‘ಅವ್ವ’ ಶಿಶುಪಾಲನಾ ಕೇಂದ್ರ ಉದ್ಘಾಟನೆ

ಸರ್ಕಾರಿ ಮಹಿಳಾ ನೌಕರರ ಮಕ್ಕಳ ಪಾಲನೆ

Team Udayavani, May 17, 2022, 2:50 PM IST

19

ಹಾವೇರಿ: ಜಿಲ್ಲಾಡಳಿತ ಹಾಗೂ ಜಿಪಂ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರ ಮಕ್ಕಳ (5 ವರ್ಷದೊಳಗಿನ) ಆರೈಕೆಗೆ ಜಿಪಂ ಕಟ್ಟಡದಲ್ಲಿ ಆರಂಭಿಸಲಾದ “ಅವ್ವ’ ಶಿಶು ಪಾಲನಾ ಕೇಂದ್ರವನ್ನು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೋಮವಾರ ಉದ್ಘಾಟಿಸಿದರು.

ಪಾಲನಾ ಕೇಂದ್ರದಲ್ಲಿ ಇರಿಸಲಾದ ಮಕ್ಕಳ ತೊಟ್ಟಿಲಿನಲ್ಲಿ ನೌಕರರ ಶಿಶುವೊಂದನ್ನು ಮಲಗಿಸಿದರು. ಕಚೇರಿ ಕೆಲಸದ ಸಮಯದಲ್ಲಿ ಮನೆಯಲ್ಲಿ 0-5 ವರ್ಷದೊಳಗಿನ ಮಕ್ಕಳನ್ನು ನೋಡಿಕೊಳ್ಳಲು ವ್ಯವಸ್ಥೆ ಇಲ್ಲದ ಕಾಯಂ ಹಾಗೂ ಹೊರಗುತ್ತಿಗೆ ಮಹಿಳಾ ನೌಕರರು ತಮ್ಮ ಮಕ್ಕಳನ್ನು “ಅವ್ವ’ ಶಿಶುಪಾಲನಾ ಕೇಂದ್ರದಲ್ಲಿ ಬಿಡಬಹುದು.

ಬೆಳಗ್ಗೆ 10ರಿಂದ ಸಂಜೆ 5:30ರ ವರೆಗೆ ಮಕ್ಕಳ ಆರೈಕೆಗೆ ಆಯಾಗಳನ್ನು ನೇಮಕ ಮಾಡಲಾಗಿದೆ. ಅರ್ಹ ಮಕ್ಕಳಿಗೆ ಪ್ರಾಥಮಿಕ ಪೂರ್ವ ಶಿಕ್ಷಣ ನೀಡಲು ಶಿಕ್ಷಕರನ್ನು ಸಹ ನೇಮಕ ಮಾಡಲಾಗಿದೆ. ಜೊತೆಗೆ ಮಕ್ಕಳಿಗೆ ಅಲ್ಪೋಹಾರ ವ್ಯವಸ್ಥೆ ಮಾಡಲಾಗಿದೆ. ಮಕ್ಕಳ ಆಟೋಟಕ್ಕೆ ಶಿಶುಪಾಲನಾ ಕೇಂದ್ರದಲ್ಲಿ ಆಟಿಕೆಗಳು, ತೊಟ್ಟಿಲು, ಆಕರ್ಷಕ ಗೋಡೆ ಬರಹ, ತೊಟ್ಟಿ, ಅಕ್ಷರ ಪಟ, ಚಿಕ್ಕ ಕುರ್ಚಿಗಳು ಸೇರಿದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಮಾತನಾಡಿ, ಈ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಡಳಿತ ಹಾಗೂ ಜಿಪಂನಲ್ಲಿ ಎರಡು ಕೇಂದ್ರ ಆರಂಭಿಸಲು ಅವಕಾಶವಿದ್ದು, ಜಿಲ್ಲಾಡಳಿತ ಹಾಗೂ ಜಿಪಂ ಎರಡು ಒಂದೇ ಆವರಣದಲ್ಲಿರುವುದರಿಂದ ಜಿಲ್ಲಾ ಕೇಂದ್ರದಲ್ಲಿ ಪ್ರಥಮವಾಗಿ ಆರಂಭವಾಗಿದೆ. ಈ ಕೇಂದ್ರದಲ್ಲಿ ಆರಂಭಿಕವಾಗಿ ಎಂಟು ಮಕ್ಕಳು ದಾಖಲಾಗಿದ್ದಾರೆ ಎಂದರು.

ಹೆಚ್ಚು ಮಹಿಳಾ ಕಾರ್ಮಿಕರು ಕೆಲಸ ಮಾಡುವ ರಾಣಿಬೆನ್ನೂರಲ್ಲಿ ಹಾಗೂ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ತಲಾ ಒಂದು “ಅವ್ವ’ ಶಿಶುಪಾಲನಾ ಕೇಂದ್ರಗಳನ್ನು ಶೀಘ್ರವಾಗಿ ಆರಂಭಿಸಲಾಗುವುದು. ಹೆಚ್ಚು ಮಹಿಳಾ ಕಾರ್ಮಿಕರು ಹೊಂದಿರುವ ತಾಲೂಕಾ ಕೇಂದ್ರಗಳಲ್ಲಿ “ಅವ್ವ’ ಶಿಶುಪಾಲನಾ ಕೇಂದ್ರ ತೆರೆಯಲಾಗುವುದು ಎಂದು ಹೇಳಿದರು. ಜಿಪಂ ಸಿಇಒ ಮಹಮ್ಮದ ರೋಷನ್‌, ಅಬಕಾರಿ ಇಲಾಖೆ ಉಪ ಆಯುಕ್ತರಾದ ಶೈಲಜಾ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಅಮೃತಗೌಡ ಪಾಟೀಲ, ಸ್ವಾದಾರ ಕೇಂದ್ರದ ಪರಿಮಳಾ ಜೈನ್‌ ಇನ್ನಿತರರಿದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.