ಸೋಲಾರ್‌ನಲ್ಲಿ ತಂತ್ರಜ್ಞಾನ ಅಭಿವೃದ್ಧಿ ಅಗತ್ಯ

ಇಂಧನ ಆಧಾರಿತ ಸಾಮಾಜಿಕ ಅಭಿವೃದ್ಧಿ ಕಾರ್ಯಾಗಾರ

Team Udayavani, Apr 28, 2022, 2:24 PM IST

14

ಹಾವೇರಿ: ಸೋಲಾರ್‌ ಶಕ್ತಿ ಉತ್ಪಾದನೆಯಲ್ಲಿ ನೂತನ ತಂತ್ರಜ್ಞಾನಗಳು ಅಭಿವೃದ್ಧಿಗೊಳ್ಳಬೇಕು. ಗ್ರಾಮೀಣ ಭಾಗದ ಜನರು ಸೋಲಾರ್‌ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡು ಉದ್ಯೋಗದಲ್ಲಿ ಸ್ವಾವಲಂಬನೆ ಸಾಧಿಸಿ ಆರ್ಥಿಕವಾಗಿ ಸದೃಢರಾಗಬೇಕು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಸೆಲ್ಕೋ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ ವತಿಯಿಂದ ಬುಧವಾರ ಏರ್ಪಡಿಸಿದ್ದ ಇಂಧನ ಆಧಾರಿತ ಸಾಮಾಜಿಕ ಅಭಿವೃದ್ಧಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ಎಲ್ಲೆಡೆ ಸೋಲಾರ್‌ ತಂತ್ರಜ್ಞಾನ ಸಮೃದ್ಧವಾಗಿ ಬೆಳೆದಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಭಾಗದ ಜನರು ಸೋಲಾರ ಸೌಲಭ್ಯವನ್ನು ಪಡೆದುಕೊಳ್ಳಬೇಕು. ವಿದ್ಯುತ್‌ ನಿಂದ ಪರಿಸರಕ್ಕೆ ಹಾನಿಯುಂಟಾಗುತ್ತಿದ್ದು, ಸೌರ ಶಕ್ತಿಯನ್ನು ಬಳಸಿಕೊಂಡು ಸೋಲಾರ್‌ ಸೌಲಭ್ಯವನ್ನು ಪಡೆಯುವ ಮೂಲಕ ಪರಿಸರಕ್ಕೆ ಉಂಟಾಗುವ ಹಾನಿಯನ್ನು ತಪ್ಪಿಸಬೇಕಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಲಾರ್‌ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಸಂಪೂರ್ಣ ಸೋಲಾರ್‌ ಗ್ರಾಮಗಳನ್ನಾಗಿ ಮಾಡಬೇಕಾಗಿದೆ. ಮುಂಬರುವ ದಿನಗಳಲ್ಲಿ ಸೋಲಾರ್‌ ವಿದ್ಯುತ್‌ ದೀಪಗಳು ಗ್ರಾಮೀಣ ಜನರಿಗೆ ಸುಲಭವಾಗಿ ಸಿಗುವಂತಾಗಬೇಕು ಎಂದರು.

ಸೆಲ್ಕೋ ಸೋಲಾರ್‌ ಕಂಪನಿಯ ಉಪ ಮಹಾ ಪ್ರಬಂಧಕ ಪ್ರಸನ್ನ ಹೆಗಡೆ ಮಾತನಾಡಿ, ಇಂದಿನ ಆಧುನಿಕ ಜೀವನದಲ್ಲಿ ಸೌರಶಕ್ತಿ ಬೆಳಕಿಗಾಗಿ ಮಾತ್ರ ಉಳಿದಿಲ್ಲ, ಅದು ಬದುಕಿಗಾಗಿ ಅವಶ್ಯಕವಾಗಿದೆ. ಕಳೆದ 10 ವರ್ಷಗಳಿಂದ ಸೌರಶಕ್ತಿ ವಿವಿಧ ಉಪಕರಣಗಳು ಬದುಕಿಗೆ ಹೊಸ ಭರವಸೆ ನೀಡಿದ್ದು, ರಾಜ್ಯದ ಯಾದಗಿರಿ, ರಾಯಚೂರಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೌರಶಕ್ತಿ ಅಳವಡಿಸಲಾಗಿದೆ.

