ಆಂಗ್ಲ ಮಾಧ್ಯಮ ಶಾಲೆ ಪ್ರವೇಶ ಮಿತಿ ಹಿಂಪಡೆಯಿರಿ
Team Udayavani, Jun 9, 2019, 11:38 AM IST
ಶಿಗ್ಗಾವಿ: ಸರ್ಕಾರಿ ಶಾಲೆಯಲ್ಲಿ ಆರಂಭಿಸಿರುವ ಆಂಗ್ಲ ಮಾಧ್ಯಮಕ್ಕೆ ಪ್ರವೇಶ ಮಿತಿ ತೆಗೆದುಹಾಕಬೇಕು ಎಂದು ಒತ್ತಾಯಿಸಿ ಎಸ್‌ಡಿಎಂಸಿ ಸದಸ್ಯರು, ಗ್ರಾಮಸ್ಥರು ಬಿಇಒ ಶಿವಾನಂದ ಹೆಳವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಶಿಗ್ಗಾವಿ: ರಾಜ್ಯ ಸರ್ಕಾರ ಘೋಷಣೆ ಮಾಡಿದ್ದ ಆಂಗ್ಲ ಮಾಧ್ಯಮ ಆದೇಶ ಸರಿಯಾದ ಮಾರ್ಗ ಸೂಚಿಗಳಿಲ್ಲದೆ ಅವೈಜ್ಞಾನಿಕವಾಗಿದೆ. ಅಲ್ಲದೆ ಪ್ರತಿ ವಿಭಾಗಕ್ಕೆ 30 ಮಕ್ಕಳಿಗೆ ಪ್ರವೇಶ ನಿಗದಿ ಮಾಡಿದ್ದು ಖಂಡನೀಯ ಎಂದು ಜಿಪಂ ಮಾಜಿ ಸದಸ್ಯ ಶಶಿಧರ ಹೊನ್ನಣ್ಣವರ ನೇತೃತ್ವದಲ್ಲಿ ನಾರಾಯಣಪೂರ ಗ್ರಾಮದ ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ ಹೆಳವರ ಅವರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ನಾರಾಯಣಪೂರ ಗ್ರಾಮದ ಕೆಪಿಎಸ್ ಶಾಲೆಯಲ್ಲಿ ಎಲ್ಕೆಜಿ ಹಾಗೂ 1ನೇ ತರಗತಿಗೆ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭವಾಗಿದೆ. ಎಲ್ಕೆಜಿಗೆ 30 ಹಾಗೂ 1ನೇ ತರಗತಿಗೆ 30 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಾತ್ರ ನಿಗದಿ ಮಾಡಿದೆ. ಆದರೆ, ಸುತ್ತಮುತ್ತಲಿನ ಗ್ರಾಮದ ನಾಗರಿಕರು ಶಿಕ್ಷಕರ ಮೇಲೆ ಒತ್ತಡ ತಂದು ಹೆಚ್ಚುವರಿ ವಿದ್ಯಾರ್ಥಿಗಳ ಶೈಕ್ಷಣಿಕ ಖರ್ಚು ವೆಚ್ಚ ಸ್ವತಃ ಭರಿಸುವುದಾಗಿ ಬೇಡಿಕೆ ಸಲ್ಲಿಸುತ್ತಿದ್ದಾರೆ. ಸರ್ಕಾರಿ ಆದೇಶನ್ವಯ ಅವಕಾಶ ಇಲ್ಲದ ಕಾರಣ ಎಸ್‌ಡಿಎಂಸಿ ಸದಸ್ಯರು ಒಪ್ಪಿಗೆ ಸೂಚಿಸಿದ್ದರೂ ಶಿಕ್ಷಣ ಇಲಾಖೆ ಕಾನೂನಿನಡಿ ಅವಕಾಶವಿಲ್ಲದಾಗಿದೆ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಬಿಇಒ ಅವಕಾಶ ನಿರಾಕರಿಸಿದ್ದಾರೆ. ಜೂ. 3 ರಂದು ನಾರಾಯಣಪೂರ ಗ್ರಾಮಸ್ಥರು ಸಭೆ ಸೇರಿ ಹೆಚ್ಚಿನ ಮಕ್ಕಳ ಪ್ರವೇಶಕ್ಕೆ ಅವಕಾಶ ಮಾಡಿಕೊಡುವಂತೆ ಒತ್ತಾಯಸಲು ಜೂ. 10ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಶಾಲೆಯ ಸಮಸ್ಯೆ ಬಗ್ಗೆ ಡಿಡಿಪಿಐ ಹಾಗೂ ಬಿಇಒ ಅವರ ಗಮನಕ್ಕೆ ತಂದರೂ ಸಮರ್ಪಕ ಉತ್ತರ ದೊರೆತಿಲ್ಲ. ಮಕ್ಕಳಿಗೆ ಆಗುತ್ತಿರುವ ಅನ್ಯಾಯಕ್ಕೆ ಹೊಣೆ ಯಾರು ಎಂಬ ಗೊಂದಲ ಶಾಲೆಯ ಎಸ್‌ಡಿಎಂಸಿ ಸದಸ್ಯರು, ಗ್ರಾಮಸ್ಥರು ಹಾಗೂ ಪಾಲಕರಲ್ಲಿ ಕಾಡುತ್ತಿದೆ. ಸರ್ಕಾರ ಈ ಆದೇಶ ಹೊರಹಾಕುವ ಮೊದಲು ಭರ್ಜರಿ ಪ್ರಚಾರ ಮಾಡಿ ಆಂಗ್ಲ ಮಾಧ್ಯಮ ಶಾಲೆಗಳನ್ನು ತೆರೆದಿದೆ.ಆದರೆ, ಇಷ್ಟೇ ವಿದಾರ್ಥಿಗಳು ಎಂದು ನಿಗದಿ ಮಾಡಿರುವ ಆದೇಶ ಮಾತ್ರ ತಪ್ಪಾಗಿದೆ. ಎಲ್ಲರು ಶಿಕ್ಷಣವಂತರಾಗಬೇಕಾದರೆ ಕೇವಲ 30 ಮಕ್ಕಳಿಗೆ ಪ್ರವೇಶ ಎನ್ನುವ ಆದೇಶ ಹಿಂಪಡೆಯಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಗಂಗಾಧರ ಬಾವಿಕಟ್ಟಿ, ಮಹದೇವಪ್ಪ ಮಸಳಿ, ಮುದ್ದಪ್ಪ ರಾಮಾಪೂರ, ಸಿದ್ದಪ್ಪ ಭಾವಿಕಟ್ಟಿ, ಶಿವಪ್ಪ ವಡವಿ, ವೀರೇಶ ಬಾವಿಕಟ್ಟಿ, ಶಿದ್ದಪ್ಪ ಚಿನ್ನಪ್ಪನವರ, ಈರಪ್ಪ ಮಲ್ಲಮ್ಮನವರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.