ಕೋವಿಡ್ ಗೆ ಸಾಮಾಜಿಕ ಅಂತರವೇ ಮದ್ದು
Team Udayavani, Aug 1, 2020, 1:04 PM IST
ಹಿರೇಕೆರೂರು: ರಟ್ಟಿಹಳ್ಳಿ ತಾಲೂಕಿನ ಗುಡ್ಡದಮಾದಾಪುರ ಗ್ರಾಮಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ ಇತ್ತೀಚೆಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿದರು.
ಈ ವೇಳೆ ಮಾತನಾಡಿದ ಕೃಷಿ ಸಚಿವರು, ಕೋವಿಡ್‌ನಿಂದಾಗಿ ಎಲ್ಲರಿಗೂ ಸಮಸ್ಯೆಯಾಗಿದೆ. ಕೊರೊನಾಕ್ಕೆ ಕಡಿವಾಣ ಬಿಳಬೇಕಾದರೆ ಸಾಮಾಜಿಕ ಅಂತರ ಹಾಗೂ ಸ್ವಚ್ಛತೆ ಮುಖ್ಯವಾಗಿದೆ. ಪ್ರತಿಯೊಬ್ಬರೂ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವ ಮೂಲಕ ಕೋವಿಡ್ ನಿಯಂತ್ರಣ ಮಾಡಬೇಕೆಂದು ಹೇಳಿದರು. ತಾಲೂಕಿನ ಜನರು ತೋರಿಸಿದ ಪ್ರೀತಿ-ವಿಶ್ವಾಸಕ್ಕೆ ಎಂದಿಗೂ ಚಿರರುಣಿಯಾಗಿದ್ದೇನೆ. ಗ್ರಾಮದ ಜನರ ಎಲ್ಲ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸಲಾಗುವುದು. ಗ್ರಾಮದ ಬಹುದಿನಗಳ ಕನಸಾದ ಕೆರೆ ತುಂಬಿಸುವ ಯೋಜನೆಯು ಮುಕ್ತಾಯ ಹಂತಕ್ಕೆ ಬಂದಿದ್ದು, ಶೀಘ್ರದಲ್ಲಿ ಕೆರೆ ತುಂಬಿಸುವ ಕೆಲಸ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಗುರುಬಸವರಾಜ, ಎಪಿಎಂಸಿ ಅಧ್ಯಕ್ಷ ನಾರಾಯಣಪ್ಪ ಗೌರಕ್ಕನವರ, ತಾಪಂ ಅಧ್ಯಕ್ಷ ದಿಳ್ಳೆಪ್ಪ ಹಳ್ಳಳ್ಳಿ, ಸದಸ್ಯ ಚಂದ್ರಪ್ಪ ಸಾಸ್ವಿಹಳ್ಳಿ, ರೇಣಕಪ್ಪ ಭರಮಗೌಡ್ರ, ಮಂಜಣ್ಣ ಬೇವಿನಹಳ್ಳಿ, ಡಿ.ಸಿ.ಪಾಟೀಲ, ಮಹೇಂದ್ರ ಬಡಳ್ಳಿ, ಇಒ ಮೋಹನಕುಮಾರ, ಅಧಿಕಾರಿಗಳಾದ ಎಸ್ ವಿ.ಪುರಾಣಿಕ, ಬಿ.ಬಸವಣ್ಣೆಪ್ಪ, ವಿಷ್ಣುಕಾಂತ, ರಾಜೀವ್ ಮರಿಗೌಡ್ರ, ಪಿಎಸ್‌ಐ ಆರ್.ಆಶಾ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ
MUST WATCH
ಹೊಸ ಸೇರ್ಪಡೆ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.