ದೃಷ್ಟಿ ದೇವರು ನೀಡಿದ ಅಮೂಲ್ಯ ಕೊಡುಗೆ: ವಿನಯಕುಮಾರ

ಸ್ನಾನದ ಸಮಯದಲ್ಲಿ ತಲೆಯ ಮೇಲೆ ಬಿಸಿ ನೀರನ್ನು ಸುರಿದುಕೊಳ್ಳಬೇಡಿ

Team Udayavani, Jan 19, 2024, 6:18 PM IST

ದೃಷ್ಟಿ ದೇವರು ನೀಡಿದ ಅಮೂಲ್ಯ ಕೊಡುಗೆ: ವಿನಯಕುಮಾರ

ಉದಯವಾಣಿ ಸಮಾಚಾರ
ಬ್ಯಾಡಗಿ: ದೃಷ್ಟಿ ದೇವರು ನೀಡಿದ ಅಮೂಲ್ಯ ಕೊಡುಗೆ, ಆದರೆ ಇಂದಿನ ಜೀವನ ಶೈಲಿ ನಮ್ಮ ಕಣ್ಣುಗಳನ್ನು ಅತೀ ಚಿಕ್ಕ ವಯಸ್ಸಿಗೆ ನಿಷ್ಕ್ರಿಯಗೊಳ್ಳುವಂತೆ ಮಾಡುತ್ತಿವೆ. ಕೆಲಸದ ಒತ್ತಡ ಸೇರಿದಂತೆ ಮನೋರಂಜನೆಗೆ ಬಳಸಲಾಗುತ್ತಿರುವ ಟಿವಿ, ಮೊಬೈಲ್‌, ಕಂಪ್ಯೂಟರ್‌ಗಳಂತಹ ಆಧುನಿಕ  ಉಪಕರಣಗಳು ನಮ್ಮ ದೃಷ್ಟಿ ಕಸಿದುಕೊಳ್ಳುತ್ತಿವೆ ಎಂದು ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ ಖೇದ ವ್ಯಕ್ತಪಡಿಸಿದರು.

ಸ್ನೇಹ ಸದನ ಸಮಗ್ರ ಸಮಾಜ ಕಾರ್ಯ ನಿರ್ವಹಣಾ ಕೇಂದ್ರ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಎಸ್‌ಜೆಜೆಎಂ ಸರ್ಕಾರಿ ಪದವಿ ಮಹಾವಿದ್ಯಾಲಯದ ಆಶ್ರಯದಲ್ಲಿ ಏರ್ಪಡಿಸಿದ್ದ ನೇತ್ರ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಪಂಚದ ಸೌಂದರ್ಯ ಆನಂದಿಸಲು ದೇವರು ನಮಗೆ ಕಣ್ಣು ನೀಡಿದ್ದಾನೆ. ಕಣ್ಣುಗಳಿಗೂ ವ್ಯಾಯಾಮ ಮತ್ತು ಅದರ ಸರಿಯಾದ ಕಾರ್ಯ ನಿರ್ವಹಣೆಗೆ ವಿಶ್ರಾಂತಿಬೇಕು ಎಂಬುದನ್ನು ಮರೆಯುತ್ತಾರೆ. ಕಣ್ಣುಗಳ ಆರೋಗ್ಯ ಮತ್ತು ಯೋಗ ಕ್ಷೇಮದ ಕುರಿತು ನಾವು ನಿಷ್ಕಾಳಜಿ ತೋರುವಂತಿಲ್ಲ, ದೇಹದಲ್ಲೇ ಅತ್ಯಂತ ಸೂಕ್ಷ್ಮವಾದ ಅಂಗವಾಗಿರುವ ಕಣ್ಣುಗಳ ಬಗ್ಗೆ ವಿಶೇಷ ಕಾಳಜಿ ತೋರುವಂತೆ ಕರೆ ನೀಡಿದರು.

