ಸ್ವಾಭಿಮಾನಿಯನ್ನಾಗಿ ಮಾಡುವ ಶಿಕ್ಷಣ ಅಮೃತವಿದಂತೆ: ಡಾ| ತೋಂಟದಶ್ರೀ
ರಾಚಯ್ಯ ಶಾಸ್ತ್ರಿಗಳು ಓದಿಸೋಮಠ ಅವರನ್ನು ಗೌರವಿಸಲಾಯಿತು
Team Udayavani, Mar 12, 2024, 1:14 PM IST
ಉದಯವಾಣಿ ಸಮಾಚಾರ
ಹಾವೇರಿ: ಪ್ರತಿ ಮನೆ ಮಠವಾಗಬೇಕು, ಪ್ರತಿ ಮಠವೂ ಶಿವಯೋಗವಾಗಬೇಕು. ಅಂತಹ ಸಂಸ್ಕಾರ ಸಿಗಬೇಕಾದರೆ ಅದಕ್ಕೆ ಮಹಾತ್ಮರ ಸಾರ್ಥಕ ಸೇವೆ ಕಾರಣವಾಗುತ್ತದೆ. ಅಂತಹ ಸಾರ್ಥಕ ಸೇವೆಯ ಮೂಲಕ ಭಕ್ತರ ಮನೆಯನ್ನು ಮಠವಾಗಿಸಿ, ಸಿಂದಗಿ ಮಠವನ್ನು ಶಿವಯೋಗವಾಗಿಸಿದ ಕೀರ್ತಿ ಲಿಂ. ಶಾಂತವೀರ ಪಟ್ಟಾಧ್ಯಕ್ಷರಿಗೆ ಸಲ್ಲುತ್ತದೆ ಎಂದು ಗದುಗಿನ ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.
ಸ್ಥಳೀಯ ಸಿಂದಗಿ ಮಠದಲ್ಲಿ ಲಿಂ. ಶಾಂತವೀರ ಪಟ್ಟಾಧ್ಯಕ್ಷರ 44ನೇ ಪುಣ್ಯ ಸ್ಮರಣೋತ್ಸವದ ಕೊನೆಯ ದಿನದ ಸಮಾರಂಭದಲ್ಲಿ ಅವರು ಮಾತನಾಡಿದರು. ಯಾವ ಶಿಕ್ಷಣದಿಂದ ವಿದ್ಯಾರ್ಥಿಗೆ ಸ್ವಾಭಿಮಾನ ಬರುತ್ತದೆಯೋ ಆ ಶಿಕ್ಷಣವೇ ಅಮೃತ ಸಮಾನ. ಓರ್ವ ಸ್ವಾಭಿಮಾನಿ ವಿದ್ಯಾರ್ಥಿ ಮಾತ್ರ ಜೀವನದಲ್ಲಿ ಯಾವುದೇ ಸಮಸ್ಯೆ ಬಂದರೂ ಅದನ್ನು ಸಮರ್ಥವಾಗಿ ನಿರ್ವಹಿಸಬಲ್ಲ. ಯಾವುದೇ ಪರೀಕ್ಷೆಯನ್ನೂ ಧೈರ್ಯದಿಂದ ಎದುರಿಸಬಲ್ಲ. ನಾವು ಕಲಿತ ಶಿಕ್ಷಣದಿಂದ ಬೌದ್ಧಿಕ ವಿಕಾಸವಾದಾಗ ಅದು ಸಮಾಜವನ್ನು ಸೂಕ್ಷ್ಮವಾಗಿ ಗಮನಿಸುವಂತೆ ಮಾಡುತ್ತದೆ.
ಅದರಿಂದ ಸಮಾಜದ ಆಗು-ಹೋಗುಗಳಿಗೆ ಭಾವನಾತ್ಮಕವಾಗಿ ಸ್ಪಂದಿಸುವ ಶಕ್ತಿ ಕೊಡುತ್ತದೆ. ಹಾಗಾದಾಗಲೇ ನಾವು ಪಡೆದ
ಶಿಕ್ಷಣದ ಸದ್ವಿನಿಯೋಗವಾಗುತ್ತದೆ ಎನ್ನುವ ಅದ್ಭುತ ವಿಚಾರ ಶಾಂತವೀರ ಪಟ್ಟಾಧ್ಯಕ್ಷದ್ದಾಗಿತ್ತು. ಯಾವ ಸೌಲಭ್ಯಗಳಿಲ್ಲದ ಸಮಯದಲ್ಲಿ ಅನ್ನ ಮತ್ತು ಅಕ್ಷರ ದಾಸೋಹ ನೀಡಿ ಬಡ ಮಕ್ಕಳ ಹಿತಕ್ಕಾಗಿ ಶ್ರಮಿಸಿದ ಮಹಾನ್ ತ್ಯಾಗಿ ಅವರಾಗಿದ್ದಾರೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ 50 ವರ್ಷಗಳ ಕಾಲ ಬ್ಯಾಡಗಿಯ ಕುಮಾರೇಶ್ವರ ಧಾರ್ಮಿಕ ಪಾಠಶಾಲೆ ಮುನ್ನಡೆಸಿದ ಸೇವಾಜೀವಿ ವೇ.ಮೂ. ರಾಚಯ್ಯ ಶಾಸ್ತ್ರಿಗಳು ಓದಿಸೋಮಠ ಅವರನ್ನು ಗೌರವಿಸಲಾಯಿತು.
ಬಳ್ಳಾರಿಯ ಪ್ರಕಾಶ ಹೆಮ್ಮಾಡಿ ಹಾಗೂ ನೇತ್ರಾವತಿ ಹೆಮ್ಮಾಡಿ ಅವರಿಂದ ವಿಶೇಷ ಜಾದೂ ಪ್ರದರ್ಶನ ಜರುಗಿತು. ಭೈರನಹಟ್ಟಿಯ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ, ಸಿಂದಗಿ ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಹೊತನಹಳ್ಳಿಯ ಸಿಂದಗಿಮಠದ ಶಂಭುಲಿಂಗಪಟ್ಟಾಧ್ಯಕ್ಷರು ಇದ್ದರು.
ಉದ್ಯಮಿ ಪ್ರಕಾಶ ಶೆಟ್ಟಿ, ಶಿವಬಸಯ್ಯ ಆರಾಧ್ಯಮಠ, ಸಿದ್ಧಯ್ಯ ಶಾಸ್ತ್ರಿಗಳು ಹಿರೇಮಠ, ವೀರಯ್ಯ ಹಿರೇಮಠ, ಶಿವಣ್ಣ ಶಿರೂರ, ಶಿವಶಂಕರ ತುಮ್ಮಣ್ಣನವರ, ಹಿರಿಯ ಕಲಾವಿದ ಶ್ಯಾಮ ದೊಡ್ಡಮನಿ, ವಿ.ಎಚ್.ಕೆ. ಹಿರೇಮಠ. ಸಿದ್ಧಲಿಂಗಪ್ಪ ಬುಶೆಟ್ಟಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು. ವಾಗೀಶ ಶಾಸ್ತ್ರೀಗಳು ಹಿರೇಮಠ ಸ್ವಾಗತಿಸಿದರು. ಜಿ.ಎಸ್. ಭಟ್ ಕಾರ್ಯಕ್ರಮ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.