ಹಾವೇರಿ, ಕೊಪ್ಪಳ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಸುಮಾರು 500 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸೌರಶಕ್ತಿ ಆಧಾರಿತಗೊಳಿಸಲಾಗಿದೆ ಎಂದರು.

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿ ಸ್ವಾವಲಂಬಿ ಜೀವನ ನಡೆಸಲು ಸೌರಶಕ್ತಿ ಚಾಲಿತ ಮಂಡಕ್ಕಿ ಬಟ್ಟಿ, ರೊಟ್ಟಿ ಯಂತ್ರ, ಹೊಲಿಗೆ ಯಂತ್ರ, ಝರಾಕ್ಸ್‌ ಯಂತ್ರ, ಕಮ್ಮಾರಿಕೆ, ಆರೋಗ್ಯ ಕೇಂದ್ರ, ವಾಷಿಂಗ್‌ ಮಶೀನ್‌, ಹೈನುಗಾರಿಕೆ, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಬಹುತೇಕ ಎಲ್ಲ ವಲಯಗಳಲ್ಲಿ ಸೌರಶಕ್ತಿ ಬಳಸಿಕೊಂಡು ಕಿರು ಉದ್ಯಮ ಪ್ರಾರಂಭಿಸಿ ಬಹಳಷ್ಟು ಜನರು ಯಶಸ್ಸು ಕಂಡಿದ್ದಾರೆ ಎಂದರು.

ಸೌರ ಉದ್ಯಮಿ ತಿಳವಳ್ಳಿಯ ಶೀಲಾ ಕೊಟಗಿ ಮಾತನಾಡಿ, ಸೋಲಾರ್‌ ಆಧಾರಿತ ರೊಟ್ಟಿಯಂತ್ರ ಸ್ವಾವಲಂಬಿ ಬದುಕು ನೀಡುವ ಮೂಲಕ ಆರ್ಥಿಕ ಸದೃಢತೆ ಸಾಧಿಸಲು ಸಹಕಾರಿಯಾಗಿದೆ. ಮಹಿಳೆಯರು ವಿನಾಃಕಾರಣ ಸಮಯ ವ್ಯರ್ಥ ಮಾಡದೇ ಇಂತಹ ಯಂತ್ರಗಳನ್ನು ಬಳಸಿ ಉದ್ಯಮ ಆರಂಭಿಸಿದರೆ ಕುಟುಂಬ ನಿರ್ವಹಣೆಗೆ ಅನುಕೂಲವಾಗುತ್ತದೆ. ಮನೆಯಿಂದ ಹೊರಗಡೆ ಹೋಗಿ ದುಡಿಯಲು ಹಿಂಜರಿಯುವ ಮಹಿಳೆಯರು ಸೌರಶಕ್ತಿ ಆಧರಿತ ರೊಟ್ಟಿಯಂತ್ರ ಅಳವಡಿಸಿಕೊಂಡು ಉದ್ಯಮ ಆರಂಭಿಸಬಹುದು. ಕಡಿಮೆ ವೆಚ್ಚದಲ್ಲಿ ಅಧಿಕ ಲಾಭ ಗಳಿಸಲು ಸೌರಶಕ್ತಿ ಆಧಾರಿತ ರೊಟ್ಟಿ ಯಂತ್ರ ಸಹಕಾರಿಯಾಗಿದೆ ಎಂದರು.