ಶಂಕರ ಕಣ್ಣಿನ ಆಸ್ಪತ್ರೆಯ ವೈದ್ಯೆ ಕೃತಿಕಾ ಮಾತನಾಡಿ, ಮುದ್ರಣದಿಂದ ಬರುವಂತಹ ಸಣ್ಣ ಅಕ್ಷರಗಳನ್ನು ಕಷ್ಟಪಟ್ಟು ಓದುವುದನ್ನು ತಪ್ಪಿಸಬೇಕು. ಸ್ನಾನದ ಸಮಯದಲ್ಲಿ ತಲೆಯ ಮೇಲೆ ಬಿಸಿ ನೀರನ್ನು ಸುರಿದುಕೊಳ್ಳಬೇಡಿ. ಇದರಿಂದ ಕಣ್ಣಿನಲ್ಲಿರುವ ಶಕ್ತಿ ಕುಂಠಿತಗೊಳ್ಳಲಿದೆ. ಕನಿಷ್ಟ 10 ಅಡಿ ದೂರದಿಂದ ಟಿವಿ ವೀಕ್ಷಿಸಬೇಕು.

ದೀರ್ಘ‌ ಕಾಲದ ಕಂಪ್ಯೂಟರ್‌ ಬಳಕೆಯನ್ನು ನಿಲ್ಲಿಸಬೇಕು, ಕಡಿಮೆ ಬೆಳಕಿರುವ ಕಡೆಯಲ್ಲಿ ಕುಳಿತು ಓದುವುದು ಕಣ್ಣಿನ ಆರೋಗ್ಯಕ್ಕೆ ಸರಿಯಾದ ಕ್ರಮಗಳಲ್ಲ. ವಯೋ ಸಹಜವಾಗಿ ಬರುವಂತಹ ಕಣ್ಣಿನ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಅಥವಾ ಉಚಿತ ಶಿಬಿರಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿದರು.

ತಾಲೂಕು ಸಾರ್ವಜನಿಕ ಆಸ್ಪತ್ರೆ ನೇತ್ರ ತಜ್ಞರಾದ ಮಲ್ಲಿಕಾರ್ಜುನ ಮಾತನಾಡಿ, ವೈದ್ಯರು ನಿಮ್ಮ ಮನೆ ಬಾಗಿಲಿಗೆ ಬಂದು ಸೇವೆಗಳನ್ನು ನೀಡುತ್ತಿದ್ದಾರೆ ಇದೆಲ್ಲದರ ಉಪಯೋಗವನ್ನು ಶಿಬಿರಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಶಿಬಿರದಲ್ಲಿ ಸುಮಾರು 172 ಜನರು ಉಚಿತ ಚಿಕಿತ್ಸೆ ಪಡೆದು, ಇದರಲ್ಲಿ 98 ಜನರು ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದರು.

ಉಪನ್ಯಾಸಕ ಡಿ.ಬಿ. ಕುಸಗೂರ, ಮಾಜಿ ಸೈನಿಕ ಎಂ.ಡಿ. ಚಿಕ್ಕಣ್ಣನವರ, ಸ್ನೇಹಸದನ ಸಂಸ್ಥೆಯ ವ್ಯವಸ್ಥಾಪಕಿ ರೂಪಾ, ನಿರ್ದೇಶಕಿ ಗ್ಲೋರಿಯಾ ತೆರೆಸಿಟಾ, ಸಂಯೊಜಕರಾದ ಸುವರ್ಣಾ, ಕಾವ್ಯ, ಸರಸ್ವತಿ, ಫಾತೀಮಾ, ಈರಣ್ಣ ಮಾಸಣಗಿ, ಅಚಲಾ ಇನ್ನಿತರರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

ಗಾಯತ್ರಿ ಮಂತ್ರ ಜಪದಿಂದ ದೇಹದ ನಾಡಿ ಶುದ್ಧಿ: ನಾಗರಾಜಾನಂದ ಮಹಾಸ್ವಾಮಿ

4

Savanur: ಮನೆಯವರು ಟ್ರಿಪ್‌ ಹೋದ ಸಂದರ್ಭದಲ್ಲಿ ಮನೆಯಿಂದ ಕಳ್ಳತನ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

ಹುಕ್ಕೇರಿಮಠ ಶಿಕ್ಷಣ ಸಂಸ್ಥೆಯ ಕಾರ್ಯ ಸ್ಮರಣೀಯ-ಡಾ|ವಿಜಯಮಹಾಂತೇಶ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.