ಗುಲಾಬಿ ನೀಡಿ ಜನರಿಗೆ ಜಾಗೃತಿ
ಬಯಲು ಶೌಚ ಬಿಟ್ಟು ಶೌಚಾಲಯ ಕಟ್ಟಿಸಿಕೊಳ್ಳಲು ಸಲಹೆ
Team Udayavani, Jun 1, 2019, 1:40 PM IST
ರಾಣಿಬೆನ್ನೂರ: ತಾಲೂಕಿನ ರಾಹುತನಕಟ್ಟಿ ಗ್ರಾಮಕ್ಕೆ ಭೇಟಿ ನೀಡಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಂ. ಕಾಂಬಳೆ ಅವರು ಮನೆ ಶೌಚಾಲಯ ಬಳಸುವಂತೆ ಮನವೊಲಿಸಿ ಗುಲಾಬಿ ಹೂ ನೀಡಿದರು.
ರಾಣಿಬೆನ್ನೂರ: ತಾಲೂಕಿನ ರಾಹುತನಕಟ್ಟಿ ಗ್ರಾಮಕ್ಕೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಂ. ಕಾಂಬಳೆ ಅವರು ಬಯಲು ಶೌಚಕ್ಕೆ ತೆರಳುತ್ತಿರುವ ಗ್ರಾಮದ ನಾಗರಿಕರಿಗೆ ಹೂವು ನೀಡಿ ಶೌಚಾಲಯಗಳನ್ನು ಉಪಯೋಗಿಸುವಂತೆ ಮನವಿ ಮಾಡಿ ಸ್ವಚ್ಛತೆ ಕುರಿತು ಅರಿವು ಮೂಡಿಸಿದರು.
ಬೆಳಗ್ಗೆ 5-30ರ ವೇಳೆಗೆ ಗ್ರಾಮಕ್ಕೆ ಭೇಟಿ ನೀಡಿದ ಕಾಂಬಳೆ ಅವರು ಬಯಲು ಶೌಚಕ್ಕೆ ತೆರಳುತ್ತಿರುವವರನ್ನು ಕಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮ ಪರಿಸರ ಸ್ವಚ್ಛತೆಗಾಗಿ ಸ್ವಚ್ಛಭಾರತ ಅಭಿಯಾನದಡಿಯಲ್ಲಿ ಪ್ರತಿ ಗ್ರಾಮಾಂತರ ಪ್ರದೇಶಗಳಲ್ಲಿ ಮನೆಗೊಂದು ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿದೆ. ಅವುಗಳನ್ನು ನಿರ್ಲಿಪ್ತಗೊಳಿಸಿದೇ, ಬಳಕೆಯಲ್ಲಿ ತಂದಾಗ ಮಾತ್ರ ಮನೆಯ ಸುತ್ತಮುತ್ತ ಸ್ವಚ್ಛ ಮತ್ತು ಸುಂದರ ಪರಿಸರ ನಿರ್ಮಿಸಿಕೊಳ್ಳಲು ಸಾಧ್ಯವಾಗುವುದು. ಈ ನಿಟ್ಟಿನಲ್ಲಿ ನಾಗರಿಕರು ಶೌಚಾಲಯಗಳ ಬಳಕೆಗೆ ಮುಂದಾಗಬೇಕೆಂದು ಕರೆ ನೀಡಿದರು.
ತಾಲೂಕಿನಾದ್ಯಂತ ಸ್ವಚ್ಛಭಾರತ ಅಭಿಯಾನದಡಿ ಪ್ರತಿ ಮನೆಗೆ ಶೌಚಾಲಯ ನಿರ್ಮಿಸಿಕೊಳ್ಳಲು ಹಣ ಬಿಡುಗಡೆ ಮಾಡಲಾಗುತ್ತಿದೆ. ಬಹತೇಕ ಪ್ರದೇಶಗಳಲ್ಲಿ ಶೇ. 80ಕ್ಕೂ ಹೆಚ್ಚು ಶೌಚಾಯಲಗಳು ನಿರ್ಮಾಣವಾಗಿವೆ. ಆದರೆ ಅದನ್ನು ಸಮಪರ್ಕವಾಗಿ ಬಳಸಿಕೊಳ್ಳಲು ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ಸರ್ಕಾರದ ಉದ್ದೇಶಿತ ಯೋಜನೆ ಸಫಲವಾಗಬೇಕಾದರೆ ಕಡ್ಡಾಯವಾಗಿ ಬಯಲು ಮುಕ್ತಕ್ಕೆ ಮುಂದಾಗಬೇಕು ಎಂದರು. ಸಹಾಯಕ ನಿರ್ದೇಶಕ ಅಶೋಕ ನಾರಜ್ಜಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಸನಗೌಡ್ರ ಸೇರಿದಂತೆ ಇಲಾಖೆಯ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.