ಶರಣತತ್ವದ ಆಧಾರದಡಿ ಆಡಳಿತ: ಸಿಎಂ ಬಸವರಾಜ ಬೊಮ್ಮಾಯಿ

ವಿದ್ಯಾರ್ಥಿನಿಯರಿಗೆ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ನೀಡಿದ್ದೇನೆ

Team Udayavani, Mar 10, 2023, 4:04 PM IST

ಶರಣತತ್ವದ ಆಧಾರದಡಿ ಆಡಳಿತ: ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ (ಶಿಗ್ಗಾವಿ): ಶರಣ ತತ್ವದಡಿ ಆಡಳಿತ ನಡೆಸುತ್ತಿದ್ದು, ಎಲ್ಲರಿಗೂ ನ್ಯಾಯ ಕೊಡಿಸುವ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾವಿ ವಿರಕ್ತಮಠದಲ್ಲಿ ನಡೆದ ಶರಣ ಸಂಸ್ಕೃತಿ ಉತ್ಸವದಲ್ಲಿ ಮಠದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಶಿಗ್ಗಾವಿ ವಿರಕ್ತಮಠ ಶಿಗ್ಗಾವಿಯ ಆಗು ಹೋಗುಗಳಲ್ಲಿ ಪ್ರಮುಖ ಪಾತ್ರ ವಹಿಸಿದೆ. ಇಲ್ಲಿನ ಶಿಕ್ಷಣ ಕ್ಷೇತ್ರ ಅಭಿವೃದ್ಧಿಯಲ್ಲಿ ಸಂಗನಬಸವ ಸ್ವಾಮೀಜಿ ಮಹತ್ವದ ಪಾತ್ರ ವಹಿಸಿದ್ದಾರೆ. ನಮ್ಮ ಕೆರೆಯ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅದೇ ರೀತಿ ಪ್ರತಿ ವರ್ಷ ಹಳ್ಳಿಗಳಲ್ಲಿ ಗಿಡಗಳನ್ನು ನೆಡುವ ಕಾರ್ಯ ಮೆಚ್ಚುವಂತಹದ್ದು. ಅವರು ಗಿಡಗಳಿಗೆ ಮಕ್ಕಳ ಹೆಸರಿಡುವಂತೆ ಸಲಹೆ ನೀಡಿದ್ದಾರೆ. ಅದನ್ನು ಎಲ್ಲರೂ ಪಾಲಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ
ನೀಡಿದ್ದೇನೆ ಎಂದರು.

ವಿರಕ್ತಮಠಕ್ಕೆ ಎಲ್ಲ ಪಕ್ಷಗಳು ಇಲ್ಲಿ ಬಂದ ಸಂಗಮ ಆಗುತ್ತವೆ. ಯಾರೇ ಬಂದರೂ ಅವರಿಗೆ ಸ್ವಾಮೀಜಿಗಳು ನಮ್ಮ ಪರವಾಗಿಯೇ ಇದ್ದಾರೆನ್ನುವ ಭಾವನೆ ಮೂಡಿಸುತ್ತಾರೆ. ಅವರು ಯಾರಿಗೂ ಆಶೀರ್ವಾದ ಮಾಡಲ್ಲ. ನನಗೂ ಅವರು ಆಶೀರ್ವಾದ ಮಾಡಿಲ್ಲ. ಅವರು ಬೋಧನೆ ಮಾಡುತ್ತಾರೆ. ಅದನ್ನು ಪಾಲಿಸಿದರೆ ಯಶಸ್ಸು ಸಿಗುತ್ತದೆ. ನಾನು ಅವರ ಬೋಧನೆ ಪಾಲಿಸಿದ್ದೇನೆ. ಅದಕ್ಕೆ ಯಶಸ್ಸು ಸಿಕ್ಕಿದೆ. ನಾನು ಈಗ ಸಿಎಂ ಆಗಿದ್ದೇನೆ. ಅದು ನಿಮ್ಮ ಆಶೀರ್ವಾದ. ನೀವು ಅದರ
ಮಾಲಕರು ಎಂದು ಹೇಳಿದರು.

ವಿಜಯಪುರದಲ್ಲಿ ನಲವತ್ತು ವರ್ಷದ ಸಮಸ್ಯೆಗೆ ಪರಿಹಾರ ನೀಡಿದ್ದೇನೆ. ಅದರಿಂದ ಅಲ್ಲಿನ ಜನರು ಖುಷಿಯಿಂದ ಸನ್ಮಾನಿಸಿದರು. ಅದಕ್ಕೆ ನಮ್ಮ ಕ್ಷೇತ್ರದ ಜನರೇ ಕಾರಣ. ನಾನು ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ. ಪ್ರತಿದಿನ ಒಂದು ಹೊಸ ಸವಾಲು ಬಂದರೂ ಅದನ್ನು ಎದುರಿಸಿದ್ದೇನೆ. ಜಯ ಸಾಧಿಸಿದ್ದೇನೆ.

