ಕಿಸಾನ್ ಸಮ್ಮಾನ್ ಜಾಗೃತಿ ರಥ ಸಂಚಾರಕ್ಕೆ ಚಾಲನೆ
ಕೃಷಿ ಭೂಮಿ ಹೊಂದಿರುವ ರೈತ ಕುಟುಂಬಕ್ಕೆ ವಾರ್ಷಿಕ ಆರು ಸಾವಿರ ರೂ. ಲಭ್ಯ: ಜಿಲ್ಲಾಧಿಕಾರಿ
Team Udayavani, Jun 29, 2019, 10:08 AM IST
ಹಾವೇರಿ: ಜಾಗೃತಿ ರಥಯಾತ್ರೆಗೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹಸಿರು ನಿಶಾನೆ ತೋರಿದರು.
ಹಾವೇರಿ: ಕೃಷಿ ಭೂಮಿ ಹೊಂದಿರುವ ರೈತ ಕುಟುಂಬಕ್ಕೆ ವಾರ್ಷಿಕ ಆರು ಸಾವಿರ ರೂ. ನೀಡುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಜಿಲ್ಲೆಯ ರೈತರ ನೋಂದಣಿಗಾಗಿ ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮದ ರಥ ಸಂಚಾರಕ್ಕೆ ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಹಸಿರು ನಿಶಾನೆ ತೋರಿದರು.
ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಿಗೆ ರಥ ಸಂಚಾರ ಆರಂಭಿಸಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ನೋಂದಾಯಿಸಿಕೊಳ್ಳುವ ಜಾಗೃತಿ ಜತೆಗೆ ಕೃಷಿ ಪೂರಕ ಉದ್ಯೋಗ ಖಾತ್ರಿ ಯೋಜನೆಗಳ ಮಾಹಿತಿ, ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಯ ಕುರಿತ ಯೋಜನೆಗಳ ಮಾಹಿತಿ ಬಿತ್ತರಿಸುವ ರಥಗಳು ಜಿಲ್ಲೆಯಲ್ಲಿ ಸಂಚರಿಸಿ ಮಾಹಿತಿ ನೀಡಲಿವೆ. ಕೃಷಿ ಸಮ್ಮಾನ ಯೋಜನೆಯಡಿ ಪ್ರತಿ ರೈತ ಕುಟುಂಬಕ್ಕೆ ವರ್ಷದಲ್ಲಿ ಸಮಾನ ಮೂರು ಕಂತುಗಳಲ್ಲಿ ಎರಡುಸಾವಿರದಂತೆ ಒಟ್ಟಾರೆ ಆರು ಸಾವಿರ ಹಣವನ್ನು ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ಈ ಲಾಭ ಪಡೆಯಲು ರೈತರು ತಮ್ಮ ಜಮೀನಿನ ಖಾತೆಯ ವಿವರ, ಬ್ಯಾಂಕ್ ಖಾತೆ ವಿವರ, ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆಯೊಂದಿಗೆ ನೋಂದಾಯಿಸಿಕೊಳ್ಳಬೇಕು.
ಈ ಯೋಜನೆಗೆ ನೋಂದಾಯಿಸಿಕೊಳ್ಳಲು ಜೂ. 30 ಕೊನೆಯ ದಿನವಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಸ್ವ ಘೋಷಣೆ ಪತ್ರದೊಂದಿಗೆ ರೈತ ಸಂಪರ್ಕ ಕೇಂದ್ರಗಳು, ಗ್ರಾಮ ಪಂಚಾಯತಿ ಕಚೇರಿಗಳು, ಕೃಷಿ, ತೋಟಗಾರಿಕೆ, ರೇಷ್ಮೆ, ಕಂದಾಯ ಇಲಾಖಾ ಕಚೇರಿಗಳು, ಅಟಲ್ಜೀ ಜನಸ್ನೇಹಿ ಕೇಂದ್ರಗಳು(ನಾಡಕಚೇರಿ) ಅಥವಾ ನಾಗರಿಕ ಸೇವಾ ಕೇಂದ್ರಗಳಲ್ಲಿ ಸಂಪರ್ಕಿಸಿ ನೋಂದಾಯಿಸಿಕೊಳ್ಳಬಹುದು.
