ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ
Team Udayavani, Jan 3, 2020, 4:13 PM IST
ಹಿರೇಕೆರೂರ: ರಟ್ಟಿಹಳ್ಳಿ ತಾಲೂಕಿನ ಮೇದೂರು, ಹೊಸಕಟ್ಟಿ, ಕಿರಗೇರಿ,ಪುರದಗೇರಿ ಗ್ರಾಮಗಳ ಪರಿಶಿಷ್ಟ ಪಂಗಡ ಕಾಲೋನಿಗಳಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಾಂಕ್ರಿಟ್ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಬಿ.ಸಿ.ಪಾಟೀಲ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಬಿ.ಸಿ.ಪಾಟೀಲ, ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಗ್ರಾಮೀಣ ಜನತೆಗೆ ಮೂಲ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸಿ ಹಳ್ಳಿಗಳ ಅಭಿವೃದ್ಧಿಗೆ ಒತ್ತು ನೀಡುತ್ತಿವೆ. ಸರ್ಕಾರದ ಎಲ್ಲ ಯೋಜನೆಗಳನ್ನು ಸದ್ಬಳಕೆ ಮಾಡಿಕೊಂಡು ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದರು. ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಯು.ಬಿ.ಬಣಕಾರ ಮಾತನಾಡಿ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಈ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿದ ಎಲ್ಲ ಯೋಜನೆಗಳನ್ನು ಪ್ರಯೋಜನ ಪಡೆದುಕೊಳ್ಳಬೇಕು. ತಾಲೂಕಿನ ಸಣ್ಣಗುಬ್ಬಿ ಗ್ರಾಮದಲ್ಲಿ ಮಾದರಿ ಸಂಜೀವಿನಿ ಶೆಡ್ ನಿರ್ಮಾಣವಾಗಿದೆ. ಅದರಂತೆ ಪ್ರತಿಯೊಂದು ಗ್ರಾಪಂ ವ್ಯಾಪ್ತಿಯಲ್ಲಿ ಸಂಜೀವಿನಿ ಶೆಡ್ ನಿರ್ಮಾಣವಾಗಬೇಕು. ಈ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು ಎಂದರು.
ತಾಪಂ ಅಧ್ಯಕ್ಷ ರಾಜು ಬಣಕಾರ, ಸದಸ್ಯರಾದ ಗೀತಾ ಧನವಿನವರ, ಸುಜತಾ ಕೊಟಗಿಮನಿ, ಇಒ ಮೋಹನ್‌ಕುಮಾರ, ಎಇಇ ಎಸ್ .ವಿ. ಪುರಾಣಿಕ್, ಗ್ರಾ ಪಂ ಅಧ್ಯಕ್ಷರಾದ ಮಹೇಶ, ಅನೀತಾ ಜಯಪ್ರಕಾಶ ಮಳಗಿ, ಮುಖಂಡರಾದ ಪಾಲಕ್ಷಗೌಡ ಪಾಟೀಲ, ಹನುಮಂತಗೌಡ ಭರಮಣ್ಣನವರ, ಭರಮಗೌಡ ಪಾಟೀಲ್, ಶಶಿಧರ ತೋಟದ, ರಾಜು ಊದಗೌಡ್ರ ಮಲ್ಲಪ್ಪ ಕೊಟಗಿಮನಿ, ರಂಗಪ್ಪ ಕೊಟಗಿಮನಿ, ಸಿದ್ದಪ್ಪ ಸೊಂಟೇರ, ರವಿ ಚಿಂದಿ, ಸೇರಿದಂತೆ ಸ್ಥಳೀಯ ಜನಪ್ರತಿನಿ ಧಿಗಳು ಹಾಗೂ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ
Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.
Ullala: ದೇರಳಕಟ್ಟೆ: ರಸ್ತೆಯನ್ನು ಅತಿಕ್ರಮಿಸಿದ್ದ ಕಟ್ಟಡಗಳ ತೆರವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.