ಕಂಪನಿಯಿಂದ ರೈತರಿಗೆ ಸೂಕ್ತ ಪರಿಹಾರ: ಸಚಿವ ಬೊಮ್ಮಾಯಿ
Team Udayavani, Jun 15, 2020, 2:59 PM IST
ಶಿಗ್ಗಾವಿ: ಕಡಿಮೆ ಮೊಳಕೆ ಅಂಶವಿರುವ ಕಳಪೆ ಸೋಯಾಬಿನ್ ಬಿತ್ತನೆ ಮಾಡಿದ ರೈತರಿಗೆ ಕಂಪನಿಯಿಂದ ಖರ್ಚು ವೆಚ್ಚ ಕೊಡಿಸಿ ಪರಿಹಾರ ಕಲ್ಪಿಸಲಾಗುವುದು. ಈ ಕುರಿತು ಕೃಷಿ ಸಚಿವ ಬಿ.ಸಿ. ಪಾಟೀಲ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಹಿರಿಯ ಕೃಷಿ ಅಧಿಕಾರಿಗಳ ಸಭೆ ನಡೆಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಪಟ್ಟಣದ ಶಾಸಕರ ನಿವಾಸದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಬಂಕಾಪುರ, ಶಿಗ್ಗಾವಿ ಭಾಗದ ರೈತರ ಜಮೀನು ಕ್ಷೇತ್ರದ ಮಾಹಿತಿ ಪಡೆಯಲಾಗಿದೆ. ಇದುವರೆಗೂ ಜಿಲ್ಲೆಯಲ್ಲಿ 24 ಜನರಲ್ಲಿ ಕೋವಿಡ್ ಸೋಕಿನ ಪ್ರಕರಣ ಬೆಳಕಿಗೆ ಬಂದಿದ್ದು, 21 ಜನರು ಗುಣಮುಖರಾಗಿದ್ದಾರೆ. ಇನ್ನೂ ಮೂವರ ಆರೋಗ್ಯ ಸುಧಾರಿಸುವ ಲಕ್ಷಣಗಳಿವೆ. ಜಿಲ್ಲೆಯ ಕೇಂದ್ರ ಸ್ಥಾನದಲ್ಲಿ ಕೋವಿಡ್ ಪರೀಕ್ಷೆ ಲ್ಯಾಬ್ ಹಾಗೂ ತೀವ್ರ ನಿಗಾ ಘಟಕ ಸೋಮವಾರ ಆರಂಭವಾಗಲಿದೆ. ಕ್ಷೇತ್ರದ ಸವಣೂರು ಹಾಗೂ ಶಿಗ್ಗಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಕ್ರಮವಾಗಿ 30 ಹಾಗೂ 8 ವಿಶೇಷ ಬೆಡ್ ವ್ಯವಸ್ಥೆ, ಆಕ್ಷಿಜನ್ ಪೂರೈಕೆ ವಿಶೇಷತೆಯ ಕೋಣೆಯ ವ್ಯವಸ್ಥೆ ನೀಡಲಾಗುವುದು ಎಂದ ಅವರು, ಸಾರ್ವಜನಿಕರು ನಿರ್ಲಕ್ಷವಹಿಸದೇ ಅದಷ್ಟು ರಕ್ಷಾ ಮುಖ ಕವಚ ಹೊಂದಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.
ಮುಂದಿನ ವಾರದಲ್ಲಿ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಹಾಗೂ ಕಂದಾಯ ಸಚಿವ ಆರ್. ಅಶೋಕ ತಾಲೂಕಿಗೆ ಆಗಮಿಸಲಿದ್ದು, 19 ಕೋಟಿ ವೆಚ್ಚದಲ್ಲಿ ಮೊರಾರ್ಜಿ ವಸತಿ ಶಾಲೆ ಕಟ್ಟಡ ಹಾಗೂ 10 ಕೋಟಿ ವೆಚ್ಚದ ಹಳೆ ತಹಶೀಲ್ದಾರ್ ಕಚೇರಿ ಆವರಣದಲ್ಲಿ ವಿವಿಧ ಇಲಾಖೆಗಳ ನೂತನ ಸಂಕೀರ್ಣ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.