ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶ್ರಮಿಸಿ

ಎಲ್ಲರಲ್ಲೂ ಇರಲಿ ಸಮನ್ವಯತೆ ! ­ಜಾತ್ರೆ-ಅನಗತ್ಯ ಸಂದರ್ಭದಲ್ಲಿ ರಜೆ ನೀಡಿದರೆ ಕಲಿಕೆಗೆ ಹಿನ್ನಡೆ

Team Udayavani, Feb 11, 2021, 1:56 PM IST

SSLC

ಹಾವೇರಿ: ಕೋವಿಡ್‌ನಿಂದ ವಿದ್ಯಾರ್ಥಿಗಳು ಒಂಭತ್ತು ತಿಂಗಳ ಶಿಕ್ಷಣದಿಂದ ವಂಚಿತರಾಗಿದ್ದಾರೆ. ವಿದ್ಯಾರ್ಥಿಗಳ ಕಲಿಕಾ ಮಟ್ಟ ಸುಧಾರಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ನಿಟ್ಟಿಯಲ್ಲಿ ಎಲ್ಲರೂ ಒಟ್ಟಾಗಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಪಂ ಅಧ್ಯಕ್ಷ ಏಕನಾಥ ಭಾನುವಳ್ಳಿ ಹೇಳಿದರು.

ನಗರದ ಗುರುಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪಾಲಕರು-ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಜವಾಬ್ದಾರಿ ಹೆಚ್ಚಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ ತರಗತಿಗಳು ನಡೆದಿಲ್ಲ. ಇಂತಹ ಸಂದರ್ಭದಲ್ಲಿ ಜಾತ್ರೆ ಹಾಗೂ ಅನಗತ್ಯ ಸಂದರ್ಭಗಳಲ್ಲಿ ಶಾಲೆಗಳಿಗೆ ರಜೆ ನೀಡಿದರೆ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನೆಡೆ ಉಂಟಾಗುತ್ತದೆ. ಹಾಗಾಗಿ ಶಾಲೆಗಳಿಗೆ ಸಣ್ಣ ಪುಟ್ಟ ಕಾರಣಗಳಿಗೆ ರಜೆ ನೀಡಬೇಡಿ. ಒಂದು ವೇಳೆ ರಜೆ ನೀಡಿದರೆ ಪರ್ಯಾಯವಾಗಿ ರವಿವಾರ ಶಾಲೆ ನಡೆಸುವಂತೆ ಶಿಕ್ಷಣ ಇಲಾಖೆ ಅಧಿ ಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಕಲಿಕೆಗೆ ಮುಂದಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಮೊದಲಿಗಿಂತ ಈಗ ವ್ಯವಸ್ಥೆ ಸುಧಾರಿಸಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಬೇಕು, ಶಿಕ್ಷಣದ ಕಡೆಗೆ ಮಕ್ಕಳನ್ನು ಆಕರ್ಷಿತರನ್ನಾಗಿ ಮಾಡಬೇಕು ಎಂದು ಸಲಹೆ ನೀಡಿದರು.

ಕಳೆದ ಸಾಲಿನಲ್ಲಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ 33ನೇ ಸ್ಥಾನದಲ್ಲಿತ್ತು. ಈ ಶೈಕ್ಷಣಿಕ ವರ್ಷದಲ್ಲಿ ಕೋವಿಡ್‌ ನಿಂದಾಗಿ ಮಕ್ಕಳ ಕಲಿಕೆಯಲ್ಲಿ ತೊಂದರೆಯಾಗಿದೆ. ಶಿಕ್ಷಕರು ಕ್ರಿಯಾಶೀಲರಾಗಿ ಈಗಿರುವ ಅವಕಾಶ ಬಳಸಿಕೊಂಡು ಎಲ್ಲ ವಿದ್ಯಾರ್ಥಿಗಳನ್ನು ಗಣನೆಗೆ ತೆಗೆದುಕೊಂಡು ಉತ್ತಮವಾಗಿ ಬೋಧಿಸುವ ಮೂಲಕ ಜಿಲ್ಲೆಗೆ ಉತ್ತಮ ಫಲಿತಾಂಶ ಬರುವಂತೆ ಕಾರ್ಯನಿರ್ವಹಿಸಲು ಸಲಹೆ ನೀಡಿದರು.