ಕಾರ್ಯಾಗಾರದಲ್ಲಿ ಬೆಳಗಾವಿ ಕ್ಷೇತ್ರ ವ್ಯವಸ್ಥಾಪಕ ವಿನಾಯಕ ಹೆಗಡೆ ಸೆಲ್ಕೋ ಕಾರ್ಯ ವಿಧಾನ ಮತ್ತು ಉದ್ದೇಶಗಳ ಕುರಿತು, ಚಿತ್ರದುರ್ಗದ ವ್ಯವಸ್ಥಾಪಕ ಮಂಜುನಾಥ ಭಾಗವತ್‌ ಸೆಲ್ಕೋ ಮತ್ತು ಆರೋಗ್ಯ ಕುರಿತು, ಬೆಂಗಳೂರಿನ ಮುಖ್ಯ ವ್ಯವಸ್ಥಾಪಕ ಅಮೋಘ ಸೌರಶಕ್ತಿ ಆಧಾರಿತ ಜೀವನಾಧಾರ ವೃತ್ತಿ ಕುರಿತು ಉಪನ್ಯಾಸ ನೀಡಿದರು.

ಸಮಾರೋಪ: ಕಾರ್ಯಾ2ಗಾರದ ನಂತರ ಜರುಗಿದ ಸಮಾರೋಪ ಸಮಾರಂಭದಲ್ಲಿ ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ ಮಾತನಾಡಿ, ನೈಸರ್ಗಿಕ ಇಂಧನ ಮೂಲಗಳ ಸಂಶೋಧನೆ ಹಾಗೂ ಬಳಕೆ ಜಾಗೃತಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸೆಲ್ಕೋ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದರು. ರಾಣೆಬೆನ್ನೂರ ನೀಡ್ಸ್‌ ಕಾರ್ಯನಿರ್ವಹಣಾಧಿಕಾರಿ ಎ.ಎಫ್‌. ಅಕ್ಕಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಲ್ಲಿಕಾರ್ಜು ಮಠದ, ಕರಿಸ್ವಾಮಿ ಕೆ., ರಘು ಜಾವಳಗಿ, ಗಿರೀಶ ಕುಮಾರ, ಸೇರಿದಂತೆ ವಿವಿಧ ಸೆಲ್ಕೋ ಶಾಖೆಗಳ ವ್ಯವಸ್ಥಾಪಕರು ಪಾಲ್ಗೊಂಡಿದ್ದರು.

ಸೌರ ಉದ್ಯಮಿಗಳ ಭೇಟಿ: ಕಾರ್ಯಾಗಾರಕ್ಕೂ ಮುನ್ನದಿನ ಜಿಲ್ಲೆಯ ವಿವಿಧಡೆ ಸಂಚರಿಸಿ ಸೆಲ್ಕೋ ಸೋಲಾರ್‌ ಚಾಲಿತ ಯಂತ್ರಗಳನ್ನು ಬಳಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಂಡಿರುವ ಸೌರ ಉದ್ಯಮಿಗಳನ್ನು ಭೇಟಿ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಡಕ್ಕಿ ಬಟ್ಟಿ, ರೊಟ್ಟಿ ಯಂತ್ರ, ಝರಾಕ್ಸ್‌ ಅಂಗಡಿಗಳ ಉದ್ಯಮಿಗಳು ಸೆಲ್ಕೋ ಸೋಲಾರ್‌ ಚಾಲಿತ ಉಪಕರಣಗಳ ಬಳಕೆಯಿಂದ ಆಗುತ್ತಿರುವ ಪ್ರಯೋಜನಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಟಾಪ್ ನ್ಯೂಸ್

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

ಆಗಿನದ್ದು ಅಸಲಿ, ಈಗಿನದ್ದು ನಕಲಿ ಕಾಂಗ್ರೆಸ್‌: ಬಸವರಾಜ ಬೊಮ್ಮಾಯಿ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: ನಿರ್ವಹಣೆ ಇಲ್ಲದೇ ನೀರಿನ ಘಟಕ ಬಂದ್‌-ಸವಾಲಾದ ಶುದ್ಧ ನೀರು ಪೂರೈಕೆ…

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

10-bantwala

Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.