ಲಿಂಗ ಅಸಮಾನತೆ ತೊಲಗಿಸಲು ಶ್ರಮಿಸಿ
Team Udayavani, Jan 31, 2021, 3:53 PM IST
ಹಾವೇರಿ: ಸಮಾಜದಲ್ಲಿ ಲಿಂಗ ಅಸಮಾನತೆ ತೊಲಗಬೇಕು. ಗಂಡು-ಹೆಣ್ಣು ಎಂಬ ಭೇದಭಾವ ಮಾಡಬಾರದು. ಮಹಿಳೆಯರಿಗೂ ಸಮಾನ ಅವಕಾಶ ಕಲ್ಪಿಸಿ, ಉತ್ತಮ ಶಿಕ್ಷಣ ನೀಡಬೇಕೆಂದು ಜಿಪಂ ಅಧ್ಯಕ್ಷ ಏಕನಾಥ ಬಾನುವಳ್ಳಿ ಹೇಳಿದರು.
ನಗರದ ಬಾಲಭವನದಲ್ಲಿ ಶನಿವಾರ ರಾಷ್ಟ್ರೀಯ ಹೆಣ್ಣು ಮಗು ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ಆಯೋಜಿಸಿದ್ದ “ಮಗಳನ್ನು ಉಳಿಸಿ ಮಗಳನ್ನು ಬೆಳೆಸಿ’ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಇಂದಿನ ದಿನಮಾನಗಳಲ್ಲಿ ಸಮಾಜದ ಎಲ್ಲ ಕ್ಷೇತ್ರದಲ್ಲೂ ಮಹಿಳೆ ಉತ್ತಮ ಸಾಧನೆ ಮಾಡುತ್ತಿದ್ದಾರೆ. ದೇಶದ ಅತ್ಯುತ್ತಮ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರ ಶಿಕ್ಷಣಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಗ್ರಾಪಂ, ತಾಪಂ ಹಾಗೂ ಜಿಪಂ ಮಟ್ಟದಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮಿಸಲಾತಿಯ ಅವಕಾಶ ಕಲ್ಪಿಸಲಾಗಿದೆ.
ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಹಾಗೂ ಆರ್ಥಿಕ ಶಕ್ತಿ ತುಂಬಲು ಎಲ್ಲ ಅವಕಾಶಗಳನ್ನು ಕಲ್ಪಿಸಲಾಗಿದೆ. ಈ ಅವಕಾಶಗಳನ್ನು ಬಳಸಿಕೊಳ್ಳಲು ಮನವಿ ಮಾಡಿದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಪಂ ಉಪಾಧ್ಯಕ್ಷೆ ರಾಜೇಶ್ವರಿ ಕಲ್ಲೇರ, ಹೆಣ್ಣು ಮಕ್ಕಳ ಓದಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ.
ಬಡತನದಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವುದನ್ನು ಬಿಡಬೇಡಿ. ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ ಉತ್ತಮ ವಿದ್ಯಾವಂತರನ್ನಾಗಿ ಮಾಡಬೇಕು ಎಂದರು. ಇದೇ ವೇಳೆ ಹಾವೇರಿ ಜಿಲ್ಲೆಯಲ್ಲಿಯೇ ಲಿಂಗಾನು ಪಾತದಲ್ಲಿ ಪ್ರಗತಿಸಿ ಸಾಧಿಸಿದ ಹಿರೇಕೆರೂರು ತಾಲೂಕಿನತಡಕನಹಳ್ಳಿ ಗ್ರಾಪಂಗೆ 20 ಸಾವಿರ ರೂ., ಪ್ರೋತ್ಸಾಹಧನನೀಡಿ ಪಿಡಿಒ ಶ್ರುತಿ ಎನ್.ಕೆ. ಹಾಗೂ ಅಧ್ಯಕ್ಷೆ ಶಾಂತಮ್ಮ ಅವರನ್ನು ಸನ್ಮಾನಿಸಲಾಯಿತು.
ಇದನ್ನೂ ಓದಿ:ಕೋವಿಡ್ ಲಸಿಕಾ ಕಾರ್ಯ ಅಚ್ಚುಕಟ್ಟು ನಿರ್ವಹಣೆಗೆ ಡಿಸಿ ಸೂಚನೆ
ಮಗಳನ್ನು ಉಳಿಸಿ ಮಗಳನ್ನು ಓದಿಸಿ ಯೋಜನೆಯಡಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ ಅಂಗನ ವಾಡಿ ಕಾರ್ಯಕರ್ತೆಗೆ ಐದು ಸಾವಿರ ರೂ. ಚೆಕ್ ನೀಡಿ ಗೌರವಿಸಲಾಯಿತು. ಶಿಶು ಅಭಿವೃದ್ಧಿ ಯೋಜನಾಧಿ ಕಾರಿ ಶೈಲಾ ಕುರಹಟ್ಟಿ ಅವರು ಪ್ರಸ್ತಾವಿಕ ವಾಗಿ ಮಾತನಾಡಿದರು. ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ ಸ್ವಾಗತಿಸಿ, ರೇಣುಕಾ ಕೌಜಗೇರಿ ನಿರೂಪಿಸಿ, ಭಾಗ್ಯ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.