ಜೋಡು ಮಾರುತಿ ಮಂದಿರದ ರಸ್ತೆ ನಿರ್ಮಾಣ
Team Udayavani, Jul 3, 2020, 4:50 PM IST
ಸವಣೂರು: ಪಟ್ಟಣ ಹೊರವಲಯದ ಜೋಡು ಮಾರುತಿ ದೇವಸ್ಥಾನದಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಉದ್ಯಮಿ ಹಾಗೂ ಮಾಜಿ ಶಾಸಕ ರಾಜಶೇಖರ ಸಿಂಧೂರ ಅವರ ಪುತ್ರ ಸುಮಂತ ಸಿಂಧೂರ ಚಾಲನೆ ನೀಡಿದರು.
ಪಟ್ಟಣದ ಬಸವನಕಟ್ಟೆ ಕೆರೆ ದಂಡೆಯ ಕೆಳಗಡೆ ಪ್ರದೇಶಕ್ಕೆ ಹೊಂದಿಕೊಂಡಿರುವ ಪ್ರಸಿದ್ಧ ಜೋಡು ಮಾರುತಿ ದೇವಸ್ಥಾನಕ್ಕೆ ಬರಲು ಭಕ್ತರು ಕೆರೆ ದಂಡೆಯ ಮೇಲಿರುವ ರಸ್ತೆ ಮೂಲಕ ಬರಬೇಕಾಗಿದ್ದು, ಎಷ್ಟೋ ವರ್ಷಗಳಿಂದ ದುರಸ್ತಿ ಕಾಣದೇ ಮಳೆಯಿಂದ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ಇದರಿಂದ ಭಕ್ತರಿಗೆ ತೊಂದರೆ ಆಗುತ್ತಿರುವುದರಿಂದ ದೇವಸ್ಥಾನದ ಭಕ್ತರಾದ ಸಿಂಧೂರ ಕುಟುಂಬಸ್ಥರು ಸ್ವಯಂ ಪ್ರೇರಣೆಯಿಂದ ಡಾಂಬರೀಕರಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಅದರಂತೆ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ದೇವಸ್ಥಾನಕ್ಕೆ ಇನ್ನೂ ಹೆಚ್ಚು ಸಂಖ್ಯೆಯಲ್ಲಿ ಭಕ್ತರು ಬರುವಂತಾಗಲಿದೆ ಎಂದು ಹಿರಿಯ ಪತ್ರಕರ್ತ ಜಯತೀರ್ಥ ದೇಶಪಾಂಡೆ ಹೇಳಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಸಮಿತಿಯ ಪದಾಧಿಕಾರಿಗಳು ಸಿಂಧೂರ ಕುಟುಂಬಸ್ಥರಿಗೆ ಅಭಿನಂದನೆ ಸಲ್ಲಿಸಿದರು. ಯೋಗೇಂದ್ರ ಜಂಬಗಿ, ಉಮೇಶ ದಾಮೋದರ, ಶ್ರೀನಿವಾಸ ಖಾರದ, ಮಾಹಂತೇಶ ಸುಣಗಾರ, ಮುರಗೇಶ ಮಿರ್ಜಿ, ಹರೀಶ ಕ್ಷೌರದ, ಅರ್ಚಕರಾದ ಸ್ರಿàನಿವಾಸ ಜೋಶಿ ಇನನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.