಲಿನ ಪ್ರಕರಣ ಹಿಂಪಡೆಯಿರಿ
ಸುಳ್ಳು ಪ್ರಕರಣ ದಾಖಲಿಸಿರುವುದು ಖಂಡನೀಯ
Team Udayavani, Jun 2, 2019, 2:18 PM IST
ಬ್ಯಾಡಗಿ: ರೈತರ ಮೇಲಿನ ಪ್ರಕರಣ ವಜಾ ಮಾಡುವಂತೆ ಒತ್ತಾಯಿಸಿ ಹಾನಗಲ್ಲ ತಾಲೂಕು ರೈತ ಸಂಘಟನೆ ಹಾಗೂ ಹಸಿರು ಸೇನೆ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.
ಹಾನಗಲ್ಲ: ರೈತರ ಮೇಲಿನ ಪ್ರಕರಣ ವಾಪಸ್ ಪಡೆಯುವಂತೆ ಒತ್ತಾಯಿಸಿ ಹಾನಗಲ್ಲ ತಾಲೂಕು ಹಸಿರು ಸೇನೆ ರೈತ ಸಂಘಟನೆ ತಾಲೂಕು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಶುಕ್ರವಾರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ತಾಲೂಕು ಹಸೀರು ಸೇನೆ ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ, ಸತತ 32 ವರ್ಷಗಳಿಂದ ರೈತಪರ ನ್ಯಾಯುತ ಹೋರಾಟ ಮಾಡಿ ಲಕ್ಷಾಂತರ ರೈತರಿಗೆ ನ್ಯಾಯಕೊಡಿಸಿದ ಕೀರ್ತಿ ಜಿಲ್ಲಾ ಹಾಗೂ ತಾಲೂಕು ಹಸೀರು ಸೇನೆ ರೈತ ಸಂಘಟನೆಗೆ ಸಲ್ಲುತ್ತದೆ. ಅಂಥ ನ್ಯಾಯಯುತ ಹೋರಾಟಗಾರರ ಮೇಲೆ ಹಿಂದಿನ ಜಿಲ್ಲಾಧಿಕಾರಿ ಪೊಲೀಸರನ್ನು ಬಳಸಿಕೊಂಡು ಸುಳ್ಳು ಪ್ರಕರಣ ದಾಖಲಿಸಿರುವುದು ಖಂಡನೀಯ. ರೈತರು ಪ್ರತಿ ಹೋರಾಟದಲ್ಲಿ ಯಾವುದೇ ಸರಕಾರಿ ಆಸ್ತಿ ಪಾಸ್ತಿ ಹಾನಿಯಾಗದಂತೆ ರೈತರ ಧ್ವ್ವನಿಯಾಗಿ ಚಳವಳಿ ಮಾಡುತ್ತ ಬಂದಿದೆ. ಆದಾಗ್ಯೂ ರೈತರ ಹೋರಾಟ ಹತ್ತಿಕ್ಕಲು ಜಿಲ್ಲಾಡಳಿತ ರೈತರ ವಿರುದ್ಧ ಸಂಚು ಮಾಡಿ, ಪೊಲೀಸರನ್ನು ಬಳಸಿಕೊಂಡು ತಾಲೂಕು ಹಾಗೂ ಜಿಲ್ಲಾ ಸಂಘಟನೆಯ ಸುಮಾರು 32 ರೈತರ ಮೇಲೆ ಮೂರು ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸುವ ಹುನ್ನಾರ ನಡೆಸಿದ್ದಾರೆ. ಈ ಘಟನೆಗೆ ಕಾರಣರಾದ ಹಿಂದಿನ ಜಿಲ್ಲಾಧಿಕಾರಿ ನಡವಳಿಕೆಯನ್ನು ತಾಲೂಕು ರೈತ ಸಂಘಟನೆ ಖಂಡಿಸುತ್ತದೆ. ಕೂಡಲೇ ಮುಖ್ಯಮಂತ್ರಿಗಳು ರೈತರ ಮೇಲಿನ ಸುಳ್ಳು ಪ್ರಕರಣಗಳನ್ನು ಹಿಂಪಡೆಯಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ತಾಲೂಕು ಹಸಿರು ಸೇನೆ ರೈತ ಸಂಘಟನೆ ಅಧ್ಯಕ್ಷ ಮರಿಗೌಡ ಪಾಟೀಲ ಮಾತನಾಡಿ, ಕಳೆದ ವರ್ಷ ಧರ್ಮಾ ಜಲಾಶಯಕ್ಕೆ ನೀರು ಬಿಡುವಂತೆ ಒತ್ತಾಯಿಸಿ ಅಕ್ಕಿಆಲೂರಿನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಿದ್ದೇವು. ಆ ಪ್ರತಿಭಟನೆಯಲ್ಲಿ ನಮ್ಮ ತಾಲೂಕು ರೈತ ಸಂಘದ ಏಳು ಮಂದಿ ಪದಾಧಿಕಾರಿಗಳ ಮೇಲೆ ಸುಳ್ಳು ಪ್ರಕರಣ ದಾಖಲಿಸಿದ್ದಲ್ಲದೆ ಜಿಲ್ಲೆಯಲ್ಲಿ ಒಟ್ಟು 32 ರೈತರ ಮೇಲಿನ ಪ್ರಕರಣ ವಜಾ ಮಾಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಸದ್ಯ ತಾಲೂಕಿನಾದ್ಯಂತ 26 ಸಾವಿರ ರೈತರ ಖಾತೆಗೆ 19 ಕೋಟಿ 3 ಲಕ್ಷ ರೂ.ಗಳನ್ನು ಕೊಡಿಸುವಲ್ಲಿ ಸತತ ರೈತರ ಪ್ರಯತ್ನ ಹಾಗೂ ಕರ್ನಾಟಕ ರಾಜ್ಯ ಹಸಿರು ಸೇನೆ ರೈತ ಸಂಘಟನೆಯ ಹೋರಾಟದಿಂದ ಮಾತ್ರ ಸಾಧ್ಯ ಎಂದರು. ಮಲ್ಲೇಶಪ್ಪ ಪರಪ್ಪನವರ, ರುದ್ರಪ್ಪ ಹಣ್ಣಿ, ವಾಸುದೇವ ಕಮಾಟಿ, ಸೋಮಣ್ಣ ಜಡೆಗೊಂಡರ, ರಾಮಪ್ಪ ಕೋಟಿ, ಬಸನಗೌಡ ಪಾಟೀಲ, ಅಬ್ದುಲ್ಖಾದರ್ ಮುಲ್ಲಾ, ಕರಬಸಪ್ಪ ಮಾಕೊಪ್ಪದ, ಶ್ರೀಕಾಂತ ದುಂಡಣ್ಣನವರ, ಎಸ್.ಎಸ್. ಇನಾಂದಾರ್, ಮಾಲಿಂಗಪ್ಪ ಅಕ್ಕಿವಳ್ಳಿ, ಷಣ್ಮುಕಪ್ಪ ಆಂದಲಗಿ, ಮಾಲತೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್-ಸವಾಲಾದ ಶುದ್ಧ ನೀರು ಪೂರೈಕೆ…
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.