ಜಿಪಂ ಸಿಇಒ ಮಹಮ್ಮದ ರೋಷನ್‌ ಮಾತನಾಡಿ, ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಹಿನ್ನೆಲೆಯಲ್ಲಿ  ಶಿಕ್ಷಣ ಇಲಾಖೆಯಿಂದ ಈಗಾಗಲೇ ಕ್ವಿಜ್‌ ಹಾಗೂ ಟೆಸ್ಟ್‌ ಪರೀಕ್ಷೆ ಮಾಡಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ತಿಳಿಯಲು ಕೆಂಪು, ಹಳದಿ ಹಾಗೂ ಹಸಿರು ಗುಂಪುಗಳಾಗಿ ವಿಂಗಡಿಸಲಾಗಿದೆ. ಕೆಂಪು ಗುಂಪಿನ ಮಕ್ಕಳ ಕಲಿಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.

ಮೂರು ವಿಭಾಗದಲ್ಲಿ ವಿಂಗಡಣೆಯಿಂದ ವಿಷಯ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಸ್ಥಿತಿಗತಿ ಬಗ್ಗೆ ಮಾಹಿತಿ ದೊರೆಯುತ್ತಿದ್ದು, ಕಲಿಕೆಯಲ್ಲಿ ಹಿಂದಿರುವ ಶಾಲೆಗಳ ಮೇಲೆ ನಿಗಾವಹಿಸಲು ಸಹಕಾರಿಯಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಸಂಕಲ್ಪದಿಂದ ಒಂಚೂರು ಹಿಂದೆ ಹೋಗಬಾರದು. ಈ ವರ್ಷದಲ್ಲಿ ಜಿಲ್ಲೆಗೆ ರಾಜ್ಯಕ್ಕೆ ಮೊದನೇ ಸ್ಥಾನದಲ್ಲಿ ಬರಲು ಪ್ರಮಾಣ ಮಾಡೋಣ ಎಂದು ಹೇಳಿದರು.

ಇದನ್ನೂ ಓದಿ :ಹೊಸನೀರಲಗಿಯಲ್ಲಿ ಡಿಸಿ ಗ್ರಾಮ ವಾಸ್ತವ್ಯ

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಮಾತನಾಡಿ, ಎಸ್ಸೆಸ್ಸೆಲ್ಸಿ ಫಲಿತಾಂಶ  ಸುಧಾರಣೆಗೆ ಹಾಕಿಕೊಂಡ ರೂಪುರೇಷೆಗಳ ತಿಳಿಸಿ, ಶಿಕ್ಷಕರು ಇನ್ಮುಂದೆ ರಜೆ ಪಡೆಯದೇ ಕಲಿಕೆಗೆ ಒತ್ತು ನೀಡಬೇಕು. ಸಾಧ್ಯವಾದರೇ ರಜೆ ದಿನಗಳಲ್ಲಿ ವಿಶೇಷ ತರಗತಿ ನಡೆಸುವಂತೆ ತಿಳಿಸಿದರು. ಈ ವೇಳೆ ಡಯಟ್‌ ಉಪನಿರ್ದೇಶಕ ಡಿ.ಎಂ. ಬಸವರಾಜ, ಡಯಟ್‌ ಹಿರಿಯ ಪ್ರಾಚಾರ್ಯ ಖಾಜಿ, ಅಕ್ಷರ ದಾಸೋಹ ಅಧಿ ಕಾರಿ ಅಡಿಗ, ಸುನಿತಾ, ಸವಣೂರ ಬಿಇಒ ಬೆನಕಪ್ಪ, ಹಾವೇರಿ ಬಿಇಒ ಎಂ.ಎಚ್‌. ಪಾಟೀಲ, ಶಿಗ್ಗಾವಿ ಬಿಇಒ ಚಿಕ್ಕಮಠ, ಹಾನಗಲ್ಲ ಬಿಇಒ ಶ್ರೀನಿವಾಸ, ರಾಣಿಬೆನ್ನೂರು ಬಿಇಒ ಗುರುಪ್ರಸಾದ, ಹಿರೇಕೆರೂರು ಬಿಇಒ ಸಿದ್ದಲಿಂಗಪ್ಪ ಸೇರಿದಂತೆ ಜಿಲ್ಲೆಯ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮುಖ್ಯಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bjp-congress

Aranthodu :ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

1-bhatru

Subrahmanya: ಅರ್ಚಕರ ಮನೆಯಿಂದ ನಗ-ನಗದು ಕಳವು

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

bjp-congress

Aranthodu :ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

BBK11: ಚೈತ್ರಾಳನ್ನು ಬಿಗ್ ಬಾಸ್ ಮನೆಯ ಬಕೆಟ್ , ಟ್ಯಾಂಕ್ ಎಂದ ಐಶ್ವರ್ಯಾ

court

Kasaragod; ಯುವಕನ ಕೊಲೆ: 6 ಮಂದಿಗೆ ಜೀವಾವಧಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

arrested

BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.