ಜನರ ಮೆಚ್ಚುಗೆಗೆ ಪಾತ್ರವಾಗಿದೆ ಗೃಹರಕ್ಷಕರ ಸೇವೆ
ನಿಸ್ವಾರ್ಥ ಸೇವೆ ನಿರ್ವಹಿಸುತ್ತಿರುವ ಗೃಹರಕ್ಷಕದಳದ ಕಾರ್ಯ ಶ್ಲಾಘನೀಯ ಎಂದು ಬಣ್ಣಿಸಿದರು.
Team Udayavani, Nov 25, 2021, 6:21 PM IST
ಹಾವೇರಿ: ಸಮಾಜದಲ್ಲಿ ಶಾಂತಿ ಸ್ಥಾಪನೆ, ಕಾನೂನು ರಕ್ಷಣೆ, ನಾಗರಿಕರ ನೆಮ್ಮದಿಯ ಹಿನ್ನೆಲೆಯಲ್ಲಿ ಗೃಹರಕ್ಷಕರ ಸೇವೆ ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಠರು ಹಾಗೂ ಹೆಚ್ಚುವರಿ ಪೊಲೀಸ್ ಅಧಿಧೀಕ್ಷಕರಾದ ವಿಜಯಕುಮಾರ ಸಂತೋಷ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಗೃಹರಕ್ಷಕರ ವೃತ್ತಿಪರ ಹಾಗೂ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಶಿಸ್ತಿನ ಶಿಪಾಯಿಯಂತೆ ಕರ್ತವ್ಯಗಳನ್ನು ನಿರ್ವಹಿಸಬೇಕು. ಇದರಿಂದ ಎಲ್ಲ ಗೃಹರಕ್ಷಕರಿಗೆ ಇನ್ನೂ ಹೆಚ್ಚಿನ ಕರ್ತವ್ಯಗಳು ಮತ್ತು ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದರು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|ಪಿ. ಆರ್.ಹಾವನೂರ ಅವರು, ಸಮಾಜದಲ್ಲಿ ಯಾವುದೇ ಪ್ರತಿಫಲ ಅಪೇಕ್ಷಿಸದೇ ನಿಸ್ವಾರ್ಥ ಸೇವೆ ನಿರ್ವಹಿಸುತ್ತಿರುವ ಗೃಹರಕ್ಷಕದಳದ ಕಾರ್ಯ ಶ್ಲಾಘನೀಯ
ಎಂದು ಬಣ್ಣಿಸಿದರು.
ಗೃಹರಕ್ಷಕದಳ ಇಲಾಖೆ 1962ರಲ್ಲಿ ಉದಯವಾಗಿ ಇಂದಿನವರೆಗೂ ಪೊಲೀಸ್ ಇಲಾಖೆಯೊಂದಿಗೆ ಸೇರಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಕೋವಿಡ್-19ರ ಸಮಯದಲ್ಲಿ ಗೃಹರಕ್ಷಕರು ಉತ್ತಮ ಸೇವೆ ಸಲ್ಲಿಸಿದ್ದಾರೆ. ಜಿಲ್ಲಾ ಕಾರಾಗೃಹ, ಜಿಲ್ಲಾ ಆಡಳಿತ ಭವನ, ಪ್ರಾದೇಶಿಕ ಸಾರಿಗೆ ಕಚೇರಿ, ಮರಳು ಗಣಿಗಾರಿಕೆ ಮತ್ತು ನ್ಯಾಯಾಲಯಗಳಲ್ಲಿ ಸಹ ಗೃಹರಕ್ಷಕರು ಉತ್ತಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಕ್ರೀಡಾಕೂಟ ದಲ್ಲಿ ಭಾಗವಹಿಸಿದ್ದ ಗೃಹರಕ್ಷಕರಿಗೆ ಕ್ರೀಡಾಕೂಟದ ಪ್ರಮಾಣ ವಚನ ಬೋಧಿಸಲಾಯಿತು ಹಾಗೂ ಕ್ರೀಡಾ ಕೂಟದಲ್ಲಿ ವಿಜೇತರಾದವರಿಗೆ ಬಹು ಮಾನ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಗೃಹರಕ್ಷಕದಳ ಬ್ಯಾಡಗಿ ಘಟಕದ ಘಟಕಾಧಿಕಾರಿ ಎಂ.ಟಿ. ನಾಯಕ್, ಅಕ್ಕಿಆಲೂರ ಘಟಕಾಧಿಕಾರಿ ಸಿ.ಎಸ್. ಬೆಲ್ಲದ, ಎಲ್ಲಾ ಘಟಕದ ಘಟಕಾಧಿಕಾರಿಗಳು ಹಾಗೂ ಗೃಹರಕ್ಷಕರು, ಗೃಹರಕ್ಷಕಿಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.