Haveri: ಮಕ್ಕಳ ಬೆಳವಣಿಗೆಯಲ್ಲಿ ತಾಯಂದಿರ ಪಾತ್ರ ಮಹತ್ವದ್ದು-ಡಾ| ಶಿವಲಿಂಗಪ್ಪ
ಮಕ್ಕಳಲ್ಲಿ ಕಾರ್ಯಕ್ಷಮತೆ ಮತ್ತು ಸಕಾರಾತ್ಮಕ ಮನೋಭಾವವನ್ನು ಉತ್ತೇಜಿಸಲಾಗುತ್ತದೆ
Team Udayavani, Dec 14, 2023, 5:51 PM IST
ಹಾವೇರಿ: ಆಧುನಿಕ ಜಗತ್ತು ಇಂದು ಅತ್ಯಂತ ಸ್ಪರ್ಧಾತ್ಮಕವಾಗಿದೆ. ಇಂತಹ ಸಂದರ್ಭದಲ್ಲಿ ಶಿಕ್ಷಣ ಅತೀ ಪ್ರಮುಖವಾಗಿದ್ದು, ಮಕ್ಕಳು ಸರ್ವತೋಮುಖ ಅಭಿವೃದ್ಧಿಯಾಗಿ, ಅವರಲ್ಲಿ ಆಂತರಿಕ ಮತ್ತು ಬಹಿರಂಗ ಸಮಾಜಮುಖಿ ವ್ಯಕ್ತಿತ್ವದ ಬೆಳವಣಿಗೆಗೆ ತಾಯಂದಿರ ಪಾತ್ರ ಅತೀ ಮಹತ್ವದ್ದಾಗಿದೆ ಎಂದು ವೈದ್ಯ ಡಾ| ಶಿವಲಿಂಗಪ್ಪ ಬೆನ್ನೂರ ಹೇಳಿದರು.
ನಗರದ ಹುಕ್ಕೇರಿಮಠ ಶಿವಬಸವೇಶ್ವರ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹಾಗೂ ತಾಯಂದಿರ ಸಭೆ ಉದ್ಘಾಟಿಸಿ ಮಾತನಾಡಿದರು.
ಮಗುವಿನ ಶಿಕ್ಷಣ ಪ್ರಾರಂಭವಾಗುವುದು ಮನೆಯಲ್ಲಿಯೇ. ಮಕ್ಕಳು, ಸ್ವಭಾವ, ಅಭ್ಯಾಸ, ಶಿಸ್ತು, ಹೊಣೆಗಾರಿಕೆ ಮುಂತಾದ ಮೌಲ್ಯಗಳನ್ನು ನಮ್ಮನ್ನು ನೋಡಿಯೇ ಅನುಕರಿಸುತ್ತಾರೆಯೇ ಹೊರತು ಬೋಧನೆಯಿಂದಲ್ಲ ಎಂಬುದನ್ನು ಪೋಷಕರು ಅರ್ಥ ಮಾಡಿಕೊಳ್ಳಬೇಕು. ಅವರಿಗೆ ಬೆಂಬಲ, ಕಲಿಯಲು ಉತ್ತಮ ವಾತಾವರಣ ಕಲ್ಪಿಸಿದಾಗ ಕಲಿತ ಶಾಲೆ, ಪಾಲಕರಿಗೆ ಹೆಸರು
ತರುತ್ತಾರೆ ಹಾಗೂ ಉತ್ತಮ ಪ್ರಜೆಯಾಗುತ್ತಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕಿ ಚನ್ನಮ್ಮ ಅಂತರವಳ್ಳಿ ಮಾತನಾಡಿ, ಈ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಹೊಸ ವಿಧಾನದಲ್ಲಿ ನಡೆಯುತ್ತದೆ. ಪರೀಕ್ಷೆಯನ್ನು ವಿದ್ಯಾರ್ಥಿ ಸ್ನೇಹಿಯಾಗಿ ಮಾರ್ಪಡಿಸಿದ್ದು, 3 ಪರೀಕ್ಷೆಗಳಲ್ಲಿ ಉತ್ತಮ ಅಂಕಗಳ ಅಧಾರದ ಸರಾಸರಿ ಅಂಕಗಳನ್ನು ನೀಡಲಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಕಾರ್ಯಕ್ಷಮತೆ ಮತ್ತು ಸಕಾರಾತ್ಮಕ ಮನೋಭಾವವನ್ನು ಉತ್ತೇಜಿಸಲಾಗುತ್ತದೆ ಎಂದು ಹೇಳಿದರು.
ಕಲಿಕೆ ಒಂದು ನಿರಂತರ ಪ್ರಕ್ರಿಯೆಯಾಗಿದ್ದು, ಶಿಕ್ಷಕರೊಂದಿಗೆ ಪಾಲಕರು ಕೈಜೋಡಿಸಿದಾಗ ಮಕ್ಕಳಲ್ಲಿ ಉತ್ತಮ ಕೌಶಲಗಳನ್ನು ಬೆಳೆಸಲು ಸಾಧ್ಯ. ಕೇವಲ ಅಂಕಗಳನ್ನು ಗಳಿಸುವುದಷ್ಟೇ ಅಲ್ಲದೇ, ಅದರಾಚೆಗೆ ಜೀವನದಲ್ಲಿ ಯಶಸ್ಸು ಗಳಿಸಲು ಅಗತ್ಯ ಅರಿವು ಮತ್ತು ಸಾಮಾಜಿಕ ಕೌಶಲ್ಯಗಳನ್ನು ಗಳಿಸುವಂತೆ ಮಾಡುವ ಸಾಮೂಹಿಕ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಪಾಲಕರು ತಮ್ಮ ಅಭಿಪ್ರಾಯ ಹಂಚಿಕೊಂಡರು. ಎಸ್.ಎನ್. ಮಳೆಪ್ಪನವರ, ವಿ.ಬಿ. ಬನ್ನಿಹಳ್ಳಿ, ಶೋಭಾ ನಾಶೀಪುರ, ರೂಪಾ ಟಿ.ಆರ್., ರವಿ ಕರಲಿಂಗಣ್ಣನವರ, ಆನಂದ ಎಂ., ಎಂ.ಎಸ್ .ಹಿರೇಮಠ, ಬಸವರಾಜ ಅಕ್ಕಿ, ಚಂದ್ರಪ್ಪ ಅಂಗಡಿ, ಪ್ರಕಾಶ ಕುಡತರಕರ್, ನಾಗರತ್ನಾ ಕಟಗಿ, ಸವಿತಾ ಪಂಪಣ್ಣನವರ, ನಗೀನಾಭಾನು ಕರ್ಜಗಿ ಇತರರು ಇದ್ದರು. ಸಹನಾ ಪ್ರಾರ್ಥಿಸಿದರು. ಎಚ್.ಕೆ.ಆಡಿನ ಸ್ವಾಗತಿಸಿ, ಎಸ್.ಸಿ.ಮರಳಿಹಳ್ಳಿ ನಿರೂಪಿಸಿ, ಲೀಲಾವತಿ ಅಂದಾನಿಮಠ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹೆಬ್ಬಾಗಿಲಿನಲ್ಲಿ ಆರಂಭವಾದ ಶಾಲೆ ಇಂದು ಈ ಊರ ಮಕ್ಕಳ ಪಾಲಿನ ಶಿಕ್ಷಣದ ಹೆಬ್ಬಾಗಿಲೇ ಆಗಿದೆ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.