ತಹಶೀಲ್ದಾರ್‌ಗೆ ರಾಜ್ಯ ರತ್ನ ಪ್ರಶಸ್ತಿ ಪ್ರದಾನ
Team Udayavani, Oct 9, 2019, 1:51 PM IST
ಅಕ್ಕಿಆಲೂರು: ಗಿರಿಸಿನಕೊಪ್ಪ ಗ್ರಾಮದ ಖ್ಯಾತ ರಂಗಭೂಮಿ ಕಲಾವಿದ 77ರ ಹರೆಯದ ಅನಂತಪ್ಪ ತಿಮ್ಮಪ್ಪ ತಹಶೀಲ್ದಾರ್ ಅವರಿಗೆ ಲಕ್ಷ್ಮೇಶ್ವರದ ನೀಲಪ್ಪ ಗುಡ್ಡಪ್ಪ ಶಿರಹಟ್ಟಿ ಸೇವಾ ಸಂಸ್ಥೆಯ ವತಿಯಿಂದ ನೀಡಲಾಗುವ ಪ್ರತಿಷ್ಠಿತ ರಾಜ್ಯ ರತ್ನ ಪ್ರಶಸ್ತಿ ಲಭಿಸಿದೆ. ಹಲವಾರು ದಶಕಗಳಿಂದ ಅನಂತಪ್ಪ ತಹಶೀಲ್ದಾರ್ ರಂಗಭೂಮಿ ಕಲಾ ಸೇವೆಯ ಮೂಲಕ ಗುರುತಿಸಿಕೊಂಡು ಜಾನಪದ ಕಲೆಗಳ ಉಳಿವಿಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದರ ಪ್ರಯುಕ್ತ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಅನಂತಪ್ಪನವರು ಕಳೆದ 6 ದಶಕಗಳಿಂದ ದೊಡ್ಡಾಟ, ಸಣ್ಣಾಟ, ಪಾರಿಜಾತ ಕಲೆ, ಪೌರಾಣಿಕ ಕಲೆ, ಹಲವಾರು ಸಾಮಾಜಿಕ ನಾಟಕಗಳ ನಿರ್ದೇಶನ ಸೇರಿದಂತೆ ಹಾರ್ಮೋನಿಯಂ ವಾದನದ ಮೂಲಕ ಕಲೆಯ ಆರಾಧಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಚಿಕ್ಕವಯಸ್ಸಿನಲ್ಲಿಯೇ ಕಲೆಯ ನಂಟನ್ನು ಬೆಳೆಸಿಕೊಂಡಿದ್ದ ಅವರು, 300ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿ ಯಶಸ್ಸು ಕಂಡಿದ್ದಾರೆ.
ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಿರಿಯ ಪತ್ರಕರ್ತ, ಸಾಹಿತಿ ರಮಜಾನ್ ದರ್ಗಾ, ಮಾಜಿ ಸಂಸದ ಐ.ಜಿ.ಸನದಿ, ಕರಿಯಪ್ಪ ಶಿರಹಟ್ಟಿ, ಸಾಹಿತಿ ಬಿ.ಶ್ರೀನಿವಾಸ, ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಸಿದ್ದಣ್ಣನವರ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.