ಸೀಲ್ಡೌನ್ ಪ್ರದೇಶಕ್ಕೆ ತಹಶೀಲ್ದಾರ್ ಭೇಟಿ
Team Udayavani, Jul 8, 2020, 4:57 PM IST
ಬಂಕಾಪುರ: ಸಮಿಪದ ನಾರಾಯಣಪುರ ಗ್ರಾಮದ ಮಹಿಳೆಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪ್ರಕಾಶ ಕುದರಿ ಸೀಲ್ಡೌನ್ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಕೋವಿಡ್ ಸೋಂಕಿತಳ ನಿವಾಸದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ಕಂಟೇನ್ಮೆಂಟ್ ಜೋನ್ ಆಗಿ ಪರಿವರ್ತಿ ಸಲಾಗುವುದು. 300 ಮೀಟರ್ ಪ್ರದೇಶವನ್ನು ಬಫರ್ ಜೋನ್ ಆಗಿ ಪರಿವರ್ತಿಸಲಾಗುವುದು. ಕಂಟೇನ್ಮೆಂಟ್ ಜೋನ್ ಜನರಿಗೆ ಅವಶ್ಯಕ ವಸ್ತುಗಳ ಪೂರೈಕೆಗೆ, ಜನರ ಆರೋಗ್ಯ ತಪಾಸಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಸಾರ್ವಜನಿಕರು ಕೋವಿಡ್ ವೈರಸ್ ತಡೆಗಟ್ಟಲು ಸರಕಾರದ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದರು.
ತಾಪಂ ಇಒ ಪ್ರಶಾಂತ ತುರಕಾಣಿ, ಪಿಎಸ್ಐ ಸಂತೋಷಗೌಡ ಪಾಟೀಲ, ಕಂದಾಯ ಅಧಿಕಾರಿ ಆರ್.ಎಂ. ನಾಯಕ, ಜಿಪ ಮಾಜಿ ಸದಸ್ಯ ಶಶಿಧರ ಹೊನ್ನಣ್ಣವರ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.