ಬಿಎಸ್‌ವೈ ತಂತ್ರಕ್ಕೆ ಸಿದ್ದು ಪಡೆ ಅತಂತ್ರ


Team Udayavani, May 25, 2019, 12:39 PM IST

hav-2

ಹಾವೇರಿ: “ರಾಜಕೀಯ ಪಕ್ಷಗಳ ಪ್ರತಿಷ್ಠೆಯ ಕಣವಾಗಿದ್ದ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಭಾರೀ ಪ್ರಚಾರ ನಡೆಸಿದ್ದರು. ಇವರಿಬ್ಬರಲ್ಲಿ ಯಡಿಯೂರಪ್ಪ ಅವರ ಶ್ರಮ ಗೆಲುವಿನೊಂದಿಗೆ ಸಾರ್ಥಕತೆ ಪಡೆದುಕೊಂಡರೆ, ಸಿದ್ದರಾಮಯ್ಯ ಅವರ ಶ್ರಮ ಸೋಲು ಕಂಡಿದೆ’. ಇದು ಹಾವೇರಿ ಲೋಕಸಭೆ ಕ್ಷೇತ್ರದ ಜನತೆಯ ವಿಶ್ಲೇಷಣೆ.

ಚುನಾವಣಾ ಪ್ರಚಾರಕ್ಕಾಗಿ ಮೂರ್‍ನಾಲ್ಕು ಬಾರಿ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂದಿದ್ದರು. ಅಭ್ಯರ್ಥಿಗಳ ತುರುಸಿನ ಸ್ಪರ್ಧೆ ಜೊತೆಗೆ ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ಅವರ ಪ್ರತಿಷ್ಠೆಗೂ ಕ್ಷೇತ್ರ ಇಂಬು ನೀಡಿತ್ತು. ಇಬ್ಬರೂ ನಾಯಕರು ತಮ್ಮ ಅಭ್ಯರ್ಥಿ ಪರವಾಗಿ ಅಬ್ಬರದ ಪ್ರಚಾರ ಮಾಡಿದ್ದರು. ಇಬ್ಬರೂ ಪರಸ್ಪರ ವಾಕ್ಸಮರ ನಡೆಸಿದ್ದರು. ಇವರಿಬ್ಬರ ರಾಜಕೀಯವನ್ನು ಅವಲೋಕಿಸಿ ಮತದಾರರು ಶಿವಕುಮಾರ ಉದಾಸಿಯವರನ್ನು ಬೆಂಬಲಿಸುವ ಮೂಲಕ ಯಡಿಯೂರಪ್ಪ ಅವರ ಕೈ ಬಲಪಡಿಸಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡ ಸಿ.ಎಂ. ಉದಾಸಿ ಹಾಗೂ ಅವರ ಪುತ್ರ ಶಿವಕುಮಾರ ಉದಾಸಿಯವರು ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತರಾಗಿದ್ದು ಈ ಆತ್ಮೀಯತೆಯ ಕಾರಣದಿಂದಾಗಿಯೇ ಯಡಿಯೂರಪ್ಪ ಹಾವೇರಿ ಕ್ಷೇತ್ರದಲ್ಲಿ ಹೆಚ್ಚು ಓಡಾಡಿ ಶಿವಕುಮಾರ ಉದಾಸಿ ಪರ ಪ್ರಚಾರ ಮಾಡಿದ್ದರು. ಅವರ ಜತೆಗೆ ಜಗದೀಶ ಶೆಟ್ಟರ್‌, ಬಸವರಾಜ ಬೊಮ್ಮಾಯಿ ಕೈಜೋಡಿಸಿದ್ದರು.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಿ.ಆರ್‌. ಪಾಟೀಲ ಪರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಕ್ಷೇತ್ರದಲ್ಲಿ ಎರಡೂಮೂರು ಬಾರಿ ಬಂದು ಪ್ರಚಾರ ನಡೆಸಿದ್ದರು. ಕ್ಷೇತ್ರಕ್ಕೆ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಸಹ ಬಂದಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಎಲ್ಲ ರಾಜ್ಯ ನಾಯಕರು ಆಗಮಿಸಿದ್ದರು. ಈ ಎಲ್ಲ ನಾಯಕರ ಪ್ರಚಾರಕ್ಕೆ ಕಿವಿಗೊಡದ ಮತದಾರರು ಕ್ಷೇತ್ರದಲ್ಲಿ ಕಮಲ ಅರಳುವಂತೆ ಮಾಡಿದ್ದಾರೆ.

ತಾರಾ ಪ್ರಚಾರಕರು: ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಶ್ರುತಿ, ಮಾಳವಿಕಾ ಪ್ರಚಾರ ಮಾಡಿದ್ದರು. ಕಾಂಗ್ರೆಸ್‌ ಪರ ನಟ ಮುಖ್ಯಮಂತ್ರಿ ಚಂದ್ರು ಮತ ಪ್ರಚಾರ ಮಾಡಿದ್ದರು. ಆದರೆ, ಕ್ಷೇತ್ರದ ಮತದಾರರು ಮುಖ್ಯಮಂತ್ರಿ ಚಂದ್ರು ಅವರ ಮಾತಿಗೆ ಮರುಳಾಗದೇ ಮೋದಿ ಅಲೆಯಲ್ಲಿ ತೇಲಿ ಹೋದರು.

ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು, ತಾರಾ ಪ್ರಚಾರದ ಜೊತೆಗೆ ಬಿಜೆಪಿಗೆ ಬಹುದೊಡ್ಡ ಪ್ರಮಾಣದಲ್ಲಿ ಲಾಭ ತಂದುಕೊಟ್ಟಿದ್ದು ಮೋದಿ ಅಲೆ. ಅದರಲ್ಲಿಯೂ ಮೋದಿ ಸರ್ಕಾರದ ಅವಧಿಯಲ್ಲಿ ನಡೆದ ಸರ್ಜಿಕಲ್‌ ಸ್ಟ್ರೆ „ಕ್‌ ಮತದಾರರನ್ನು ಹೆಚ್ಚು ಸೆಳೆಯಿತು.

ಉಪ್ಪಿಗೆ ಸಿಕ್ಕಿಲ್ಲ ಮನ್ನಡೆ
ಉತ್ತಮ ಪ್ರಜಾಕೀಯ ಪಕ್ಷದ ಪರ ಪ್ರಚಾರಕ್ಕಾಗಿ ರಿಯಲ್ ಸ್ಟಾರ್‌ ಉಪೇಂದ್ರ ಒಂದು ದಿನ ಕ್ಷೇತ್ರಕ್ಕೆ ಬಂದಿದ್ದರು. ತಮ್ಮ ಅಭ್ಯರ್ಥಿಪರ ಮಾಧ್ಯಮಗೋಷ್ಠಿಯ ಮೂಲಕ ಪ್ರಚಾರ ನಡೆಸಿದ್ದರು. ಆದರೆ, ಕ್ಷೇತ್ರದ ಮತದಾರ ನಟ ಉಪೇಂದ್ರ ಅವರ ಮಾತಿನ ಮೋಡಿಗೆ ಮರುಳಾಗದೆ ಮೋದಿ ಅಲೆಯಲ್ಲಿ ತೇಲಿಹೋದರು. ಪಕ್ಷದ ಅಭ್ಯರ್ಥಿ ಈಶ್ವರ ಪಾಟೀಲ ಕೇವಲ 7024 ಮತಗಳಿಗೆ ತೃಪ್ತಿಪಡಬೇಕಾಯಿತು.

„ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.