ಹಾಸ್ಟೆಲ್ ಪ್ರವೇಶಕ್ಕೆ ವಿದ್ಯಾರ್ಥಿಗಳ ಹಿಂದೇಟು
4 ದಿನಗಳಲ್ಲಿ ಕೇವಲ 28 ವಿದ್ಯಾಥಿಗಳು ವಾಸ್ತವ್ಯ
Team Udayavani, Nov 23, 2020, 7:34 PM IST
ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ದಿಂದ ಬಂದ್ ಆಗಿದ್ದ ಕಾಲೇಜುಗಳು ಸರ್ಕಾರದ ಆದೇಶದ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ಪುನರಾರಂಭಗೊಂಡಿವೆ.
ಆದರೆ ಜಿಲ್ಲೆಯ ವಸತಿ ನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಕಳೆದನಾಲ್ಕು ದಿನಗಳಲ್ಲಿ ಕೇವಲ 28 ವಿದ್ಯಾಥಿಗಳಷ್ಟೇ ವಸತಿ ನಿಲಯಗಳಲ್ಲಿ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ಸರ್ಕಾರದ ಆದೇಶದಂತೆ ಜಿಲ್ಲೆಯ ಸಮಾಜಕಲ್ಯಾಣ ಇಲಾಖೆ ಸಿಬ್ಬಂದಿ ವಸತಿ ನಿಲಯಗಳಿಗೆ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಕಲ ಸಿದ್ಧತೆ ನಡೆಸಿದ್ದರು. ಆದರೆ ಬಹುತೇಕ ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಬರಲು ಹಿಂದೇಟು ಹಾಕಿದ್ದರಿಂದ ಸಮಾಜ ಇಲಾಖೆ ಸಿಬ್ಬಂದಿ ನಿರಾಸೆಗೊಂಡಿದ್ದಾರೆ.
ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಡಿ ಜಿಲ್ಲೆಯಲ್ಲಿ 18 ವಿದ್ಯಾರ್ಥಿ ವಸತಿ ನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಕಾಲೇಜು ಆರಂಭಗೊಂಡ ಹಿನ್ನೆಲೆನೂರಾರು ವಿದ್ಯಾರ್ಥಿಗಳು ಹಾಸ್ಟೆಲ್‌ಗೆ ಪ್ರವೇಶ ಪಡೆಯುವ ನಿರೀಕ್ಷೆ ಹೊಂದಲಾಗಿತ್ತು. ಆದರೆಇದುವರೆಗೆ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ವಸತಿ ನಿಲಯಗಳತ್ತ ಹೆಚ್ಚೆ ಹಾಕಿದ್ದಾರೆ.
ಕೋವಿಡ್ ಆತಂಕ: ಕೋವಿಡ್ ಆತಂಕದ ನಡುವೆಯೇ ಸರ್ಕಾರದ ಆದೇಶ ಹಿನ್ನೆಲೆ ಹಂತಿಮ ಹಂತದ ಪದವಿ ಕಾಲೇಜು ಪುನರಾರಂಭಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಹಾಸ್ಟೆಲ್ ತೆರೆಯಲಾಗಿದೆ. ಆದರೆ ಬಹುತೇಕ ಪಾಲಕರಲ್ಲಿ ಇನ್ನು ಕೋವಿಡ್ ಆತಂಕ ಮನೆ ಮಾಡಿದ್ದು ತಮ್ಮ ಮಕ್ಕಳನ್ನು ಹಾಸ್ಟೆಲ್‌ಗೆ ಕಳಹಿಸಲು ಹಿಂದೇಟು ಹಾಕುತ್ತಿದ್ದಾರೆ. ಜತೆಗೆ ಹೊಸ ಪ್ರವೇಶಕ್ಕೆ ಈ ಬಾರಿ ಅನುಮತಿ ಇಲ್ಲದ ಕಾರಣ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಕೊರತೆ ಎದುರಾಗಿದೆ. ಅಲ್ಲದೇ ಇನ್ನು ಕಾಲೇಜುಗಳು ಸಮರ್ಪಕವಾಗಿ ಪುನರಾರಂಭವಾಗಿಲ್ಲ. ಈ ಕಾರಣದಿಂದ ಪ್ರಾರಂಭದ ದಿನಗಳಲ್ಲಿ ವಿದ್ಯಾರ್ಥಿಗಳ ಕೊರತೆ ಎದುರಾಗಿದೆ. ಮುಂದಿನ ದಿನಗಳಲ್ಲಿ ನಿರೀಕ್ಷಿಸಿದಷ್ಟು ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಆಶಯ ವ್ಯಕ್ತಪಡಿಸಿದ್ದಾರೆ.
