ನೈಸರ್ಗಿಕ ಜಲ ಸಂರಕ್ಷಣೆ ಕಾಮಗಾರಿಗೆ ಮೊದಲ ಆದ್ಯತೆ
ಹೆಚ್ಚು ಜನರಿಗೆ ಉದ್ಯೋಗ ನೀಡುವುದು ಯೋಜನೆ ಗುರಿ
Team Udayavani, May 31, 2019, 12:03 PM IST
ಹಾವೇರಿ: ನೆಲೊಗಲ್ಲ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆಯುತ್ತಿರುವ ಕಚ್ಚಾ ಕಾಲುವೆ ಕಾಮಗಾರಿಯನ್ನು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಅನ್ನಪೂರ್ಣ ಮುದುಕಮ್ಮನವರ ವೀಕ್ಷಿಸಿದರು.
ಹಾವೇರಿ: ನೆಲೊಗಲ್ಲ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದಲ್ಲಿ ಕೈಗೊಂಡ ಕಚ್ಚಾ ಕಾಲುವೆ ಕಾಮಗಾರಿಯನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನ್ನಪೂರ್ಣ ಮುದುಕಮ್ಮನವರ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅನ್ನಪೂರ್ಣ ಮುದುಕಮ್ಮನವರ, ಗ್ರಾಮೀಣ ಪ್ರದೇಶದಲ್ಲಿ ಜನ ಉದ್ಯೊಗ ಅರಸಿ ವಲಸೆ ಹೋಗುವುದನ್ನು ತಪ್ಪಿಸುವ ಮೂಲಕ ತಾಲೂಕಿನಲ್ಲಿ ನೀರಿನ ಮೂಲಗಳನ್ನು ಉಳಿಸಿಕೊಳ್ಳಲು ಕೆರೆ-ಕಟ್ಟೆಗಳನ್ನು ಅಭಿವೃದ್ಧಿಪಡಿಸಿ ನೀರು ನಿಲ್ಲುವಂತೆ ಮಾಡುವುದು ಅತೀ ಅವಶ್ಯಕವಾಗಿದೆ. ಹೀಗಾಗಿ ಈ ವರ್ಷ ತಾಲೂಕಿನಲ್ಲಿ ನೈಸರ್ಗಿಕ ಜಲ ಸಂರಕ್ಷಣೆ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಲು ನಿರ್ಧರಿಸಲಾಗಿದೆ. ಇದರಿಂದ ಜಲಮೂಲಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಹೆಚ್ಚು ಜನರಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ ಎಂದರು.
ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ದೊರೆಯುವಂತೆ ಮಾಡಲು ತಾಲೂಕು ಪಂಚಾಯಿತಿ ಬದ್ಧವಾಗಿದ್ದು, ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಸಾಮೂಹಿಕವಾಗಿ ಹೆಚ್ಚು ಕೂಲಿಕಾರರು ಪಾಲ್ಗೊಳ್ಳುವಂತಹ ಕಾಮಗಾರಿಗಳನ್ನು ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಈಗಾಗಲೇ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕೆರೆಗಳ ಹೂಳೆತ್ತುವುದು, ಗೋ ಕಟ್ಟೆಗಳ ಅಭಿವೃದ್ಧಿ, ಕೃಷಿ ಹೊಂಡ, ಬದು ನಿರ್ಮಾಣ, ಕಲ್ಯಾಣಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದರು.
ತಾಲೂಕಿನಲ್ಲಿ ಈ ವರ್ಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಬಳಸಿಕೊಂಡು ನೈಸರ್ಗಿಕ ಜಲ ಸಂರಕ್ಷಣೆ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ಕೆರೆ-ಕಟ್ಟೆಗಳ ಅಭಿವೃದ್ಧಿಗೆ ತಾಪಂ ಮುಂದಾಗಿದೆ. ತಾಲೂಕು ಪದೇ ಪದೆ ಬರ ಪರಿಸ್ಥಿತಿ ಎದುರಿಸುತ್ತಿದ್ದು ಜನ, ಜನಾವಾರುಗಳು ವರ್ಷದಿಂದ ವರ್ಷಕ್ಕೆ ಸಂಕಷ್ಟಕ್ಕೆ ಸಿಲುಕುತ್ತಿವೆ. ಜಲದ ಮೂಲಗಳು ಕಡಿಯಾಗುತ್ತಿದ್ದು ಕೆರೆ, ಕಟ್ಟೆಗಳಿಗೆ ಹರಿದು ಬರುವ ನೀರಿನ ಮಾರ್ಗಗಳು ಕಾಲುವೆಗಳ ಹೂಳು ಹಾಗೂ ಗಿಡ ಗಂಟೆಗಳಿಂದ ಮುಚ್ಚಿ ಹೋಗಿವೆ. ಇದರಿಂದಾಗಿ ಕೆರೆ-ಕಟ್ಟೆಗಳಲ್ಲಿ ನೀರು ಕಾಣದಾಗಿ ಅಂತರ್ಜಲಮಟ್ಟ ಪಾತಾಳಕ್ಕೆ ಕುಸಿಯುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ರೋಜಗಾರ ದಿನ ಆಚರಿಸಿ ಕೂಲಿಕಾರರಿಗೆ ಉದ್ಯೋಗಚೀಟಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಹಿತಿ ಶಿಕ್ಷಣ ಸಂವಹನ ಅಧಿಕಾರಿ ಗಿರೀಶ ಬೆನ್ನೂರ, ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಲಕ್ಷ ್ಮವ್ವ ಯರೇಶಿಮಿ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ
Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.