ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ಮನವಿ
Team Udayavani, Jan 20, 2020, 4:05 PM IST
ಹಿರೇಕೆರೂರ: ರೈತರ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ 12 ಗಂಟೆ 3 ಫೇಸ್ ವಿದ್ಯುತ್‌ಪೂರೈಸಬೇಕು ಎಂದು ಉತ್ತರ ಕರ್ನಾಟಕ ರೈತ ಸಂಘದಿಂದ ಹುಬ್ಬಳ್ಳಿಯಲ್ಲಿಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ವಿಪರೀತ ಮಳೆಯಿಂದ ಮುಂಗಾರು ಹಂಗಾಮಿನಲ್ಲಿ ರೈತರ ಬೆಳೆ ಹಾನಿಯಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಭಾರಿ ಮಳೆಯಿಂದ ಕೊಳವೆಬಾವಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.ಬೇಸಿಗೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಿದರೆ ರೈತರಿಗೆಅನುಕೂಲವಾಗುತ್ತದೆ. ಆದ್ದರಿಂದ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿ 12 ಗಂಟೆ 3 ಫೇಸ್ ವಿದ್ಯುತ್ ಪೂರೈಸಬೇಕು. ಹಿರೇಕೆರೂರ-ರಟ್ಟಿಹಳ್ಳಿ ತಾಲೂಕುಗಳಲ್ಲಿ ಇರುವ 33 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರಗಳ ಸಾಮರ್ಥ್ಯವನ್ನು 110 ಕೆ.ವಿ.ಗೆ ಹೆಚ್ಚಿಸಬೇಕು ಎಂದು ಉತ್ತರ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಶೇಖರ ದೂದೀಹಳ್ಳಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲನಗೌಡ ಸೊರಟೂರ, ಈರಪ್ಪಮಳವಳ್ಳಿ, ವಿಜಯಕುಮಾರ ಕೋಣನತಲೆ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.