ನಾನು ಸಿಎಂ ಆದ ನಾಲ್ಕು ಗಂಟೆಯಲ್ಲಿ ರೈತ ವಿದ್ಯಾನಿಧಿ ಯೋಜನೆ ಜಾರಿಗೆ ತಂದೆ. ನಾನು ಹಳ್ಳಿಗಳಿಗೆ ಹೋದಾಗ ಅಲ್ಲಿನ ಕೆಲವು ಮನೆಗಳು ಆರ್‌ ಸಿಸಿ ಮನೆಗಳಿರುವುದನ್ನು ನೋಡಿ ಕೇಳಿದೆ. ಸರ್ಕಾರಿ, ಖಾಸಗಿ ನೌಕರಿ ಮಾಡುವುದರಿಂದ ಅವರು ಆರ್‌ ಸಿಸಿ ಮನೆ ಹಾಕಿಕೊಂಡಿದ್ದಾರೆ. ರೈತರ ಮಕ್ಕಳು ವಿದ್ಯೆ ಕಲಿತರೆ ಅವರೂ ಬೇರೆ ಬೇರೆ ಉದ್ಯೋಗ ಮಾಡಿದರೆ ಅವರು ಅಭಿವೃದ್ಧಿ ಆಗುತ್ತಾರೆ. ಹೀಗಾಗಿ ರೈತ ವಿದ್ಯಾನಿಧಿ ಯೋಜನೆ ಜಾರಿಗೊಳಿಸಿದ್ದೇನೆ ಎಂದರು.

ದುಡಿಯುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ಸಾವಿರ ರೂ. ಕೊಡುವ ಯೋಜನೆ ರೂಪಿಸಿದ್ದೇನೆ. ವಿದ್ಯಾರ್ಥಿನಿಯರಿಗೆ ಮಹಿಳೆಯರಿಗೆ ಉಚಿತ ಬಸ್‌ ಪಾಸ್‌ ನೀಡಿದ್ದೇನೆ. ಪಿಯುಸಿ ನಂತರ ಎಲ್ಲರಿಗೂ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಪಿಯುಸಿ ಫೇಲ್‌ ಆದವರಿಗೂ ತರಬೇತಿ ನೀಡಿ ಸ್ಟೈಪೆಂಡ್‌ ನೀಡುವ ಕೆಲಸ ಮಾಡಿದ್ದೇನೆ. ರೈತರಿಗೆ ವಿಮೆ ಮಾಡಿದ್ದೇನೆ. ಯಾರೇ ಸಹಜ ಸಾವು ಹೊಂದಿದರೂ ಅವರ ಕುಟುಂಬಕ್ಕೆ ಎರಡು ಲಕ್ಷ ರೂ. ವಿಮೆ ಹಣ ಸಿಗುವಂತೆ ಮಾಡಿದ್ದೇನೆ. ಗ್ರಾಮೀಣ ಪ್ರದೇಶದಲ್ಲಿ ಸಮಸ್ಯೆಗಳ ಜತೆಗೆ ಬದುಕುತ್ತಾರೆ. ಅಂತಹ ಸಮಸ್ಯೆಗಳಿಗೆ ಪರಿಹಾರ ನೀಡುವ ಕೆಲಸ ಮಾಡಿದ್ದೇನೆ.

ಪ್ರತಿಯೊಂದು ಸಮಸ್ಯೆಗೆ ಶರಣರ ತತ್ವಗಳ ಪಾಲನೆ ಮಾಡಿ ಆಡಳಿತ ನಡೆಸುತ್ತಿದ್ದೇನೆ ಎಂದು ಹೇಳಿದರು. ಈ ದೇಶಕ್ಕೆ ದೊಡ್ಡ ಚರಿತ್ರೆ ಇದೆ. ಚಾರಿತ್ರ್ಯ ಬೇಕಿದೆ. ಯಾವ ದೇಶದಲ್ಲಿ ಚಾರಿತ್ರ್ಯಇಲ್ಲವೋ ಆ ದೇಶ ಅಧೋಗತಿಗೆ ಇಳಿಯಲಿದೆ. ನಮ್ಮಲ್ಲಿ ಸಣ್ಣ ಸಣ್ಣ ವಿಚಾರಕ್ಕೆ ಸಾಕಷ್ಟು ಸಂಘರ್ಷ ಇದೆ. ಅದನ್ನು ಸಮನ್ವತೆಯಿಂದ ಬಗೆಹರಿಸಬೇಕು ಎಂದರು.

ನಮ್ಮ ಗುರುಗಳು ಕಿಂಚಿತ್ತಾದರೂ ಬದಲಾವಣೆ ತರಲು ಪ್ರತಿವರ್ಷ ಶರಣ ಸಂಸ್ಕೃತಿ ಮೂಲಕ ಬದಲಾವಣೆ ತರುವ ಕೆಲಸ ಮಾಡಿದ್ದಾರೆ. ಅವರ ಆಶೀರ್ವಾದದಿಂದ ಉತ್ತಮ ಕೆಲಸ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಇದರ ಎರಡು ಪಟ್ಟು ಕೆಲಸ ಮಾಡುತ್ತೇನೆ. ನಿಮ್ಮ ಆಶೀರ್ವಾದ ಇರಲಿ ಎಂದರು. ವಿರಕ್ತಮಠದ ಶ್ರೀ ಸಂಗನಬಸವ ಸ್ವಾಮೀಜಿ, ಶ್ರೀ ಹೆಬ್ಬಾಳದ ಸ್ವಾಮೀಜಿ, ಶ್ರೀ ಮಹಾಂತ ಸ್ವಾಮೀಜಿ, ಶ್ರೀ ಅಗಡಿ ಸ್ವಾಮೀಜಿ ಹಾಜರಿದ್ದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Brahmavar: ಬೆಳ್ಮಾರು; ಕೋಳಿ ಅಂಕಕ್ಕೆ ದಾಳಿ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.