ಮಕ್ಕಳಿಗೆ ಸಾವಿತ್ರಿಬಾಯಿ ಸಾಧನೆ ತಿಳಿಸಿ
Team Udayavani, Mar 8, 2021, 5:31 PM IST
ಹಿರೇಕೆರೂರ: ಸಾವಿತ್ರಿಬಾಯಿ ಪುಲೆ ಅವರು ಮಹಿಳೆಯರಿಗೂನಾಯಕತ್ವದ ಗುಣವಿದೆ ಎಂಬುದನ್ನು ತೋರಿಸಿಕೊಟ್ಟು, ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸಮಾನತೆ ಹಕ್ಕು ದೊರಕಿಸಿಕೊಡಲು ಹೋರಾಡಿದವರು ಎಂದು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಡಾ|ಲತಾ ಎಸ್. ಮುಳ್ಳೂರ ಹೇಳಿದರು.
ಪಟ್ಟಣದ ಗುರು ಭವನದಲ್ಲಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ತಾಲೂಕು ಘಟಕ ಉದ್ಘಾಟನೆ, ಪದಾಧಿ ಕಾರಿಗಳ ಪದಗ್ರಹಣ ಹಾಗೂ ಸನ್ಮಾನ ಸಮಾರಂಭಉದ್ಘಾಟಿಸಿ ಅವರು ಮಾತನಾಡಿದರು. ಅಂದು ಅನಿಷ್ಠ ಪದ್ಧತಿಗಳಾದ ಬಾಲ್ಯ ವಿವಾಹ, ಸತಿ ಸಹಗಮನ ಪದ್ಧತಿ ವಿರುದ್ಧ ಹೋರಾಟ ಮಾಡಿಮಹಿಳೆಯರಿಗಾಗಿ ಪ್ರಥಮವಾಗಿ ಶಾಲೆ, ಅಬಲಾಶ್ರಮ ಸ್ಥಾಪನೆ ಮಾಡಿದ ಕೀರ್ತಿಗೆ ಸಾವಿತ್ರಿಬಾಯಿಗೆ ಸಲ್ಲುತ್ತದೆ. ಶಿಕ್ಷಕಿಯರು ಸಾವಿತ್ರಿಬಾಯಿ ಪುಲೆ ಅವರ ಸಾಧನೆ ಮತ್ತು ಸಾಮಾಜಿಕ ಕಾಳಜಿಯನ್ನು ಮಕ್ಕಳಿಗೆ ತಿಳಿಸಬೇಕು. ಶಿಕ್ಷಕಿಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಂಘಟಿತರಾಗಬೇಕು ಎಂದು ಹೇಳಿದರು.
ಪ್ರಥಮ ದರ್ಜೆ ಗುತ್ತಿಗೆದಾರ ಜಿ.ಪಿ.ಪ್ರಕಾಶಗೌಡ ಅವರು ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರಮತ್ತು ಗೌರವ ಧನ ನೀಡಿ ಮಾತನಾಡಿ, ಉತ್ತಮ ಶಿಕ್ಷಣ ದೊರೆತರೆ ತಮ್ಮ ಜೀವನರೂಪಿಸಿಕೊಳ್ಳುವ ಜತೆಗೆ ಕುಟುಂಬದಲ್ಲಿನೆಮ್ಮದಿ ಕಾಣಲು ಸಾಧ್ಯ ಎಂದರು.
ಸಂಘದ ತಾಲೂಕು ಘಟಕದ ಅಧ್ಯಕ್ಷೆ ಚಂದ್ರಲೇಖ ನಂದೆಣ್ಣನವರ ಅಧ್ಯಕ್ಷತೆವಹಿಸಿದ್ದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಗುರುಶಾಂತ ಯತ್ತಿನಹಳ್ಳಿ, ತಾಲೂಕು ಪಂಚಾಯಿತಿ ಅಧ್ಯಕ್ಷ ರಾಜು ಬಣಕಾರ,ಜಿಲ್ಲಾ ಪಂಚಾಯಿತಿ ಸದಸ್ಯರಾದ ಎನ್. ಎಂ.ಈಟೇರ, ಸುಮಿತ್ರಾ ಪಾಟೀಲ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷೆ ಸುಧಾಚಿಂದಿ, ಸದಸ್ಯ ಮಹೇಂದ್ರ ಬಡಳ್ಳಿ, ಕೆಸಿಸಿ ಬ್ಯಾಂಕ ನಿರ್ದೇಶಕ ಲಿಂಗರಾಜ ಚಪ್ಪರದಹಳ್ಳಿ,ಕ್ಷೇತ್ರ ಶಿಕ್ಷಣಾಧಿ ಕಾರಿ ಎಲ್.ಸಿದ್ದಲಿಂಗಪ್ಪ, ಪಿ.ಬಿ.ನಿಂಗನಗೌಡ್ರ,ಜಗದೀಶ ಬಳಿಗಾರ, ಮಾರುತೆಪ್ಪ ಕೆ.ಎಚ್., ಎಂ.ಬಿ.ಮಕಾನದಾರ, ಜ್ಯೋತಿ ಎಚ್., ಶಮಾ ಪಾಟೀಲ, ಸಂಧ್ಯಾರಾಣಿ ದೇಶಪಾಂಡೆ, ರಾಜಶ್ರೀ ಸಜ್ಜೆಶ್ವರ, ಎಸ್.ವಿ.ಅತ್ತಿಕಟ್ಟಿ, ಜ್ಯೋತಿ ಹೊಸಗೌಡ್ರ, ಕುಮಾರ ನಾಯ್ಕರ, ಕುಮಾರ ಮಡಿವಾಳರ ಸೇರಿದಂತೆ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ತಾಲೂಕು ಘಟಕ ಪದಾಧಿಕಾರಿಗಳು ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.