ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಮೇಲ್ಮುರಿ ಆಯ್ಕೆ
ಕಲಿಕೆಯಲ್ಲಿ ಹೊಸತನ, ಶಾಲಾ ವನ, ಸ್ವಚ್ಛ ಪರಿಸರ ನಿರ್ಮಾಣ, ಮಕ್ಕಳ ಸಂಖ್ಯೆ ಹೆಚ್ಚಳ ಮುಂತಾದ ಪರಿಶ್ರಮಕ್ಕೆ ಸಂದ ಗೌರವ
Team Udayavani, Sep 4, 2022, 4:11 PM IST
ಹಾವೇರಿ: ಪ್ರಸಕ್ತ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಾಲೂಕಿನ ಹಂದಿಗನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಾಧ್ಯಾಪಕ ಕೊಟ್ರಪ್ಪ ಮೇಲ್ಮುರಿ ಆಯ್ಕೆಯಾಗಿದ್ದಾರೆ.
ಕಲಿಕೆಯಲ್ಲಿ ನಾವೀನ್ಯತೆ ಅಳವಡಿಕೆ, ಶಾಲಾ ವನ, ಸ್ವಚ್ಛ ಪರಿಸರ ನಿರ್ಮಾಣ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಅಳವಡಿಸಿದ ಪರಿಣಾಮ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಒಲಿದು ಬಂದಿದೆ.
ಖಾಸಗಿ ಶಾಲೆಗಳ ನಾಗಾಲೋಟದಲ್ಲಿ ಸರ್ಕಾರಿ ಶಾಲೆಗಳು ಕಲಿಕೆ ಮತ್ತು ಅಭಿವೃದ್ಧಿಯಲ್ಲಿ ಹಿಂದುಳಿದಿಲ್ಲ ಎಂಬುದನ್ನು ಶಾಲೆಯ ಮುಖ್ಯಾಧ್ಯಾಪಕ ಮೇಲ್ಮುರಿ ತೋರಿಸಿಕೊಟ್ಟಿದ್ದಾರೆ.
ಇಂಗ್ಲಿಷ್ ಭಾಷೆ ಗ್ರಾಮೀಣ ಮಕ್ಕಳಿಗೆ ರುಚಿಸುವಂತೆ ಸರಳ ಓದು, ಶುದ್ಧ ಬರಹ, ಪದ ಸಂಗ್ರಹದ ಕಲಿಕೋಪಕರಣಗಳನ್ನು ಶಾಲೆಯಲ್ಲಿ ಅಳವಡಿಸಿದ್ದಾರೆ. ನಲಿಕಲಿಯಲ್ಲಿ ಸ್ವಯಂ ಕಲಿಕೆ, ಗುಂಪು ಕಲಿಕೆ ಜಾರುಪಟ್ಟಿ, ತಟ್ಟೆ ಚಪ್ಪರ ಅಳವಡಿಕೆ, ವಿಜ್ಞಾನಗಳ ಸರಳ ಪ್ರಯೋಗಗಳು, ಗಣಿತದ ಸರಳ ಲೆಕ್ಕಗಳನ್ನು ನಾವೀನ್ಯತೆಯ ಬೋಧನಾ ಕ್ರಮದ ಮೂಲಕ ಮಕ್ಕಳಿಗೆ ದಿನವೂ ಪರಿಸರದಲ್ಲಿ ಕಲಿಕಾ ವಾತಾವರಣ ನಿರ್ಮಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
ಶಾಸಕರ ಅನುದಾನದಿಂದ ಹಾಗೂ ಗ್ರಾಮ ಪಂಚಾಯಿತಿಯಿಂದ 10 ಲಕ್ಷ ರೂ. ಮೌಲ್ಯದ ಅಭಿವೃದ್ಧಿ ಕಾರ್ಯಗಳನ್ನು ಶಾಲೆಯಲ್ಲಿ ಮಾಡಿಸಿದ್ದಾರೆ.