ಕಾದು ನೋಡುವ ತಂತ್ರ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿದ್ದರೂ, ಗ್ರಾಮೀಣ ಪ್ರದೇಶದ ಜನರು ಕೋವಿಡ್ ಆತಂಕದಿಂದ ಹೊರಬಂದಿಲ್ಲ. ಅದರಲ್ಲೂ ಪಾಲಕರು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿರುವುದರಿಂದ ಸ್ಪಲ್ಪ ದಿನ ಕಾದು ನೋಡುವ ಯೋಜನೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ಇದರೊಂದಿಗೆ ವಸತಿ ನಿಲಯಗಳಿಗೆ ಬರುವ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸುತ್ತಿರುವುದರಿಂದ ಹಲವು ವಿದ್ಯಾರ್ಥಿಗಳು ಹಾಸ್ಟೆಲ್ ಪ್ರವೇಶಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.
ಸಕಲ ಸಿದ್ಧತೆ: ಜಿಲ್ಲೆಯ ಎಲ್ಲ ವಸತಿ ನಿಲಯಗಳು ವಿದ್ಯಾರ್ಥಿಗಳನ್ನು ಸ್ವಾಗತಿಸಲು ಸಕಲ ರೀತಿಯಲ್ಲಿ ಸಜ್ಜಾಗಿವೆ. ಸರ್ಕಾರದ ಮಾರ್ಗಸೂಚಿಯನ್ವಯ ಎಲ್ಲವಸತಿ ನಿಲಯ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ.ವಸತಿ ನಿಲಯಗಳ ಆಯಕಟ್ಟಿನ ಜಾಗದಲ್ಲಿಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಅಡುಗೆ ಮನೆ, ವಿದ್ಯಾರ್ಥಿಗಳ ಕೊಠಡಿಗಳಲ್ಲಿ ಸ್ವತ್ಛತೆಕಾಯ್ದುಕೊಳ್ಳಲಾಗಿದೆ. ಜತೆಗೆ ವಿದ್ಯಾರ್ಥಿಗಳಕೊಠಡಿಗಳಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಪ್ರತಿನಿತ್ಯ ಥರ್ಮಲ್ ಸ್ಕ್ರೀನಿಂಗ್ ಮಾಡುವುದು,ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ದಾಖಲು ಮಾಡುವ ಕಾರ್ಯಕ್ಕೆ ಸಿಬ್ಬಂದಿ ತಯಾರಿ ನಡೆಸಿದ್ದಾರೆ.
ಸರ್ಕಾರದ ಮಾರ್ಗಸೂಚಿಯಂತೆ ವಸತಿ ನಿಲಯಗಳಲ್ಲಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ವಿದ್ಯಾರ್ಥಿಗಳ ಸ್ವಾಗತಕ್ಕೆ ಸಿಬ್ಬಂದಿ ಸಿದ್ಧರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ 28 ವಿದ್ಯಾರ್ಥಿಗಳು ವಸತಿ ನಿಲಯಗಳಿಗೆಆಗಮಿಸಿದ್ದು, ಕೊರೊನಾ ಆತಂಕದಿಂದಾಗಿ ಹೆಚ್ಚಾಗಿವಿದ್ಯಾರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಹಂತ ಹಂತವಾಗಿವಿದ್ಯಾರ್ಥಿಗಳು ವಸತಿ ನಿಲಯಗಳತ್ತ ಮುಖ ಮಾಡುವ ನೀರಿಕ್ಷೆಯಿದೆ. – ಚೈತ್ರಾ, ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ
ಕೋವಿಡ್ ಆತಂಕದಿಂದ ಪಾಲಕರು ವಸತಿ ನಿಲಯಕ್ಕೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಕೋವಿಡ್ ಸ್ಥಿತಿಗತಿ ನೋಡಿಕೊಂಡು ಹಾಸ್ಟೆಲ್‌ಗೆ ಸೇರುವಂತೆ ಪಾಲಕರು ಹೇಳಿದ್ದಾರೆ. ಹೀಗಾಗಿ ಕೆಲವುದಿನಗಳ ನಂತರ ಹಾಸ್ಟೆಲ್‌ಗೆ ಸೇರಲು ಯೋಚಿಸುತ್ತಿದ್ದೇನೆ. –ಮಂಜುನಾಥ ನಾಯಕ, ವಿದ್ಯಾರ್ಥಿ
-ವೀರೇಶ ಮಡ್ಲೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ
Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.