ಮೆಕ್ಕೆಜೋಳ ಬೆಳೆದ ರೈತರಿಗೆ ಅಲ್ಪಾವಧಿ ಆರ್ಥಿಕ ನೆರವು
Team Udayavani, Aug 5, 2020, 1:29 PM IST
ಹಿರೇಕೆರೂರ: ರಾಜ್ಯ ಸರ್ಕಾರ ಮೆಕ್ಕೆಜೋಳ ಬೆಳೆದ ರೈತರಿಗೆ ಅಲ್ಪಾವಧಿ ಆರ್ಥಿಕ ನೆರವು ನೀಡಲು 2019-20ನೇ ಸಾಲಿನ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ದಾಖಲಾಗಿರುವ ಮುಸುಕಿನಜೋಳ ಬೆಳೆದ ರೈತರ ಪಟ್ಟಿಯನ್ನು ಗ್ರಾಮವಾರು ಆಯಾ ಗ್ರಾಪಂ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಈ ಸೌಲಭ್ಯ ಇಲಾಖೆಯ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾದ ರೈತರಿಗೆ ನೆರವು ವರ್ಗಾಯಿಸಲು ಸಾಧ್ಯವಾಗುತ್ತದೆ. ಆದ್ದರಿಂದ ತಂತ್ರಾಂಶದಲ್ಲಿ ನೋಂದಣಿಯಾಗದಿರುವ ರೈತರ ಪಟ್ಟಿ ಪ್ರಕಟಿಸಲಾಗಿದ್ದು ಪಟ್ಟಿ ಪರಿಶೀಲಿಸಿಕೊಂಡು ರೈತರು ತಮ್ಮ ಆಧಾರ್ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಝರಾಕ್ಸ್ ಪ್ರತಿ, ಸರ್ವೇ ನಂಬರ್ ವಿವರದೊಂದಿಗೆ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಆ.31ರೊಳಗಾಗಿ ದಾಖಲಾತಿ ಸಲ್ಲಿಸಿ ಆರ್ಥಿಕ ನೆರವು ಪಡೆಯಬೇಕು. ನಂತರ ಬಂದ ಅರ್ಜಿ ಪರಿಗಣಿಸಲಾಗುವುದಿಲ್ಲ.
ಪಟ್ಟಿಯಲ್ಲಿರುವ ಜಂಟಿ ಖಾತೆ ಹೊಂದಿರುವ ರೈತರು ರೂ. 20 ಛಾಪಾ ಕಾಗದದಲ್ಲಿ ಎಲ್ಲ ಜಂಟಿ ಮಾಲೀಕರಿಂದ ಒಬ್ಬರಿಗೆ ಹಣ ವರ್ಗಾಯಿಸಲು ಒಪ್ಪಿಗೆ ನೀಡಿ ಅದನ್ನು ನೋಟರಿಯವರಿಂದ ಪ್ರಮಾಣೀಕರಿಸಿ ನಂತರ ಸಂಬಂಧಿಸಿದವರ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಜಮೀನಿನ ಉತಾರದ ಝರಾಕ್ಸ್ ಪ್ರತಿ ಲಗತ್ತಿಸಿ ತಮ್ಮ ಹೋಬಳಿ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಮೀಪದ ರೈತ ಸಂಪರ್ಕ ಕೇಂದ್ರ ಕಚೇರಿ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.