ಭೂಮಿ ಹೊಂದಿರುವ ಸಣ್ಣ ಅತೀ ಸಣ್ಣ ಒಳಗೊಂಡಂತೆ ಎಲ್ಲ ರೈತರಿಗೂ ಈ ಯೋಜನೆ ಅನ್ವಯಿಸುತ್ತದೆ. ಆದರೆ, ಸಂಘ-ಸಂಸ್ಥೆಗಳು, ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆಗಳು, ಮಾಜಿ ಮತ್ತು ಹಾಲಿ ಸಚಿವರು, ರಾಜ್ಯ ಸಚಿವರು, ರಾಜ್ಯ ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು, ನಗರಸಭೆ, ಪುರಸಭೆ, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ವೈದ್ಯರು, ಅಭಿಯಂತರರು, ವಕೀಲರು, ಲೆಕ್ಕಪರಿಶೋಧಕ, ವಾಸ್ತುಶಿಲ್ಪಿದಂತಹ ವೃತ್ತಿಪರರು ಮತ್ತು ವೃತ್ತಿಪರ ಸಂಸ್ಥೆಯಲ್ಲಿ ನೋಂದಾಯಿಸಿಕೊಂಡು ವೃತ್ತಿಯಲ್ಲಿ ತೊಡಗಿರುವವರು, ಸಿ ಗ್ರೂಪ್ ಒಳಗೊಂಡಂತೆ ಮೇಲ್ಪಟ್ಟ ಎಲ್ಲ ಸರ್ಕಾರಿ, ಅರೇ ಸರ್ಕಾರಿ ಹಾಗೂ ಸಹಕಾರಿ ಕ್ಷೇತ್ರದ ನೌಕರರು, ಅಧಿಕಾರಿಗಳು ಹಾಗೂ ಕಳೆದ ಸಾಲಿನಲ್ಲಿ ಆದಾಯ ತೆರಿಗೆ ಪಾವತಿ ಮಾಡಿದವರು ಮತ್ತು ಹತ್ತು ಸಾವಿರಕ್ಕಿಂತ ಹೆಚ್ಚಿನ ಪಿಂಚಣಿ ಪಡೆಯುತ್ತಿರುವವರು (ಡಿ ಗ್ರೂಪ್ ಹೊರತು) ಈ ಯೋಜನೆಯಡಿ ಬರುವುದಿಲ್ಲ.
ಜಿಲ್ಲೆಯಲ್ಲಿ ಅಂದಾಜು 2.40 ಲಕ್ಷ ರೈತರು ಈ ಯೋಜನೆಯಡಿ ನೋಂದಾಯಿಸಬೇಕಾಗಿದ್ದು, ಈಗಾಗಲೇ 80ಸಾವಿರಕ್ಕೂ ಅಧಿಕ ರೈತರನ್ನು ನೋಂದಾಯಿಸಲಾಗಿದೆ. ಕಾಲ ಮಿತಿಯೋಳಗೆ ಅರ್ಹ ಎಲ್ಲ ರೈತರನ್ನು ನೋಂದಾಯಿಸಿ ಎಲ್ಲರಿಗೂ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಲಾಭ ದೊರಕಿಸಿಕೊಡಲು ಜಾಗೃತಿ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ಜಂಟಿ ನಿರ್ದೇಶಕ ಮಂಜುನಾಥ್ ತಿಳಿಸಿದರು.
ಎಡಿಸಿ ಎನ್. ತಿಪ್ಪೇಸ್ವಾಮಿ, ಕೃಷಿ ಇಲಾಖೆ ಉಪನಿರ್ದೇಶಕ ಹುಲಿರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru; ಸದ್ಯ ಖಾಸಗಿ ಬಸ್ ಟಿಕೆಟ್ ದರ ಏರಿಕೆ ಇಲ್ಲ
Kasaragod:ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ
Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
“ನಿಮ್ಹಾನ್ಸ್ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.