ಶಾಲಾ ವನ ನಿರ್ಮಾಣ ಮಾಡಿ, ರಾಸಾಯನಿಕ ಗೊಬ್ಬರ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಿದ್ದಾರೆ. ಶಾಲಾ ವನಕ್ಕೆ ರಕ್ಷಣಾ ಗೋಡೆ, ಹಸಿರು ಸೊಪ್ಪು ಬೆಳೆಯುವಿಕೆ, ಸುಂದರ, ಸ್ವಚ್ಛ ಪರಿಸರ ನಿರ್ಮಾಣ ಮಾಡಿದ್ದಾರೆ. ಪ್ರತಿ ಶುಕ್ರವಾರ ಸಾಂಸ್ಕೃತಿಕ ಸಂಜೆ ನಾವೀನ್ಯತಾ ಕಾರ್ಯಕ್ರಮ, ತಾಯಂದಿರ ಸಭೆ, ಪಾಲಕರ ಸಭೆ, ಶಾಲೆಗೆ ಬನ್ನಿ ಶನಿವಾರ, ವಿಶಿಷ್ಟ ಪರಿಹಾರ ಬೋಧನೆ ಇತ್ಯಾದಿ ಅಂಶಗಳನ್ನು ಹಂದಿಗನೂರು ಶಾಲೆಯಲ್ಲಿ ಅಳವಡಿಸಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
30 ವರ್ಷಗಳ ಸಾರ್ಥಕ ಸೇವೆ: ಹಾನಗಲ್ಲ ತಾಲೂಕು ಮಲ್ಲಿಗಾರ ಓಣಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಆರಂಭಿಸಿದ 1992ರಲ್ಲಿ ಕೊಟ್ರಪ್ಪ ಮೇಲ್ಮುರಿ ಅವರು, ಸಿಆರ್‌ಪಿ ಆಗಿ 7 ವರ್ಷ ಸೇವೆ ಸಲ್ಲಿಸಿದ್ದಾರೆ. ಬಳಿಕ ತಾಲೂಕಿನ ಕೊರಡೂರು ಶಾಲೆ, ಸದ್ಯ ಹಂದಿಗನೂರು ಶಾಲೆ ಮುಖ್ಯಾಧ್ಯಾಪಕರಾಗಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಲ್ಲಿಗಾರ ಶಾಲೆಯಲ್ಲಿ ಹೆಚ್ಚಾಗಿ ಲಮಾಣಿ ಸಮುದಾಯದ ಮಕ್ಕಳೇ ಕಲಿಯುತ್ತಿದ್ದರು. ಶಾಲೆಯ ಶೋಚನೀಯ ಸ್ಥಿತಿ ಕಂಡು ಶಾಲೆಗೆ ಒಂದು ಹೊಸ ರೂಪ ಕೊಡಲು ಸಂಕಲ್ಪ ಮಾಡಿದರು. ಊರ ಹಿರಿಯರ, ಶಿಕ್ಷಣ ಪ್ರೇಮಿಗಳ ಸಭೆ ನಡೆಸಿ, ದಾಖಲಾತಿ, ಹಾಜರಾತಿ ಅಂದೋಲನ ಕೈಗೊಂಡು ಸಮೀಪದ ಸಾತೇನಹಳ್ಳಿ ಗ್ರಾಮಕ್ಕೆ ಹೋಗಿ ಅಲ್ಲಿಂದ ಮಕ್ಕಳನ್ನು ತಮ್ಮ ಶಾಲೆಗೆ ದಾಖಲು ಮಾಡಿಕೊಂಡು ಮಕ್ಕಳ ಸಂಖ್ಯೆಯನ್ನು 60ಕ್ಕೆ ಹೆಚ್ಚಿಸಿದರು. ಅರಳೇಶ್ವರ, ಕೊರಡೂರ ಶಾಲೆಯಲ್ಲಿ ಸೇವೆ ಸಲ್ಲಿಸಿ 2014ರಿಂದ ಬಡ್ತಿ ಮುಖ್ಯೋಪಾಧ್ಯಾಯರಾಗಿ ಹಂದಿಗನೂರ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಶಾಲೆಯಲ್ಲಿ ಉತ್ತಮ ಪರಿಸರ ಸಂರಕ್ಷಣೆ ಮಾಡಿ ಮೂರು ಬಾರಿ ಜಿಲ್ಲಾ ಪರಿಸರ ಮಿತ್ರ ಪ್ರಶಸ್ತಿ ಪಡೆದಿದ್ದಾರೆ. ವಿದ್ಯಾಗಮ ಕಾರ್ಯಕ್ರಮದಲ್ಲೂ ಶಾಲೆಯ ಪ್ರಗತಿ ಕಂಡು ಇಲಾಖೆ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದರು.
ಶಿಕ್ಷಕರಿಗೆ ಪ್ರಶಸ್ತಿ ಬರುವುದು ಕಡಿಮೆ. ಈ ಸಲದ ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ತುಂಬಾ ಸಂತೋಷವಾಗುತ್ತಿದೆ. ಇದರಿಂದ ಜವಾಬ್ದಾರಿ ಮತ್ತಷ್ಟು ಹೆಚ್ಚಿದೆ. ಮಕ್ಕಳ ಕಲಿಕೆ, ಸಾಧನೆಯಲ್ಲೇ ನಾವು ಸಂತಸ ಕಾಣುತ್ತೇವೆ. ನಮ್ಮ ಕೈಯಲ್ಲಿ ಕಲಿತ ಅನೇಕ ವಿದ್ಯಾರ್ಥಿಗಳು ಕರೆ ಮಾಡಿ ಅಭಿನಂದಿಸುತ್ತಿದ್ದಾರೆ. ಬಹಳ ಸಂತೋಷವಾಗುತ್ತಿದೆ. -ಕೊಟ್ರಪ್ಪ ಮೇಲ್ಮುರಿ, ಪ್ರಶಸ್ತಿಗೆ ಭಾಜನ ಶಿಕ್ಷಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.