ಹಾನಗಲ್ಲನಲ್ಲಿ ವಾರದ ಸಂತೆ ಸ್ಥಳಾಂತರ

ಮುಂದಿನ ವಾರ ಏನಾಗುವುದೋ ಕಾದು ನೋಡಬೇಕಾಗಿದೆ.

Team Udayavani, Jun 10, 2023, 4:35 PM IST

Haveri

ಹಾನಗಲ್ಲ: ಬಹುದಿನಗಳಿಂದ ಹಾನಗಲ್ಲ-ಶಿವಮೊಗ್ಗ ರಸ್ತೆಯಲ್ಲಿ ವಾಹನ ನಿಲುಗಡೆ ಹಾಗೂ ವಾರದ ಸಂತೆಯಿಂದ ಕಿರಿಕಿರಿ ಅನುಭವಿಸುತ್ತಿದ್ದ ಸಾರ್ವಜನಿಕರು, ವಾಹನ ಸವಾರರಿಗೆ ಶುಕ್ರವಾರ ರಿಲೀಫ್‌ ಸಿಕ್ಕಿದೆ. ಪ್ರತಿ ಶುಕ್ರವಾರ ವಾರದ ಸಂತೆಯಂದು
ಹಾನಗಲ್ಲ-ಶಿವಮೊಗ್ಗ ರಸ್ತೆಗೆ ಹೊಂದಿಕೊಂಡು ತಾರಕೇಶ್ವರ ದೇವಸ್ಥಾನಕ್ಕೆ ಹೋಗುವ ಅಡ್ಡ ರಸ್ತೆಯಲ್ಲಿ ತರಕಾರಿ ಸಹಿತ ಗೃಹ ಬಳಕೆ ವಸ್ತುಗಳ ವ್ಯಾಪಾರ ನಡೆಸಿಕೊಂಡು ಬಂದಿದ್ದರು.

ಇದರಿಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ಕಿರಿಕಿರಿ ಉಂಟಾಗಿತ್ತು. ಹಲವಾರು ಬಾರಿ ಸಂಬಂಧಿಸಿದ ಪುರಸಭೆಗೆ ಮನವಿ ಮಾಡಿದರೂ ವಾರದ ಸಂತೆ ಸ್ಥಳಾಂತರಿಸಲು ಸಾಧ್ಯವಾಗಿರಲಿಲ್ಲ.

ಇತ್ತೀಚೆಗೆ ಇದೇ ಕ್ರಾಸ್‌ನಲ್ಲಿ ಬಾಲಕನೋರ್ವ ಅಪಘಾತದಲ್ಲಿ ಮೃತಪಟ್ಟಿದ್ದ. ಹೀಗಾಗಿ, ಗ್ರಾಮಸ್ಥರು ಪಟ್ಟು ಹಿಡಿದ ಹಿನ್ನೆಲೆಯಲ್ಲಿ ಪುರಸಭೆ ಕಳೆದ ಬುಧವಾರ ಸಭೆ ನಡೆಸಿ ಸಂತೆ ಮಾರುಕಟ್ಟೆಯನ್ನು ಮೊದಲಿದ್ದ ಹಾಗೆ ಸ್ಥಳಾಂತರಿಸಲು ನಿರ್ಧಸಿತ್ತು. ಆದಾಗ್ಯೂ, ವ್ಯಾಪಾರಸ್ಥರ ವಿರೋಧವಿತ್ತು. ಗುರುವಾರ ದಿನ ಮತ್ತೆ ಪುರಸಭೆ ವಾಹನದ ಮೂಲಕ ಸಂತೆ ಮಾರುಕಟ್ಟೆ ಸ್ಥಳಾಂತರಿಸಿದ ಬಗ್ಗೆ ಪ್ರಚಾರ ಮಾಡಿತ್ತು.

ಶುಕ್ರವಾರ ಬೆಳಿಗ್ಗಿನಿಂದ ಸಿಪಿಐ ಎಸ್‌.ಆರ್‌.ಶ್ರೀಧರ, ಪಿಎಸ್‌ಐ ಶರಣಬಸಪ್ಪ ಕಾಂದೆ ಹಾಗೂ ಪೊಲೀಸ್‌ ಸಿಬ್ಬಂದಿ ಅವರು ಸ್ಥಳದಲ್ಲೇ ಇದ್ದು ಅಂಗಡಿಗಳನ್ನು ಹಚ್ಚದಂತೆ ನಿಗಾ ವಹಿಸಿ ಬೇರೆ ಸ್ಥಳಗಳನ್ನು ಗುರುತಿಸಿ ಅಂಗಡಿ ಹಚ್ಚುವಂತೆ ಮನವಿ ಮಾಡಿದರು. ಇವರೊಂದಿಗೆ ಹಾನಗಲ್ಲ ಟೌನ್‌ ವೆಂಡಿಂಗ್‌ ಕಮಿಟಿ ಸದಸ್ಯ ಮಹ್ಮದಗೌಸ ಸವಣೂರ, ನಾಗೇಂದ್ರ ತುಮರಿಕೊಪ್ಪ ಸೇರಿದಂತೆ ಹಿರಿಯ ವ್ಯಾಪಾರಸ್ಥರು ಮಧ್ಯಸ್ಥಿಕೆ ವಹಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಂಗಡಿಗಳನ್ನು ಹಚ್ಚಿ ವ್ಯಾಪಾರ
ಮಾಡಲು ಅನುಕೂಲ ಮಾಡಿಕೊಡಲಾಯಿತು.

ನಂತರ ಎಂದಿನಂತೆ ವ್ಯಾಪಾರ ವಹಿವಾಟುಗಳು ನಡೆದವು. ಆದರೆ, ಖರೀದಿ ಮಾಡುವ ಗ್ರಾಹಕರಿಗೆ ಸ್ವಲ್ಪ ಕಿರಿಕಿರಿ ಆಗಿದೆ. ಮುಂದಿನ ವಾರ ಏನಾಗುವುದೋ ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.